ವಿಶ್ವಕಪ್ ಕ್ರಿಕೆಟ್ | ಭಾರತದ ಸ್ಪಿನ್ ದಾಳಿಗೆ ಪತರಗುಟ್ಟಿದ ಆಸ್ಟ್ರೇಲಿಯಾ; 199ಕ್ಕೆ ಆಲೌಟ್

Date:

ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಭಾರತದ ಸ್ಪಿನ್ನರ್‌ಗಳ ದಾಳಿಗೆ ಪತರಗುಟ್ಟಿದ ಆಸ್ಟ್ರೇಲಿಯಾ ಬ್ಯಾಟರ್‌ಗಳು, ಭಾರತಕ್ಕೆ ಸವಾಲಿನ ಗುರಿಯನ್ನು ನೀಡುವಲ್ಲಿ ವಿಫಲರಾಗಿದ್ದಾರೆ. 49.3 ಓವರ್‌ಗಳಲ್ಲಿ 199 ರನ್‌ ಗಳಿಸುವಷ್ಟರಲ್ಲಿ ಆಲೌಟ್ ಆಗಿದ್ದಾರೆ.

- Advertisement -

ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಮಹತ್ವದ ಪಂದ್ಯದಲ್ಲಿ ಟಾಸ್‌ ಗೆದ್ದಿದ್ದ ಆಸ್ಟ್ರೇಲಿಯಾ ತಂಡ ಮೊದಲು ಬ್ಯಾಟ್‌ ಮಾಡಲು ಮುಂದಾಯಿತು. ಆದರೆ ಬೃಹತ್ ಗುರಿ ನೀಡುವ ನಿರೀಕ್ಷೆಗೆ ಭಾರತದ ಪ್ರಮುಖ ಸ್ಪಿನ್ನರ್‌ಗಳು ತಣ್ಣೀರೆರಚಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಟೀಮ್ ಇಂಡಿಯಾ ಬೌಲಿಂಗ್‌ನಲ್ಲಿ ರವೀಂದ್ರ ಜಡೇಜಾ 28ಕ್ಕೆ 3, ಕುಲ್‌ದೀಪ್ ಯಾದವ್ 2 ಹಾಗೂ ಜಸ್‌ಪ್ರೀತ್ ಬುಮ್ರಾ 2 ವಿಕೆಟ್ ಪಡೆದುಕೊಂಡರೆ, ಆರ್ ಅಶ್ವಿನ್, ಮೊಹಮ್ಮದ್ ಸಿರಾಜ್ ಹಾಗೂ ಹಾರ್ದಿಕ್ ಪಾಂಡ್ಯ ತಲಾ ಒಂದು ವಿಕೆಟ್ ಪಡೆದುಕೊಂಡರು.

ಚುರುಕಿನ ಫೀಲ್ಡಿಂಗ್‌ ಕೂಡ ಆಸ್ಟ್ರೇಲಿಯಾವನ್ನು ಸಣ್ಣ ಮೊತ್ತಕ್ಕೆ ಕಟ್ಟಿ ಹಾಕಲು ಟೀಮ್ ಇಂಡಿಯಾ ಯಶಸ್ವಿಯಾಯಿತು. ಇನ್ನಿಂಗ್ಸ್‌ನ ಕೊನೆಯಲ್ಲಿ ಮಿಚೆಲ್‌ ಸ್ಟಾರ್ಕ್ಸ್‌, ಆಸೀಸ್‌ ಖಾತೆಗೆ 28 ರನ್‌ಗಳ ಅಮೂಲ್ಯ ಕೊಡುಗೆ ಸೇರಿಸಿದರು. ಕೊನೆಯಲ್ಲಿ 49.3 ಓವರ್‌ಗಳಲ್ಲಿ 199 ರನ್‌ ಗಳಿಸಲಷ್ಟೇ ಆಸಿಸ್‌ಗೆ ಸಾಧ್ಯವಾಯಿತು.

ಬ್ಯಾಟಿಂಗ್‌ನಲ್ಲಿ ಆಸಿಸ್ ಪರ ಡೇವಿಡ್ ವಾರ್ನರ್ 41, ಸ್ಟೀವ್ ಸ್ಮಿತ್ 46, ಲಾಬೂಶೈನ್‌ 27, ಗ್ಲೆನ್ ಮ್ಯಾಕ್ಸ್‌ವೆಲ್ 15, ಕ್ಯಾಮರೂನ್ ಗ್ರೀನ್ 8  ರನ್ ಗಳಿಸಿದರೆ, ಮಿಚೆಲ್ ಮಾರ್ಷ್‌ ಹಾಗೂ ಅಲೆಕ್ಸ್ ಕ್ಯಾರಿ ಶೂನ್ಯ ಸುತ್ತಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...