ಚೆಸ್‌ನಲ್ಲಿ ಮಿಂಚುತ್ತಿರುವ ತಮಿಳುನಾಡಿನ ಯುವಕ ಪ್ರಜ್ಞಾನಂದ ಬಗ್ಗೆ ನಿಮಗೆಷ್ಟು ಗೊತ್ತು?

Date:

ಅಝರ್ ಬೈಜಾನ್‌ನ ಬಾಕುವಿನಲ್ಲಿ ನಡೆಯುತ್ತಿರುವ ಫಿಡೇ ವಿಶ್ವಕಪ್ ಚೆಸ್ ಪಂದ್ಯಾವಳಿಯಲ್ಲಿ ಭಾರತದ ಗ್ರ್ಯಾಂಡ್ ಮಾಸ್ಟರ್ ಆರ್. ಪ್ರಜ್ಞಾನಂದ ಫೈನಲ್ ಪ್ರವೇಶಿಸಿದ್ದಾರೆ.

ಫಿಡೆ ಚೆಸ್‌ ವಿಶ್ವಕಪ್‌ನಲ್ಲಿ ಎರಡು ದಶಕಗಳ ಬಳಿಕ ಸೆಮಿಫೈನಲ್‌ ಪ್ರವೇಶಿಸಿ ಇತಿಹಾಸ ಸೃಷ್ಟಿಸಿದ ಭಾರತೀಯ ಎಂಬ ಹೆಗ್ಗಳಿಕೆಗೆ ಆರ್‌.ಪ್ರಜ್ಞಾನಂದ ಪಾತ್ರರಾಗಿದ್ದಾರೆ.

ಕ್ಯಾಂಡಿಡೇಟ್ಸ್ ಪಂದ್ಯಾವಳಿಯಲ್ಲಿ ಐದು ಬಾರಿಯ ವಿಶ್ವ ಚಾಂಪಿಯನ್ ವಿಶ್ವನಾಥನ್ ಆನಂದ್ ಬಳಿಕ ಸೆಮಿಫೈನಲ್​ಗೆ​ ಪ್ರವೇಶಿಸಿದ ಮೊದಲ ಭಾರತೀಯ ಚೆಸ್ ಪಟು ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದ 18 ವರ್ಷದ ಆರ್. ಪ್ರಜ್ಞಾನಂದ ಇದೀಗ ಫೈನಲ್​ಗೆ ಪ್ರವೇಶಿಸಿದ ಹಿರಿಮೆಗೂ ಪಾತ್ರರಾಗಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಮೂಲಕ ಗ್ರ್ಯಾಂಡ್ ಮಾಸ್ಟರ್ ವಿಶ್ವನಾಥನ್ ಆನಂದ್ ಬಳಿಕ ಈ ಸಾಧನೆ ಮಾಡಿದ 2ನೇ ಭಾರತೀಯ ಆಗಿದ್ದಾರೆ. ಪ್ರಜ್ಞಾನಂದ ಅವರ ಈ ಸಾಧನೆಯನ್ನು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಪ್ರಮುಖರು ಅಭಿನಂದನೆ ಸಲ್ಲಿಸಿದ್ದಾರೆ.

ದೇಶದ ಹಿರಿಯ ರಾಜಕೀಯ ಮುಖಂಡರ ಸಹಿತ ಹಲವು ಮಂದಿ ಸೋಷಿಯಲ್ ಮೀಡಿಯಾಗಳಲ್ಲಿ ಪ್ರಶಸ್ತಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.

ಇಂದು ನಡೆಯಲಿರುವ ಫೈನಲ್ ಪಂದ್ಯದಲ್ಲಿ ಪ್ರಜ್ಞಾನಂದ ಅವರು ಐದು ಬಾರಿ ಪ್ರಶಸ್ತಿ ವಿಜೇತ ವಿಶ್ವ ನಂಬರ್ 1 ನಾರ್ವೆಯ ಮ್ಯಾಗ್ನಸ್ ಕಾರ್ಲ್‌ಸೆನ್ ಅವರನ್ನು ಎದುರಿಸಲಿದ್ದಾರೆ. ಪ್ರಶಸ್ತಿ ಗೆದ್ದರೆ ಇತಿಹಾಸ ನಿರ್ಮಿಸಲಿದ್ದಾರೆ.

