ಏಕದಿನ ವಿಶ್ವಕಪ್ 2023 | ಭಾರತ ವಿರುದ್ಧ ಟಾಸ್ ಗೆದ್ದ ಬಾಂಗ್ಲಾ; ಕೆಲ ಕುತೂಹಲಕರ ಸಂಗತಿಗಳು

Date:

Advertisements

ಐಸಿಸಿ ಏಕದಿನ ವಿಶ್ವಕಪ್ 2023ರ 14ನೇ ಆವೃತ್ತಿಯ 17ನೇ ಪಂದ್ಯ ಭಾರತ – ಬಾಂಗ್ಲಾದೇಶ ತಂಡಗಳ ನಡುವೆ ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಸದ್ಯ ಟಾಸ್‌ ಗೆದ್ದಿರುವ ಬಾಂಗ್ಲಾದೇಶ ತಂಡದ ನಾಯಕ ನಜ್ಮುಲ್ ಹೊಸೈನ್ ಶಾಂಟೊ ಬ್ಯಾಟಿಂಗ್‌ ಆಯ್ದುಕೊಂಡಿದ್ದಾರೆ. ಪ್ರಮುಖ ಆಟಗಾರ ಹಾಗೂ ನಾಯಕ ಶಕೀಬ್‌ ಹಲ್‌ ಹಸನ್‌ ಇಂದಿನ ಪಂದ್ಯಕ್ಕೆ ಗೈರಾಗಿದ್ದಾರೆ.

ಐಸಿಸಿ ಏಕದಿನ ಶ್ರೇಣಿಯಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ಸಹಜವಾಗಿ ಪ್ರಬಲ ತಂಡ. ಸತತ ಮೂರು ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಅಂಕ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದರೆ, ಮೂರು ಪಂದ್ಯಗಳಲ್ಲಿ ಕೇವಲ ಒಂದು ಪಂದ್ಯದಲ್ಲಿ ವಿಜಯ ಸಾಧಿಸಿರುವ ಬಾಂಗ್ಲಾ ಆರನೇ ಸ್ಥಾನದಲ್ಲಿದೆ.

Advertisements

ಆದರೆ ಪ್ರಸಕ್ತ ಏಕದಿನ ವಿಶ್ವಕಪ್ ಪಂದ್ಯಾವಳಿಯಲ್ಲಿ ಈಗಾಗಲೇ ಹಲವು ಅಚ್ಚರಿಯ ಫಲಿತಾಂಶಗಳು ಹೊರಬಿದ್ದಿವೆ. ಅಫ್ಘಾನ್‌ ಇಂಗ್ಲೆಂಡ್‌ ತಂಡವನ್ನು ಸೋಲಿಸಿದರೆ, ನೆದರ್‌ಲ್ಯಾಂಡ್ಸ್‌ ತಂಡ ಪ್ರಬಲ ದಕ್ಷಿಣ ಆಫ್ರಿಕಾವನ್ನು ಮಣಿಸಿತ್ತು.

ಅಲ್ಲದೆ ಬಾಂಗ್ಲಾದೇಶವು 1998ರ ನಂತರ ಇದೇ ಮೊದಲ ಬಾರಿಗೆ ಭಾರತದಲ್ಲಿ ಭಾರತದ ವಿರುದ್ಧ ಏಕದಿನ ಪಂದ್ಯವನ್ನು ಆಡುತ್ತಿರುವುದು ವಿಶೇಷ. ಇತ್ತೀಚಿನ ವರ್ಷಗಳಲ್ಲಿ ಬಾಂಗ್ಲಾ ಪ್ರಬಲ ತಂಡವಾಗಿ ಹೊರಹೊಮ್ಮುತ್ತಿದೆ.

3-1 ಸರಣಿಯಲ್ಲಿ ಗೆದ್ದಿದ್ದ ಬಾಂಗ್ಲಾ

ಭಾರತ ಮತ್ತು ಬಾಂಗ್ಲಾದೇಶ ತಂಡಗಳು ಈವರೆಗೆ 40 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತವು 31 ಪಂದ್ಯಗಳನ್ನು ಗೆದ್ದರೆ, ಬಾಂಗ್ಲಾದೇಶ 8ರಲ್ಲಿ ಮಾತ್ರ ಗೆಲುವು ಕಂಡಿದೆ. ಉಭಯ ತಂಡಗಳು ವಿಶ್ವಕಪ್‌ನಲ್ಲಿ 4 ಬಾರಿ ಮುಖಾಮುಖಿಯಾಗಿದ್ದು, 2007ರ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾವನ್ನು ಬಾಂಗ್ಲಾದೇಶ ಮಣಿಸಿತ್ತು. ಉಳಿದ ಮೂರು ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದೆ.

