ಏಕದಿನ ವಿಶ್ವಕಪ್ 2023 | ಪಾಕ್ ಪಂದ್ಯದಲ್ಲಿ ಶುಭಮನ್ ಆಡುವ ಬಗ್ಗೆ ಲೇಟೆಸ್ಟ್ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Date:

ಐಸಿಸಿ ಏಕದಿನ ವಿಶ್ವಕಪ್‌ 2023ರ ಟೂರ್ನಿಯ ಪಂದ್ಯಗಳು ಆರಂಭವಾಗುವ ಮುನ್ನ ಡೆಂಗ್ಯೂ ಜ್ವರದಿಂದ ಆಸ್ಪತ್ರೆಗೆ ದಾಖಲಾಗಿದ್ದ ಟೀಂ ಇಂಡಿಯಾದ ಆರಂಭಿಕ ಆಟಗಾರ ಶುಭಮನ್‌ ಗಿಲ್ ಮೊದಲ ಎರಡು ಪಂದ್ಯಗಳಿಗೆ ಅಲಭ್ಯರಾಗಿದ್ದರು.

- Advertisement -

ಶುಭಮನ್‌ ಬದಲಿಗೆ ಇಶಾನ್‌ ಕಿಶನ್‌ ಅವರೊಂದಿಗೆ ರೋಹಿತ್‌ ಶರ್ಮಾ ಇನ್ನಿಂಗ್ಸ್ ಆರಂಭಿಸಿದ್ದರು. ಅಕ್ಟೋಬರ್‌ 14ರಂದು ಪಾಕಿಸ್ತಾನ ವಿರುದ್ಧ ಭಾರತ ತಂಡ ಗುಜರಾತ್‌ನ ಅಹಮದಾಬಾದ್‌ನಲ್ಲಿ ಮೂರನೇ ಪಂದ್ಯ ಆಡಲಿದೆ. ಈ ಪಂದ್ಯದಲ್ಲಿ ಶುಭಮನ್‌ ಆಡುತ್ತಾರಾ ಎಂಬ ಬಗ್ಗೆ ಬಹುತೇಕ ಸ್ಪಷ್ಟತೆ ಸಿಕ್ಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇಂದು ಸುದ್ದಿಗೋಷ್ಠಿಯಲ್ಲಿ ಮಾತಾನಾಡಿದ ನಾಯಕ ರೋಹಿತ್ ಶರ್ಮಾ, ಪಾಕಿಸ್ತಾನ ವಿರುದ್ಧದ ಪಂದ್ಯಕ್ಕೆ ಶುಭಮನ್‌ ಗಿಲ್ ಶೇ.99 ರಷ್ಟು ಲಭ್ಯರಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ಡೆಂಗ್ಯೂ ಜ್ವರದಿಂದಾಗಿ ಆಸ್ಟ್ರೇಲಿಯಾ ಮತ್ತು ಅಫ್ಘಾನಿಸ್ತಾನ ವಿರುದ್ಧದ ಎರಡು ಪಂದ್ಯಗಳಿಗೆ ಶುಭಮನ್‌ ಗಿಲ್ ಅಲಭ್ಯರಾಗಿದ್ದರು. ಟೀಂ ಇಂಡಿಯಾ ಶುಭಮನ್‌ ಅನುಪಸ್ಥಿತಿಯ ನಡುವೆಯೂ ಎರಡೂ ಪಂದ್ಯಗಳನ್ನು ಜಯಿಸಿತ್ತು. ನಾಯಕ ರೋಹಿತ್‌ ಶರ್ಮಾ ಭರವಸೆ ನೀಡಿರುವುದರಿಂದ ನಾಳಿನ 11ರ ಬಳಗದಲ್ಲಿ ಬಹುತೇಕ ಸ್ಥಾನ ಪಡೆಯುವ ಸಾಧ್ಯತೆಯಿದೆ.

ಈ ಸುದ್ದಿ ಓದಿದ್ದೀರಾ? ಏಕದಿನ ವಿಶ್ವಕಪ್ 2023 | ಜಯ್ ಶಾ ಪ್ರತಿಷ್ಠೆಯಿಂದ ಪ್ರೇಕ್ಷಕರಿಲ್ಲದ ಕ್ರೀಡಾಂಗಣಗಳು, ಕಳೆಗುಂದಿದ ಕ್ರಿಕೆಟ್

ಈ ವರ್ಷ ಗಿಲ್ ಅವರು ಏಕದಿನ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ತೋರಿದ್ದು, 2023ರಲ್ಲಿ ಜನವರಿ ಹಾಗೂ ಸೆಪ್ಟೆಂಬರ್‌ ತಿಂಗಳಿನಲ್ಲಿ ಎರಡು ಬಾರಿ ಐಸಿಸಿಯ ಅತ್ಯುತ್ತಮ ಆಟಗಾರ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಏಷ್ಯಾಕಪ್ ಮತ್ತು ಆಸ್ಟ್ರೇಲಿಯಾ ವಿರುದ್ಧದ ಏಕದಿನ ಸರಣಿಯ ಗೆಲುವಿನಲ್ಲಿ ಅತ್ಯುತ್ತಮ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಸೆಪ್ಟೆಂಬರ್‌ನಲ್ಲಿ ಐಸಿಸಿಯಿಂದ ವಿಶೇಷ ಆಟಗಾರ ಪ್ರಶಸ್ತಿಗೆ ಆಯ್ಕೆಯಾಗಿದ್ದರು. ಇದರಿಂದ ಶುಭಮನ್ ಗಿಲ್ ಒಂದಕ್ಕಿಂತ ಹೆಚ್ಚು ಬಾರಿ ಐಸಿಸಿ ತಿಂಗಳ ಆಟಗಾರ ಪ್ರಶಸ್ತಿ ಗೆದ್ದ ಮೊದಲ ಭಾರತೀಯ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾದರು.

ಗಿಲ್ ಏಕದಿನ ಪಂದ್ಯಗಳಲ್ಲಿ 35 ಇನ್ನಿಂಗ್ಸ್‌ಗಳಲ್ಲಿ 67.35 ಸರಾಸರಿಯೊಂದಿಗೆ ಒಂದು ದ್ವಿಶತಕ, 5 ಶತಕ ಹಾಗೂ 9 ಅರ್ಧ ಶತಕಗಳೊಂದಿಗೆ 1917 ರನ್ ಗಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...