ವಿಶ್ವಕಪ್ ಕ್ರಿಕೆಟ್ | ಗೆಲುವಿನ ಲಯ ಮುಂದುವರಿಸಿದ ಟೀಮ್ ಇಂಡಿಯಾ; ನ್ಯೂಝಿಲ್ಯಾಂಡ್‌ಗೆ ಮೊದಲ ಸೋಲು

Date:

ಧರ್ಮಶಾಲಾದಲ್ಲಿರುವ ಹಿಮಾಚಲ ಪ್ರದೇಶ ಕ್ರಿಕೆಟ್ ಸಂಸ್ಥೆಯ ಕ್ರೀಡಾಂಗಣದಲ್ಲಿ ಇಂದು ನಡೆದ ವಿಶ್ವಕಪ್ ಕ್ರಿಕೆಟ್ ಕೂಟದ ಇಂದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನ್ಯೂಝಿಲ್ಯಾಂಡ್ ವಿರುದ್ಧ ಟೀಮ್ ಇಂಡಿಯಾ ನಾಲ್ಕು ವಿಕೆಟ್‌ಗಳ ಗೆಲುವು ದಾಖಲಿಸಿದೆ.

- Advertisement -

ಬೌಲಿಂಗ್‌ನಲ್ಲಿ ಮೊಹಮ್ಮದ್ ಶಮಿ ಅವರ ಐದು ವಿಕೆಟ್ ಹಾಗೂ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿಯವರ 95 ರನ್‌ಗಳ ನೆರವಿನಿಂದ ನ್ಯೂಝಿಲ್ಯಾಂಡ್ ವಿರುದ್ಧ ಟೀಮ್ ಇಂಡಿಯಾ ನಾಲ್ಕು ವಿಕೆಟ್‌ಗಳ ಗೆಲುವು ದಾಖಲಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಗೆಲುವಿನ ಮೂಲಕ ವಿಶ್ವಕಪ್ ಕೂಟದಲ್ಲಿ ಈವರೆಗೆ ಆಡಿದ ಎಲ್ಲ ಐದು ಪಂದ್ಯಗಳಲ್ಲಿ ಟೀಮ್ ಇಂಡಿಯಾ ಗೆದ್ದುಕೊಂಡು, ಅಂಕಪಟ್ಟಿಯಲ್ಲಿ 10 ಅಂಕಗಳನ್ನು ಗಳಿಸಿಕೊಂಡು ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ. ವಿಶ್ವಕಪ್ ಕೂಟದಲ್ಲಿ ನ್ಯೂಝಿಲ್ಯಾಂಡ್‌ಗೆ ಮೊದಲ ಸೋಲು ಅನುಭವಿಸಿದೆ.

ಗೆಲ್ಲಲು ನ್ಯೂಝಿಲ್ಯಾಂಡ್ ನೀಡಿದ್ದ 274 ರನ್‌ಗಳ ಗುರಿ ನೀಡಿಯನ್ನು ಟೀಮ್ ಇಂಡಿಯಾ 48 ಓವರ್‌ಗಳಲ್ಲಿ ತಲುಪಿತು. ವಿಶ್ವಕಪ್‌ನ ಮೊದಲ ಪಂದ್ಯದಲ್ಲೇ ಟೀಮ್ ಇಂಡಿಯಾರ ಪರ ಬೌಲಿಂಗ್‌ನಲ್ಲಿ ಮಿಂಚಿ, ಐದು ವಿಕೆಟ್ ಗಳಿಸಿದ್ದ ಮೊಹಮ್ಮದ್ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.

ಶತಕ ವಂಚಿತ ವಿರಾಟ್ ಕೊಹ್ಲಿ

274 ರನ್‌ಗಳ ಗುರಿ ಪಡೆದ ಟೀಮ್ ಇಂಡಿಯಾ ಪರ ಇನ್ನಿಂಗ್ಸ್ ಆರಂಭಿಸಿದ ನಾಯಕ ರೋಹಿತ್ ಶರ್ಮಾ ಹಾಗೂ ಶುಭಮನ್ ಗಿಲ್ ಮೊದಲ ವಿಕೆಟ್‌ಗೆ 71 ರನ್ ಕಲೆ ಹಾಕುವ ಮೂಲಕ ಉತ್ತಮ ಆರಂಭ ಒದಗಿಸಿಕೊಟ್ಟರು.