ಬಾಂಗ್ಲಾದೇಶವು ಕಳೆದ 12 ತಿಂಗಳಲ್ಲಿ ಭಾರತದ ವಿರುದ್ಧ ಆಡಿದ ನಾಲ್ಕರಲ್ಲಿ ಮೂರು ಏಕದಿನ ಪಂದ್ಯಗಳಲ್ಲಿ ಗೆದ್ದಿದೆ. ಕಳೆದ ತಿಂಗಳು ನಡೆದ ಏಷ್ಯಾಕಪ್ ಸೂಪರ್ ಫೋರ್ ಮುಖಾಮುಖಿಯಲ್ಲಿಯೂ ಭಾರತವನ್ನು ಶಕೀಬ್‌ ಪಡೆ ಮಣಿಸಿತ್ತು. ಹೀಗಾಗಿ ಬಾಂಗ್ಲಾದೇಶವನ್ನು ಸುಲಭವಾಗಿ ಪರಿಗಣಿಸಲಾಗದು.

ಈ ಸುದ್ದಿ ಓದಿದ್ದೀರಾ? ಭಾರತೀಯ ಕ್ರಿಕೆಟ್ ಪ್ರಿಯರಿಗೆ ಶುಭಸುದ್ದಿ: 2028ರ ಒಲಿಂಪಿಕ್ಸ್‌ಗೆ ಟಿ20 ಕ್ರಿಕೆಟ್ ಸೇರ್ಪಡೆ

ಫಾರ್ಮ್‌ನಲ್ಲಿರುವ ಭಾರತ ತಂಡದ ಆಟಗಾರರು

ನಾಯಕ ರೋಹಿತ್ ಶರ್ಮಾ, ವಿರಾಟ್‌ ಕೊಹ್ಲಿ, ಕೆ ಎಲ್‌ ರಾಹುಲ್‌, ಜಸ್ಪ್ರೀತ್‌ ಬುಮ್ರಾ, ಶ್ರೇಯಸ್ ಅಯ್ಯರ್ಸೇ ರಿದಂತೆ ಭಾರತೀಯ ಆಟಗಾರರು ಉತ್ತಮ ಫಾರ್ಮ್‌ನಲ್ಲಿದ್ದಾರೆ. ಅಫ್ಘಾನಿಸ್ತಾನ ಹಾಗೂ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಸ್ಫೋಟಕವಾಗಿ ಆಡಿದ್ದ ರೋಹಿತ್ ಶರ್ಮಾ ಶತಕ ಹಾಗೂ ಅರ್ಧಶತಕ ಸಿಡಿಸಿದ್ದಾರೆ.

ವಿಶ್ವ ಶ್ರೇಣಿ ಬೌಲರ್ ಜಸ್ಪ್ರೀತ್‌ ಬುಮ್ರಾ ಕೂಡಾ ಎದುರಾಳಿ ಬೌಲರ್‌ಗಳಿಗೆ ಬಿಸಿ ಮುಟ್ಟಿಸುತ್ತಿದ್ದಾರೆ. ಮೊಹಮ್ಮದ್ ಸಿರಾಜ್ ಅವರನ್ನು ಎದುರಿಸಿ ನಿಲ್ಲುವುದು ಸುಲಭವಲ್ಲ. ಭಾರತದ ಸ್ಪಿನ್ ಜೋಡಿ ಕುಲ್‌ದೀಪ್ ಯಾದವ್ ಮತ್ತು ರವೀಂದ್ರ ಜಡೇಜ ಹಾಗೂ ಹಾರ್ದಿಕ್ ಪಾಂಡ್ಯ ಕೂಡ ವಿಕೆಟ್ ಉರುಳಿಸುವಲ್ಲಿ ಮುಂಚೂಣಿಯಲ್ಲಿದ್ದು ಪ್ರಮುಖ ಬ್ಯಾಟ್ಸ್‌ಮನ್‌ಗಳನ್ನು ಪೆವಿಲಿಯನ್‌ಗೆ ಕಳಿಸುವ ತಡೆಗೋಡೆಯಾಗಿದ್ದಾರೆ.