ಚೆಸ್​ ವಿಶ್ವಕಪ್ ಫೈನಲ್ ಪಂದ್ಯವು ಅಝರ್ ಬೈಜಾನ್‌ನ ಸ್ಥಳೀಯ ಕಾಲಮಾನದ ಪ್ರಕಾರ ಬೆಳಗ್ಗೆ 7 ಗಂಟೆಗೆ ಆರಂಭವಾಗಲಿದೆ. ಭಾರತೀಯ ಕಾಲಮಾನದ ಪ್ರಕಾರ ಸಂಜೆ 4:30ಕ್ಕೆ ಆರಂಭವಾಗಲಿದೆ.

ಯಾರು ಈ ಪ್ರಜ್ಞಾನಂದ?
ಮೂಲತಃ ತಮಿಳುನಾಡಿನ ಚೆನ್ನೈ ಮೂಲದವರಾದ ಐದು ಬಾರಿ ವಿಶ್ವ ಚಾಂಪಿಯನ್ ಆರ್. ಪ್ರಜ್ಞಾನಂದ, ಆಗಸ್ಟ್ 10, 2005ರಲ್ಲಿ ಜನಿಸಿದರು.

ಈತನ ತಂದೆ ರಮೇಶ್ ಬಾಬು ಹಾಗೂ ತಾಯಿ ನಾಗಲಕ್ಷ್ಮಿ. ರಮೇಶ್ ಬಾಬು ಅವರು ತಮಿಳುನಾಡು ಅಪೆಕ್ಸ್ ಕೋ ಆಪರೇಟಿವ್ ಬ್ಯಾಂಕ್‌ನಲ್ಲಿ ಶಾಖಾ ವ್ಯವಸ್ಥಾಪಕರಾಗಿ ಕೆಲಸ ಮಾಡುತ್ತಿದ್ದಾರೆ ಮತ್ತು ತಾಯಿ ಗೃಹಿಣಿ. ಈತನ ಅಕ್ಕನ ಹೆಸರು ವೈಶಾಲಿ.

ಸದ್ಯ ಪ್ರಜ್ಞಾನಂದ ಅವರ ಕೋಚ್ ರಮೇಶ್ ಆರ್.​ಬಿ. ಇವರು ಕೂಡ 2007ರಲ್ಲಿ ಕಾಮನ್‌ವೆಲ್ತ್ ಚಾಂಪಿಯನ್‌ಶಿಪ್ ಗೆದ್ದ ಚೆನ್ನೈನ ಭಾರತೀಯ ಚೆಸ್ ಗ್ರ್ಯಾಂಡ್‌ ಮಾಸ್ಟರ್.

ಬಾಲ್ಯದಲ್ಲಿ ಪ್ರಜ್ಞಾನಂದ ಅವರು ತನ್ನ ಸಹೋದರಿ ವೈಶಾಲಿ ಜೊತೆಗೆ ಟಿವಿ ಕಾರ್ಟೂನ್​ ಅನ್ನು ಹೆಚ್ಚಾಗಿ ವೀಕ್ಷಿಸುತ್ತಿದ್ದರಂತೆ. ಇದರಿಂದ ಚಿಂತೆಗೀಡಾಗಿದ್ದ ಪೋಷಕರು ಚೆಸ್ ಬೋರ್ಡ್‌ ಅನ್ನು ಖರೀದಿಸಿ, ತಂದುಕೊಟ್ಟಿದ್ದರು. ಆ ಬಳಿಕ ಈತನಿಗೆ ಚೆಸ್‌ನಲ್ಲಿ ಆಸಕ್ತಿ ಹುಟ್ಟಿಕೊಂಡಿತ್ತು.

