ವಿಶ್ವಕಪ್ ಕ್ರಿಕೆಟ್ | ಸಚಿನ್ ತೆಂಡೂಲ್ಕರ್-ಎಬಿ ಡಿವಿಲಿಯರ್ಸ್ ದಾಖಲೆ ಮುರಿದ ಡೇವಿಡ್ ವಾರ್ನರ್

Date:

ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಚೆನ್ನೈನ ಎಂ ಚಿದಂಬರಂ ಕ್ರೀಡಾಂಗಣದಲ್ಲಿ ಇಂದು ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಐದನೇ ಪಂದ್ಯದಲ್ಲಿ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ವಿಶ್ವಕಪ್‌ನಲ್ಲಿ ಪ್ರಮುಖ ದಾಖಲೆಯೊಂದನ್ನು ತಮ್ಮ ಹೆಸರಿಗೆ ಬರೆದುಕೊಂಡಿದ್ದಾರೆ.

- Advertisement -

ವಿಶ್ವಕಪ್ ಟೂರ್ನಿಯಲ್ಲಿ ಅತ್ಯಂತ ವೇಗವಾಗಿ 1,000 ರನ್‌ಗಳನ್ನು ಗಳಿಸಿದ ದಾಖಲೆ ಈಗ ವಾರ್ನರ್ ಪಾಲಾಗಿದೆ. ಸಚಿನ್ ತೆಂಡೂಲ್ಕರ್ ಹಾಗೂ ಎಬಿ ಡಿವಿಲಿಯರ್ಸ್ ಹೆಸರಿನಲ್ಲಿದ್ದ ಈ ದಾಖಲೆಯನ್ನು ಭಾರತದ ವಿರುದ್ಧದ ಇಂದಿನ ಪಂದ್ಯದಲ್ಲಿ ಡೇವಿಡ್ ವಾರ್ನರ್ ಮುರಿದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಹಾರ್ದಿಕ್ ಪಾಂಡ್ಯ ಅವರ ಎಸೆತವನ್ನು ಬೌಂಡರಿಗೆ ಬಾರಿಸುವ ಮೂಲಕ ಡೇವಿಡ್ ವಾರ್ನರ್ ಏಕದಿನ ವಿಶ್ವಕಪ್‌ನಲ್ಲಿ 1000 ರನ್‌ಗಳ ಮೈಲಿಗಲ್ಲು ದಾಟಿದ್ದಾರೆ. ಈ ಸಾಧನೆಗಾಗಿ ವಾರ್ನರ್ ಕೇವಲ 19 ಇನ್ನಿಂಗ್ಸ್‌ಗಳನ್ನು ಮಾತ್ರವೇ ಬಳಸಿಕೊಂಡಿದ್ದಾರೆ. ಆ ಮೂಲಕ ಸಚಿನ್ ಅವರ ಹೆಸರಿನಲ್ಲಿದ್ದ ದಾಖಲೆಯನ್ನು ಹಿಂದಿಕ್ಕಿದ್ದಾರೆ.

ಸಚಿನ್ ತೆಂಡೂಲ್ಕರ್ ಹಾಗೂ ಎಬಿ ಡಿವಿಲಿಯರ್ಸ್ ಅವರು 20 ಇನ್ನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದ್ದರು. ಈಗ ಈ ದಾಖಲೆಯನ್ನು ಮುರಿದಂತಾಗಿದೆ. ಈ ಸಾಧನೆ ಮಾಡಲು ಈ ಪಂದ್ಯದಲ್ಲಿ ವಾರ್ನರ್‌ಗೆ 8 ರನ್‌ಗಳ ಅಗತ್ಯವಿತ್ತು. ಅದನ್ನು ಇಂದಿನ ಪಂದ್ಯದಲ್ಲಿ ಸಾಧಿಸಿದ್ದಾರೆ.