ಪ್ರಬಲ ಪಡೆಯನ್ನು ಹೊಂದಿರುವ ಭಾರತವನ್ನು ಮುನ್ನುಗ್ಗಿ ಯಶಸ್ಸು ಸಾಧಿಸುವುದು ಕೂಡ ಬಾಂಗ್ಲಾ ತಂಡದ ಮುಂದಿರುವ ಸವಾಲಾಗಿದೆ.

ಬ್ಯಾಟ್ಸ್‌ಮನ್‌ಗಳಿಗೆ ಸ್ವರ್ಗವಾಗಿರುವ ಪಿಚ್‌

ಪುಣೆಯ ಮಹಾರಾಷ್ಟ್ರ ಕ್ರಿಕೆಟ್‌ ಅಸೋಸಿಯೇಷನ್‌ ಮೈದಾನ ಬ್ಯಾಟ್ಸ್‌ಮನ್‌ಗಳಿಗೆ ಸ್ವರ್ಗವಾಗಿದೆ. ಆದರೆ, ಕಳೆದ ಒಂಬತ್ತು ತಿಂಗಳಲ್ಲಿ ಈ ಮೈದಾನದಲ್ಲಿ ಇದೇ ಮೊದಲ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿದೆ. ಸಣ್ಣ ಮೈದಾನ ಮತ್ತು ಫ್ಲಾಟ್ ಪಿಚ್ ಕಾರಣದಿಂದಾಗಿ ಹೆಚ್ಚುವರಿ ಸ್ಪಿನ್ನರ್‌ಗಳಿಗೆ ತಂಡಗಳು ಅವಕಾಶ ನೀಡುವ ಸಾಧ್ಯತೆ ಕಡಿಮೆ. ಇಲ್ಲಿಯವರೆಗೆ ಒಟ್ಟು 7 ಏಕದಿನ ಪಂದ್ಯಗಳು ನಡೆದಿದ್ದು, 4 ಬಾರಿ ಮೊದಲು ಬ್ಯಾಟಿಂಗ್‌ ಮಾಡಿದ ತಂಡಗಳು ಗೆದ್ದಿವೆ.

ಉಭಯ ತಂಡಗಳ 11 ಆಟಗಾರರ ಬಳಗ

ಭಾರತ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್, ಕೆ.ಎಲ್‌. ರಾಹುಲ್‌, ಹಾರ್ದಿಕ್‌ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್‌ ಠಾಕೂರ್, ಜಸ್ಪ್ರೀತ್ ಬುಮ್ರಾ, ಕುಲ್ದೀಪ್‌ ಯಾದವ್, ಮೊಹಮ್ಮದ್ ಸಿರಾಜ್‌.

ಬಾಂಗ್ಲಾದೇಶ: ತನ್ಜಿದ್‌ ಹಸನ್, ಲಿಟ್ಟನ್‌ ದಾಸ್, ನಜ್ಮುಲ್‌ ಹೊಸೈನ್, ಶಕೀಬ್‌ ಅಲ್ ಹಸನ್(ನಾಯಕ), ತೌಹಿದ್‌, ಮುಷ್ಫಿಕುರ್‌ ರಹೀಂ, ಮೆಹಿದಿ ಹಸನ್‌, ಮಹ್ಮುದುಲ್ಲಾ, ಟಸ್ಕಿನ್‌ ಅಹಮ್ಮದ್, ಶೋರಿಫುಲ್‌ ಇಸ್ಲಾಂ, ಮುಸ್ತಾಫಿಜುರ್‌ ರೆಹಮಾನ್.

ಪಂದ್ಯ ಆರಂಭ: ಮಧ್ಯಾಹ್ನ 2 ಗಂಟೆ

ನೇರ ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್‌, ಡಿಸ್ನಿ ಪ್ಲಸ್ ಹಾಟ್‌ಸ್ಟಾರ್‌ ಆಪ್

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X