ಪ್ರಜ್ಞಾನಂದ, 2016ರಲ್ಲಿ 10 ವರ್ಷ, 10 ತಿಂಗಳುಗಳು ಮತ್ತು 19 ದಿನಗಳ ವಯಸ್ಸಿನಲ್ಲಿ ಕಿರಿಯ ಅಂತಾರಾಷ್ಟ್ರೀಯ ಮಾಸ್ಟರ್ ಆಗುವ ಮೂಲಕ ವಿಶ್ವಮಟ್ಟದಲ್ಲಿ ದಾಖಲೆಯನ್ನು ನಿರ್ಮಿಸಿದ ಕೀರ್ತಿ ಹೊಂದಿದ್ದಾನೆ.

ಆರ್ ಪ್ರಜ್ಞಾನಂದ ಅವರಿಗೆ ಈಗ ಕೇವಲ 18 ವರ್ಷ. ಪ್ರಜ್ಞಾನಂದ 2013ರಲ್ಲಿ ವಿಶ್ವ ಯೂತ್ ಚೆಸ್ ಚಾಂಪಿಯನ್‌ಶಿಪ್ ಅಂಡರ್-8ನಲ್ಲಿ ಪ್ರಶಸ್ತಿಯನ್ನು ಗೆದ್ದಿದ್ದಾರೆ. 7 ನೇ ವಯಸ್ಸಿನಲ್ಲಿ ಫಿಡೆ ಮಾಸ್ಟರ್ ಮತ್ತು 2015ರಲ್ಲಿ 10 ವರ್ಷದೊಳಗಿನ ಪ್ರಶಸ್ತಿಯನ್ನು ಗಳಿಸಿದ್ದಾರೆ.

ಪ್ರಜ್ಞಾನಂದ ಅವರಿಗೆ ರಾಮ್ಕೊ ಸಿಮೆಂಟ್ ಕಂಪನಿ ಮತ್ತು ಇಂಡಿಯನ್ ಆಯಿಲ್ ಸಂಸ್ಥೆ ಪ್ರಾಯೋಜಕರಾಗಿದ್ದಾರೆ.

ಫೈನಲ್ ಪಂದ್ಯದ ನೇರಪ್ರಸಾರ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಮೇರಿ ಕೋಮ್ ರಾಜೀನಾಮೆ

ಮುಂಬರುವ ಪ್ಯಾರಿಸ್ ಒಲಿಂಪಿಕ್ಸ್‌ನ ಭಾರತದ ಮುಖ್ಯಸ್ಥ ಸ್ಥಾನಕ್ಕೆ ಒಲಿಂಪಿಕ್ ಪದಕ ವಿಜೇತೆ...

ಐಪಿಎಲ್ 2024 | ಮುಂಬೈಗೆ ಭರ್ಜರಿ ಗೆಲುವು; ಆರ್‌ಸಿಬಿಗೆ 5ನೇ ಸೋಲು

ಮುಂಬೈ ಇಂಡಿಯನ್ಸ್ ತಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ 7 ವಿಕೆಟ್​ಗಳ...

ಪಾಂಡ್ಯ ಸಹೋದರರಿಗೆ ಕೋಟ್ಯಂತರ ರೂ. ವಂಚನೆ: ಮಲ ಸಹೋದರನ ಬಂಧನ

ಟೀಂ ಇಂಡಿಯಾ ಕ್ರಿಕೆಟಿಗರಾದ ಹಾರ್ದಿಕ್ ಪಾಂಡ್ಯ ಹಾಗೂ ಕೃನಾಲ್‌ ಪಾಂಡ್ಯಾ ಅವರಿಗೆ...

ಐಪಿಎಲ್ 2024 | ಕೊಹ್ಲಿ ದಾಖಲೆ ಮುರಿದ ಗಿಲ್; ಬಟ್ಲರ್ ಹಿಂದಿಕ್ಕಿದ ಸ್ಯಾಮ್ಸನ್

ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್) ಟೂರ್ನಿಯ ನಿನ್ನೆ(ಏ.10) ರಾಜಸ್ಥಾನ್ ರಾಯಲ್ಸ್ ವಿರುದ್ಧ...