ಈ ಬಾರಿಯ ವಿಶ್ವಕಪ್ ಟೂರ್ನಿಗೂ ಮುನ್ನ ವಾರ್ನರ್ ತಮ್ಮ ಲಯಕ್ಕೆ ಮರಳಿದ್ದು ಉತ್ತಮ ಪ್ರದರ್ಶನ ನೀಡುವ ವಿಶ್ವಾಸ ಮೂಡಿಸಿದ್ದಾರೆ. ಇನ್ನು ಈ ಪಂದ್ಯದಲ್ಲಿಯೂ ವಾರ್ನರ್ ಆಸ್ಟ್ರೇಲಿಯಾಗೆ ಉತ್ತಮ ಆರಂಭವನ್ನು ನೀಡುವಲ್ಲಿ ಯಶಸ್ವಿಯಾಗಿದ್ದಾರೆ.
ಆರಂಭಿಕ ಆಟಗಾರ ಮಿಚೆಲ್ ಮಾರ್ಶ್ ತಂಡ 5 ರನ್‌ಗಳಿಸಿದ್ದಾಗ ವಿಕೆಟ್ ಕಳೆದುಕೊಂಡಿದ್ದರೂ ಸ್ಮಿತ್ ಜೊತೆಗೆ ಸೇರಿಕೊಂಡು ಅರ್ಧ ಶತಕದ ಜೊತೆಯಾಟವನ್ನು ನೀಡಿದರು.

52 ಎಸೆತಗಳನ್ನು ಎದುರಿಸಿದ ವಾರ್ನರ್ 41 ರನ್‌ಗಳನ್ನು ಗಳಿಸಿ ವಿಕೆಟ್ ಕಳೆದುಕೊಂಡಿದ್ದಾರೆ. ಕುಲ್‌ದೀಪ್ ಯಾದವ್ ಅವರ ಬೌಲಿಂಗ್‌ನಲ್ಲಿ ಅವರಿಗೇ ಕ್ಯಾಚ್ ನೀಡಿ ವಾರ್ನರ್ ನಿರ್ಗಮಿಸಿದರು.

7 ವಿಕೆಟ್ ಕಳೆದುಕೊಂಡ ಆಸ್ಟ್ರೇಲಿಯಾ
ಸದ್ಯ ಆಸ್ಟ್ರೇಲಿಯಾ ತಂಡವು 140 ರನ್‌ ಗಳಿಸಿದ್ದು, ಪ್ರಮುಖ ಏಳು ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಆಸಿಸ್ ಬ್ಯಾಟರ್‌ಗಳು ಭಾರತದ ಸ್ಪಿನ್ ಮೋಡಿಗೆ ಉತ್ತರಿಸಲು ಪರದಾಡುತ್ತಿದ್ದು, 37 ಓವರ್‌ ವೇಳೆ 7 ವಿಕೆಟ್‌ಗಳನ್ನು ಕಳೆದುಕೊಂಡಿದೆ.

ಭಾರತದ ಸ್ಪಿನ್ನರ್‌ಗಳಾದ ರವೀಂದ್ರ ಜಡೇಜಾ 3, ಕುಲ್‌ದೀಪ್ ಯಾದವ್ 2 ಹಾಗೂ ಆರ್ ಅಶ್ವಿನ್ 1 ವಿಕೆಟ್ ಪಡೆದುಕೊಂಡರೆ, ಮಿಚೆಲ್ ಮಾರ್ಷ್‌ ವಿಕೆಟ್ ಅನ್ನು ಜಸ್‌ಪ್ರೀತ್ ಬುಮ್ರಾ ಪಡೆದುಕೊಂಡರು.

ಬ್ಯಾಟಿಂಗ್‌ನಲ್ಲಿ ಆಸಿಸ್ ಪರ ಡೇವಿಡ್ ವಾರ್ನರ್ 41, ಸ್ಟೀವ್ ಸ್ಮಿತ್ 46, ಲಾಬೂಶೈನ್‌ 27, ಗ್ಲೆನ್ ಮ್ಯಾಕ್ಸ್‌ವೆಲ್ 15, ಕ್ಯಾಮರೂನ್ ಗ್ರೀನ್ 8  ರನ್ ಗಳಿಸಿದರೆ, ಮಿಚೆಲ್ ಮಾರ್ಷ್‌ ಹಾಗೂ ಅಲೆಕ್ಸ್ ಕ್ಯಾರಿ ಶೂನ್ಯ ಸುತ್ತಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...