ರೋಹಿತ್ ಶರ್ಮಾ 46 (40) ರನ್ ಗಳಿಸಿದ್ದಾಗ ಔಟಾಗುವ ಮೂಲಕ 4 ರನ್‌ನಿಂದ ಅರ್ಧಶತಕದಿಂದ ವಂಚಿತರಾದರೆ, ಶುಭಮನ್ ಗಿಲ್ 26 (31) ರನ್‌ ಗಳಿಸಿ, ಔಟಾದರು.

ಆ ಬಳಿಕ ಬಂದ ಶ್ರೇಯಸ್‌ ಅಯ್ಯರ್ ಹಾಗೂ ಕೆ.ಎಲ್ ರಾಹುಲ್ ಕ್ರಮವಾಗಿ 33 ಹಾಗೂ 27 ರನ್ ಗಳಿಸಿ, ತಮ್ಮಿಂದಾದ ಕೊಡುಗೆ ನೀಡಿದರು. ವಿಶ್ವಕಪ್‌ನಲ್ಲಿ ಮೊದಲ ಅವಕಾಶ ಪಡೆದಿದ್ದ ಬಲಗೈ ಬ್ಯಾಟರ್ ಸೂರ್ಯಕುಮಾರ್ ಯಾದವ್,  ರನ್ ತೆಗೆಯುವ ಭರದಲ್ಲಿ 2 ರನ್‌ಗೆ ರನೌಟ್ ಆಗಿ ನಿರ್ಗಮಿಸಿದರು.

ಟೀಮ್ ಇಂಡಿಯಾದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ ಮತ್ತೊಮ್ಮೆ ಶತಕ ಬಾರಿಸುವ ಅಂಚಿನಲ್ಲಿ ಸಿಕ್ಸ್‌ ಹೊಡೆಯುವ ಪ್ರಯತ್ನಕ್ಕೆ ಕೈ ಹಾಕಿ, ಕ್ಯಾಚ್ ನೀಡಿ ಕೇವಲ 5 ರನ್‌ಗಳಿಂದ ಶತಕದ ಹೊಸ್ತಿಲಲ್ಲಿ ಎಡವಿದರು. 104 ಎಸೆತಗಳನ್ನು ಎದುರಿಸಿದ ವಿರಾಟ್ ಕೊಹ್ಲಿ, 8 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳ ನೆರವಿನೊಂದಿಗೆ 95 ರನ್ ಗಳಿಸಿ, ಹೆನ್ರಿ ಎಸೆತದಲ್ಲಿ ಫಿಲಿಫ್ಸ್‌ಗೆ ಕ್ಯಾಚಿತ್ತು ನಿರ್ಗಮಿಸಿದರು.

ತಂಡದ ಗೆಲುವಿಗೆ ವಿರಾಟ್ ಕೊಹ್ಲಿ ಜೊತೆ ಕೈ ಜೋಡಿಸಿದ ಎಡಗೈ ಬ್ಯಾಟರ್ ರವೀಂದ್ರ ಜಡೇಜಾ, ತಾನು ಎದುರಿಸಿದ 43 ಎಸೆತಗಳಲ್ಲಿ 35 ರನ್ ಗಳಿಸಿದರು. ಇದರಲ್ಲಿ ಒಂದು ಸಿಕ್ಸ್ ಹಾಗೂ ಮೂರು ಬೌಂಡರಿ ಸೇರಿತ್ತು. ಕೊನೆಯಲ್ಲಿ ಟೀಮ್ ಇಂಡಿಯಾ ನ್ಯೂಝಿಲ್ಯಾಂಡ್ ನೀಡಿದ್ದ 274 ರನ್‌ಗಳ ಗುರಿಯನ್ನು 48 ಓವರ್‌ಗಳಲ್ಲಿ ತಲುಪಿತು.

ನ್ಯೂಝಿಲ್ಯಾಂಡ್ ಪರ ಲೂಕಿ ಫರ್ಗೂಸನ್ ಎರಡು ವಿಕೆಟ್ ಪಡೆದರೆ, ಟ್ರೆಂಟ್ ಬೋಲ್ಟ್, ಮ್ಯಾಟ್ ಹೆನ್ರಿ ಹಾಗೂ ಮಿಚೆಲ್ ಸ್ಯಾಂಟನರ್ ತಲಾ ಒಂದು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...