ಐರ್ಲೆಂಡ್ ವಿರುದ್ಧದ ಮೊದಲ ಟಿ20: ಯುವ ಪ್ರತಿಭೆ ವೈಭವ್‌ಗೆ ಅವಕಾಶ ಕೈತಪ್ಪಿದ್ದೇಕೆ?

Date:

ಬೆಲ್ಫಾಸ್ಟ್‌ನ ಸ್ಟಾರ್ಮಾಂಟ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಅಥಿತೇಯ ಐರ್ಲೆಂಡ್ ಮತ್ತು ಭಾರತ ನಡುವಿನ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆದರೆ, ಈ ಪಂದ್ಯದ ಆರಂಭಕ್ಕೂ ಮುನ್ನ ಕ್ರಿಕೆಟ್ ಅಭಿಮಾನಿಗಳಲ್ಲಿ ಅತಿ ಹೆಚ್ಚು ಕುತೂಹಲ ಮೂಡಿಸಿದ್ದ 15 ವರ್ಷದ ಯುವ ಆಟಗಾರ ವೈಭವ್ ಸೂರ್ಯವಂಶಿ ಅವರ ಪದಾರ್ಪಣೆಯ ನಿರೀಕ್ಷೆ ಸದ್ಯಕ್ಕೆ ಹುಸಿಯಾಗಿದೆ.

- Advertisement -

ಇತ್ತೀಚೆಗಷ್ಟೇ ಮುಕ್ತಾಯಗೊಂಡ 2026ರ ಐಪಿಎಲ್ ಟೂರ್ನಿಯಲ್ಲಿ 776 ರನ್ ಸಿಡಿಸಿ ಅಬ್ಬರಿಸಿದ್ದ ವೈಭವ್, ಈ ಸರಣಿಯ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಹೆಜ್ಜೆಹಾಕಲಿದ್ದಾರೆಂದೇ ನಿರೀಕ್ಷಿಸಲಾಗಿತ್ತು. ಒಂದು ವೇಳೆ ಅವರು ಈ ಪಂದ್ಯದಲ್ಲಿ ಕಣಕ್ಕಿಳಿದಿದ್ದರೆ, ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ 37 ವರ್ಷಗಳ ಹಿಂದಿನ ದಾಖಲೆಯನ್ನು ಮುರಿದು, ಭಾರತದ ಪರ ಪದಾರ್ಪಣೆ ಮಾಡಿದ ಅತ್ಯಂತ ಕಿರಿಯ ಆಟಗಾರ ಎಂಬ ಐತಿಹಾಸಿಕ ಸಾಧನೆಗೆ ಭಾಜನರಾಗುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಆದರೆ, ಟಾಸ್ ವೇಳೆ ಮಾತನಾಡಿದ ಭಾರತ ತಂಡದ ನಾಯಕ ಶ್ರೇಯಸ್ ಅಯ್ಯರ್, ವೈಭವ್ ಅವರನ್ನು ಆಡುವ ಬಳಗದಿಂದ ಕೈಬಿಟ್ಟಿರುವ ಹಿಂದಿನ ನೈಜ ಕಾರಣವನ್ನು ಬಿಚ್ಚಿಟ್ಟಿದ್ದಾರೆ. “ವೈಭವ್ ಅದ್ಭುತ ಆಟಗಾರ ಎಂಬುದರಲ್ಲಿ ಎರಡು ಮಾತಿಲ್ಲ. ಆದರೆ ದುರದೃಷ್ಟವಶಾತ್ ಅವರಿಗೆ ಇಂದು ಅವಕಾಶ ಸಿಗುತ್ತಿಲ್ಲ. ಕಳೆದ ಕೆಲವು ಸರಣಿಗಳಲ್ಲಿ ಭಾರತದ ಪರ ಅತ್ಯುತ್ತಮ ಪ್ರದರ್ಶನ ನೀಡಿದ ಅಪಾರ ಅನುಭವವಿರುವ ಆಟಗಾರರಿಗೆ ನಾವು ಮೊದಲ ಆದ್ಯತೆ ನೀಡುತ್ತಿದ್ದೇವೆ” ಎಂದು ಶ್ರೇಯಸ್ ಸ್ಪಷ್ಟಪಡಿಸಿದ್ದಾರೆ.

ಇದನ್ನು ಓದಿದ್ದೀರಾ? ಜಗತ್ತೇ ಸಂಭ್ರಮಿಸುವ ಫಿಫಾ ವಿಶ್ವಕಪ್: ಭಾರತದ ತಂಡ ಯಾಕೆ ಆಡುತ್ತಿಲ್ಲ?

