ಅಕ್ಟೋಬರ್ 5ರಿಂದ ನಡೆಯಲಿರುವ ಏಕದಿನ ವಿಶ್ವಕಪ್ ತಂಡಕ್ಕೆ ಭಾರತ ತಂಡವನ್ನು ಅಂತಿಮ ಮಾರ್ಪಾಡು ಮಾಡಲಾಗಿದ್ದು, 37 ವರ್ಷದ ಅನುಭವಿ ಸ್ಪಿನ್ನರ್ ಆರ್ ಅಶ್ವಿನ್ ಅವರಿಗೆ 15ರ ಬಳಗದಲ್ಲಿ ಸ್ಥಾನ ನೀಡಲಾಗಿದೆ. ಈಗಾಗಲೇ ಸ್ಥಾನ ಪಡೆದಿದ್ದ ಅಕ್ಷರ್ ಪಟೇಲ್ ಸ್ಥಾನ ಕಳೆದುಕೊಂಡಿದ್ದಾರೆ.
ಆಸ್ಟ್ರೇಲಿಯಾ ಏಕದಿನ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಕಾರಣ ತಂಡಕ್ಕೆ ಆಯ್ಕೆ ಮಾಡಲಾಗಿದೆ. ಈ ತಿಂಗಳ ಆರಂಭದಲ್ಲಿ ಏಕದಿನ ವಿಶ್ವಕಪ್ ಸರಣಿಗೆ 15ರ ಬಳಗಕ್ಕೆ ಟೀಂ ಇಂಡಿಯಾವನ್ನು ಆಯ್ಕೆ ಮಾಡಿದಾಗ ಆಶ್ವಿನ್ ಅವರನ್ನು ಕೈಬಿಡಲಾಗಿತ್ತು. ಈ ಬಗ್ಗೆ ಹಲವು ಹಿರಿಯ ಆಟಗಾರರು ಹಾಗೂ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದರು. ತಂಡಗಳು ತಮ್ಮ ತಾತ್ಕಾಲಿಕ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ಸೆಪ್ಟೆಂಬರ್ 28ರವರೆಗೆ ಅನುಮತಿಸಲಾಗಿತ್ತು. ಈಗ ಪುನಃ ಆಯ್ಕೆ ಮಾಡಲಾಗಿದೆ. ಏಕದಿನ ವಿಶ್ವಕಪ್ ಅಕ್ಟೋಬರ್ 5ರಂದು ಭಾರತದಲ್ಲಿ ಪ್ರಾರಂಭವಾಗಲಿದೆ.
ವಿಶ್ವಕಪ್‌ನಲ್ಲಿ ಆಡುವ ಭಾರತದ ತಂಡ:
ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್
ಈ ಸುದ್ದಿ ಓದಿದ್ದೀರಾ? ಬ್ರೇಕಿಂಗ್ ನ್ಯೂಸ್ | ಏಕದಿನ ವಿಶ್ವಕಪ್ ಟೂರ್ನಿಗೆ ಟೀಮ್ ಇಂಡಿಯಾ ಪ್ರಕಟ