WPL ಫೈನಲ್ | 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತ ಆರ್‌ಸಿಬಿ ಬೌಲರ್ ಸೋಫಿ ಮೋಲಿನೆಕ್ಸ್‌

Date:

ಮಹಿಳಾ ಪ್ರೀಮಿಯರ್ ಲೀಗ್(WPL 2024) ಎರಡನೇ ಆವೃತ್ತಿಯ ಫೈನಲ್ ಪಂದ್ಯ ಇಂದು ದೆಹಲಿಯ ಅರುಣ್ ಜೇಟ್ಲಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಆರ್‌ಸಿಬಿ ಹಾಗೂ ದೆಹಲಿ ತಂಡದ ನಡುವೆ ನಡೆಯುತ್ತಿದೆ.

ಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಡೆಲ್ಲಿ, ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಆರ್​ಸಿಬಿ ಆರಂಭದಲ್ಲಿ ಬೌಲಿಂಗ್‌ನಲ್ಲಿ ವಿಫಲವಾಯಿತಾದರೂ, ಎಂಟನೇ ಓವರ್ ಎಸೆದ ಆರ್‌ಸಿಬಿ ಬೌಲರ್ ಸೋಫಿ ಮೋಲಿನೆಕ್ಸ್‌, 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತು ಮಿಂಚಿದ್ದಾರೆ.

ಮೋಲಿನೆಕ್ಸ್‌ ಎಸೆದ ಎಂಟನೇ ಓವರ್‌ನ ಮೊದಲ ಎಸೆತದ ಎದುರಿಸಿದ ದೆಹಲಿ ತಂಡದ ಶಫಾಲಿ ವರ್ಮಾ ಅವರು ದೊಡ್ಡ ಹೊಡೆತಕ್ಕೆ ಯತ್ನಿಸಿ, ಕ್ಯಾಚಿತ್ತು ನಿರ್ಗಮಿಸಿದರು. ಆ ಬಳಿಕ ಕ್ರೀಸ್‌ಗೆ ಬಂದ ಜೆಮೀಮಾ ರೋಡ್ರಿಗಸ್ ತಾನೆದುರಿಸಿದ ಎರಡನೇ ಎಸೆತದಲ್ಲಿ ಕ್ಲೀನ್ ಬೌಲ್ಡ್ ಆದರು. ನಂತರ ಕ್ರೀಸ್‌ಗೆ ಬಂದ ಕ್ಯಾಪ್ಸೆ ಕೂಡ ಕ್ಲೀನ್ ಬೌಲ್ಡ್ ಆದರು. ಆ ಮೂಲಕ ಆರ್‌ಸಿಬಿ ಬೌಲರ್ ಮೋಲಿನೆಕ್ಸ್‌, 4 ಎಸೆತಗಳಲ್ಲಿ ಮೂರು ವಿಕೆಟ್ ಕಿತ್ತು ದೆಹಲಿ ತಂಡಕ್ಕೆ ಆಘಾತ ನೀಡಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

64 ರನ್‌ ವೇಳೆ ಶೂನ್ಯ ವಿಕೆಟ್ ಕಳೆದುಕೊಂಡಿದ್ದ ಡೆಲ್ಲಿ ತಂಡ, ಸದ್ಯ 15 ಓವರ್‌ಗಳು ಮುಕ್ತಾಯ ಕಂಡಿದ್ದು, 90 ರನ್‌ಗಳಿಗೆ 7 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ದೆಹಲಿ- ಆರ್‌ಸಿಬಿ ಮುಖಾಮುಖಿ

ಪಾಯಿಂಟ್ಸ್ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನ ಪಡೆದುಕೊಂಡಿದ್ದ ಡೆಲ್ಲಿ ಕ್ಯಾಪಿಟಲ್ಸ್ ನೇರವಾಗಿ ಫೈನಲ್ ಪ್ರವೇಶಿಸಿತ್ತು. ಇತ್ತ ಎಲಿಮಿನೇಟರ್​ ಪಂಡ್ಯ ಆಡಿದ್ದ ಬೆಂಗಳೂರು ತಂಡ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡವನ್ನು ಸೋಲಿಸಿ ಫೈನಲ್ ಪ್ರವೇಶಿಸಿತ್ತು.

ಡಬ್ಲ್ಯುಪಿಎಲ್ ಇತಿಹಾಸದಲ್ಲಿ ಬೆಂಗಳೂರು ಮತ್ತು ಡೆಲ್ಲಿ ಕ್ಯಾಪಿಟಲ್ಸ್ ನಾಲ್ಕು ಬಾರಿ ಮುಖಾಮುಖಿಯಾಗಿದ್ದು, ಈ ಮುಖಾಮುಖಿಯಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸಂಪೂರ್ಣ ಮೇಲುಗೈ ಸಾಧಿಸಿದೆ. ಅಂದರೆ ಆರ್​ಸಿಬಿ ತಂಡ ಡೆಲ್ಲಿ ವಿರುದ್ಧ ಒಂದೇ ಒಂದು ಪಂದ್ಯವನ್ನು ಗೆಲ್ಲಲು ಸಾಧ್ಯವಾಗಿಲ್ಲ. ಆರ್‌ಸಿಬಿ ಮೊದಲ ಬಾರಿಗೆ ಫೈನಲ್ ಪ್ರವೇಶಿಸಿದೆ.

2023ರ ಆವೃತ್ತಿಯಲ್ಲಿ ಮುಂಬೈ ಇಂಡಿಯನ್ಸ್ ತಂಡವು, ಡೆಲ್ಲಿ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಚಾಂಪಿಯನ್ ಆಗಿತ್ತು. ಫೈನಲ್ ಪಂದ್ಯದ ನೇರಪ್ರಸಾರವು ಜಿಯೋ ಸಿನಿಮಾ ಆ್ಯಪ್‌ನಲ್ಲಿ ಪ್ರಸಾರವಾಗುತ್ತಿದೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟಿ20 ವಿಶ್ವಕಪ್ | ಪಾಕ್ ವಿರುದ್ಧ ಹೀನಾಯ ಬ್ಯಾಟಿಂಗ್ ಪ್ರದರ್ಶನ ನೀಡಿದ ಟೀಮ್ ಇಂಡಿಯಾ; 119ಕ್ಕೆ ಆಲೌಟ್!

ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2024ರ ಟಿ20 ವಿಶ್ವಕಪ್‌ನ...

UFC ಫೈನಲ್ : ಚೊಚ್ಚಲ ಪ್ರಯತ್ನದಲ್ಲೇ ಫೈನಲ್‌ನಲ್ಲಿ ಗೆದ್ದು ಇತಿಹಾಸ ಸೃಷ್ಟಿಸಿದ ಭಾರತದ ಪೂಜಾ ತೋಮರ್

ಅಲ್ಟಿಮೇಟ್ ಫೈಟಿಂಗ್ ಚಾಂಪಿಯನ್‍ಶಿಪ್ (UFC)ನಲ್ಲಿ ತಮ್ಮ ಚೊಚ್ಚಲ ಪ್ರಯತ್ನದಲ್ಲೇ ಫೈನಲ್ಸ್ ಗೆಲ್ಲುವ...

ಟಿ20 ಭಾರತ – ಪಾಕ್ ಟಿಕೆಟ್ ಬೆಲೆ 1.46 ಕೋಟಿ ರೂ.ಗೆ ಮಾರಾಟ?

ಭಾರತ – ಪಾಕ್‌ ಪಂದ್ಯವೆಂದರೆ ಎರಡೂ ದೇಶಗಳ ಅಭಿಮಾನಿಗಳಿಗೆ ಭರ್ಜರಿ ಮನರಂಜನೆಯ...