ತಂಡದ ಸಂಯೋಜನೆಯ ಕುರಿತು ವಿವರಿಸಿದ ನಾಯಕ ಶ್ರೇಯಸ್, ಪ್ರಸ್ತುತ ಪರಿಸ್ಥಿತಿಯಲ್ಲಿ ತಂಡದ ಆಧಾರಸ್ತಂಭಗಳಾಗಿರುವ ಹಿರಿಯ ಆಟಗಾರರನ್ನು ಬೆಂಬಲಿಸುವುದು ಮುಖ್ಯ ಎಂದರು. “ಸದ್ಯ ನಾವು ಮೂವರು ಪರಿಣತ ವೇಗದ ಬೌಲರ್‌ಗಳು, ಓರ್ವ ಆಲ್‌ರೌಂಡರ್ ಹಾಗೂ ಇಬ್ಬರು ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯಲು ನಿರ್ಧರಿಸಿದ್ದೇವೆ. ಹೀಗಾಗಿ, ವೈಭವ್ ತಮಗೆ ಅವಕಾಶ ಸಿಗುವವರೆಗೂ ಕೊಂಚ ಕಾಯಬೇಕಿದೆ” ಎಂದು ಅಯ್ಯರ್ ತಿಳಿಸಿದ್ದಾರೆ.

ವಿಶ್ವಕಪ್ ವಿಜೇತ ತಂಡದ ಸದಸ್ಯರು ಹಾಗೂ ಸತತವಾಗಿ ಉತ್ತಮ ಫಾರ್ಮ್‌ನಲ್ಲಿರುವ ಆಟಗಾರರ ಸ್ಥಾನವನ್ನು ಕಸಿದುಕೊಂಡು ಯುವ ಆಟಗಾರನಿಗೆ ದಿಢೀರ್ ಮಣೆಹಾಕುವುದು ಸದ್ಯದ ಮಟ್ಟಿಗೆ ಸೂಕ್ತವಲ್ಲ ಎಂಬುದು ತಂಡದ ಆಡಳಿತ ಮಂಡಳಿಯ ಸ್ಪಷ್ಟ ನಿಲುವಾಗಿದೆ. ಯೋಗ್ಯತೆ ಮತ್ತು ನಿರಂತರ ಪ್ರದರ್ಶನದ ಆಧಾರದ ಮೇಲೆ ಹಿರಿಯರನ್ನು ಬೆಂಬಲಿಸುವ ನಾಯಕ ಶ್ರೇಯಸ್ ಅಯ್ಯರ್ ಹಾಗೂ ತಂಡದ ಈ ನಿರ್ಧಾರವನ್ನು ಕ್ರಿಕೆಟ್ ವಲಯದಲ್ಲಿ ವ್ಯಾಪಕವಾಗಿ ಶ್ಲಾಘಿಸಲಾಗಿದೆ.

ಹೀಗಾಗಿ, ಐರ್ಲೆಂಡ್ ವಿರುದ್ಧದ ಮೊದಲ ಪಂದ್ಯಕ್ಕೆ ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ಶ್ರೇಯಸ್ ಅಯ್ಯರ್ (ನಾಯಕ), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಮತ್ತು ಪ್ರಸಿದ್ಧ್ ಕೃಷ್ಣ ಅವರನ್ನು ಒಳಗೊಂಡ ಬಲಿಷ್ಠ ಪಡೆಯನ್ನು ಕಣಕ್ಕಿಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ನೀರಾವರಿ ಯೋಜನೆಗಳಿಗೆ ಕೇಂದ್ರದ ನೆರವು ಕೋರಿದ ಸಿಎಂ ಡಿಕೆ ಶಿವಕುಮಾರ್

ರಾಜ್ಯದ ಕುಡಿಯುವ ನೀರು, ನೀರಾವರಿ ಹಾಗೂ ಬರ ಪರಿಹಾರದ ಅಗತ್ಯಗಳನ್ನು ಈಡೇರಿಸಲು...

ಸಿಇಸಿ ಗ್ಯಾನೇಶ್‌ ಕುಮಾರ್‌ ಮನೆ ಮುಂದೆ ಕಾಂಗ್ರೆಸ್‌ ಪ್ರತಿಭಟನೆ; ‘ಗದ್ದಾರ್‌ ಗ್ಯಾನೇಶ್‌’ ಎಂದು ಗೋಡೆಗೆ ಬಣ್ಣ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ಅವರ ಆಗ್ರಾದ ವಿಜಯನಗರದಲ್ಲಿರುವ...

AAP ದೇಣಿಗೆಯಲ್ಲಿ ಶೇ.68 ಕುಸಿತ; ಇತರೆ ಪ್ರಾದೇಶಿಕ ಪಕ್ಷಗಳ ದೇಣಿಗೆಯಲ್ಲೂ ಭಾರೀ ಇಳಿಕೆ

ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ...