ಆರ್‌ಸಿಬಿ ಐಪಿಎಲ್‌ ಗೆಲ್ಲುವವರೆಗೂ ಶಾಲೆಗೆ ಸೇರುವುದಿಲ್ಲ; ಪುಟಾಣಿ ಪೋಸ್ಟರ್‌ ವೈರಲ್‌

Date:

  • ಆರ್‌ಸಿಬಿ ಐಪಿಎಲ್‌ ಗೆಲ್ಲುವಿಗಾಗಿ ಹಿಡಿದ ಪುಟಾಣಿ ಪೋಸ್ಟರ್‌ ವೈರಲ್
  • ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದಿದ್ದ ಪಂದ್ಯ

ಐಪಿಎಲ್‌ ಪಂದ್ಯಗಳು ನಡೆಯುವ ವೇಳೆ ಮೈದಾನದಲ್ಲಿ ಅಭಿಮಾನಿಗಳು ತರಹಾವೇರಿ ಪೋಸ್ಟರ್‌ಗಳನ್ನು ಪ್ರದರ್ಶಿಸುವುದು ಸಾಮಾನ್ಯ. ಅಂತಹುದೇ ಬೆಂಗಳೂರಿನ ಪುಟಾಣಿ ಪೋಸ್ಟರ್‌ ಈಗ ವೈರಲ್ ಆಗಿದೆ.

- Advertisement -

ಬುಧವಾರ ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆದ ಆರ್‌ಸಿಬಿ ಮತ್ತು ಕೆಕೆಆರ್‌ ಪಂದ್ಯದ ವೇಳೆ ಆರ್‌ಸಿಬಿ ಅಭಿಮಾನಿಯಾದ ಪುಟಾಣಿ ಪೋಸ್ಟರ್‌ ಒಂದು ಇದೀಗ ವೈರಲ್‌ ಆಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಆರ್‌ಸಿಬಿ ಜೆರ್ಸಿ ಧರಿಸಿದ್ದ ಪುಟಾಣಿಯೊಬ್ಬಳು,  ʻಆರ್‌ಸಿಬಿ ಐಪಿಎಲ್‌ ಗೆಲ್ಲುವವರೆಗೂ ಶಾಲೆಗೆ ಸೇರುವುದಿಲ್ಲʼ ಎಂದು ಬರೆದಿದ್ದ ಪ್ಲೆಕಾರ್ಡ್ ಹಿಡಿದು  ಅಂಬೆಗಾಲಿಡುತ್ತಾ ಓಡಾಡುತ್ತಿದ್ದಳು. ಪಂದ್ಯದ ವೇಳೆ ಇದು ಎಲ್ಲರ ಗಮನ ಸೆಳೆದಿದೆ. ಪುಟಾಣಿಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.

ಆರ್‌ಸಿಬಿ ಟ್ರೋಫಿ ಗೆಲ್ಲುವವರೆಗೂ ಮದುವೆಯಾಗುವುದಿಲ್ಲಎಂದಿದ್ದ ಯುವತಿ

ಪುಟಾಣಿ ಪೋಸ್ಟರ್‌ ಮಾತ್ರವಲ್ಲ, ಆರ್‌ಸಿಬಿ ಕಪ್ ಗೆಲ್ಲದ ಬಗ್ಗೆ ಇಂತಹ ಹಲವು ಪೋಸ್ಟರ್‌ಗಳು ವೈರಲ್ ಆಗಿವೆ. ಕಳೆದ ಆವೃತ್ತಿಯಲ್ಲಿ ಮುಂಬೈನಲ್ಲಿ ನಡೆದಿದ್ದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳ ನಡುವಿನ ಪಂದ್ಯ ವೀಕ್ಷಿಸಲು ಮೈದಾನಕ್ಕೆ ಬಂದಿದ್ದ ಯುವತಿಯೊಬ್ಬಳು, ತನ್ನ ನೆಚ್ಚಿನ ತಂಡ ಆರ್‌ಸಿಬಿ, ಐಪಿಎಲ್ ಟ್ರೋಫಿ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಬರೆದಿರುವ ಪೋಸ್ಟರ್ ಪ್ರದರ್ಶಿಸಿದ್ದಳು. ಇದು ಸಹ ಸಾಕಷ್ಟು ವೈರಲ್‌ ಅಗುವುದರ ಜೊತೆಗೆ ಯುವತಿ ಟ್ರೋಲ್‌ಗೆ ಒಳಗಾಗಿದ್ದಳು.

ಈ ಸುದ್ದಿ ಓದಿದ್ದೀರಾ?: ಐಪಿಎಲ್‌ ಪಂದ್ಯ ವೀಕ್ಷಿಸಲು ತೆರಳಿದ್ದ ಐಆರ್‌ಎಸ್ ಅಧಿಕಾರಿಯ ದುಬಾರಿ ಮೊಬೈಲ್‌ ಕಳ್ಳತನ

2008ರಲ್ಲಿ ಆರಂಭವಾದ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಇದುವರೆಗಿನ 15 ಆವೃತ್ತಿಗಳಲ್ಲಿ ಆಡಿರುವ ಆರ್‌ಸಿಬಿ ಚಾಂಪಿಯನ್‌ ಪಟ್ಟವನ್ನೇರಿಲ್ಲ. 2009, 2011 ಹಾಗೂ 2016ರಲ್ಲಿ ಫೈನಲ್‌ ಪ್ರವೇಶಿಸಿದ್ದೇ ಆರ್‌ಸಿಬಿಯ ಇದುವರೆಗಿನ ಶ್ರೇಷ್ಠ ಸಾಧನೆ.

ಪ್ರಸಕ್ತ 16ನೇ ಆವೃತ್ತಿಯಲ್ಲಿ ಇದುವರೆಗೂ 8 ಪಂದ್ಯಗಳನ್ನಾಡಿರುವ ಆರ್‌ಸಿಬಿ, 4 ಪಂದ್ಯಗಳಲ್ಲಿ ಗೆಲುವಿನ ಸವಿಯುಂಡಿದ್ದು ಅಂಕಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...