ವಿಶ್ವಕಪ್ ಫೈನಲ್: ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿ ಟೀಮ್ ಇಂಡಿಯಾ

Date:

ವಿಶ್ವಕಪ್ ಫೈನಲ್: ಪ್ರಮುಖ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಟೀಮ್ ಇಂಡಿಯಾ

- Advertisement -

ಗುಜರಾತ್‌ನ ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಐಸಿಸಿ ಏಕದಿನ ವಿಶ್ವಕಪ್ ಫೈನಲ್‌ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಟೀಮ್ ಇಂಡಿಯಾ ದೊಡ್ಡ ಆಘಾತ ಎದುರಿಸಿದೆ. ಈಗಾಗಲೇ ಪ್ರಮುಖ ಮೂರು ವಿಕೆಟ್‌ಗಳನ್ನು ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ. ಟೀಮ್ ಇಂಡಿಯಾ ಟಾಸ್ ಸೋತು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಮಿಚೆಲ್ ಸ್ಟಾರ್ಕ್​ ಎಸೆದ 5ನೇ ಓವರ್​ನ 2ನೇ ಎಸೆತದಲ್ಲಿ ಮಿಡ್​ ಆನ್​ನಲ್ಲಿದ್ದ ಆ್ಯಡಂ ಝಂಪಾಗೆ ಕ್ಯಾಚ್ ನೀಡುವ ಮೂಲಕ 7 ಎಸೆತಗಳಲ್ಲಿ ಕೇವಲ 4 ರನ್ ಬಾರಿಸಿದ್ದ ಆರಂಭಿಕ ಆಟಗಾರ ಶುಭ​​ಮನ್ ಗಿಲ್ ಔಟಾದರು. ಆ ಮೂಲಕ ಆಸ್ಟ್ರೇಲಿಯಾ ತಂಡ ಮೊದಲ ಯಶಸ್ಸು ಪಡೆಯಿತು.

47 ರನ್ ಗಳಿಸಿ ಉತ್ತಮ ಪ್ರದರ್ಶನ ತೋರುತ್ತಿದ್ದ ನಾಯಕ ರೋಹಿತ್ ಶರ್ಮಾ ಮ್ಯಾಕ್ ವೆಲ್ ಬೌಲಿಂಗ್ ನಲ್ಲಿ ಔಟ್ ಆದರು. ಮ್ಯಾಕ್ಸ್​ವೆಲ್ ಎಸೆದ 10ನೇ ಓವರ್​ನ 4ನೇ ಎಸೆತದಲ್ಲಿ ಭರ್ಜರಿ ಹೊಡೆತಕ್ಕೆ ಮುಂದಾದ ರೋಹಿತ್ ಶರ್ಮಾ, ಟ್ರಾವಿಸ್ ಹೆಡ್ ಅದ್ಭುತ ರನ್ನಿಂಗ್ ಕ್ಯಾಚ್‌ಗೆ ಬಲಿಯಾದರು. 31 ಎಸೆತಗಳನ್ನು ಎದುರಿಸಿದ್ದ ರೋಹಿತ್ ಶರ್ಮಾ, 4 ಬೌಂಡರಿ ಹಾಗೂ ಮೂರು ಸಿಕ್ಸರ್‌ನ ನೆರವಿನಿಂದ 47 ರನ್ ಗಳಿಸಿದರು.

ನಂತರ ಕ್ರೀಸ್‌ಗೆ ಬಂದ ಶ್ರೇಯಸ್ ಅಯ್ಯರ್ ಕೇವಲ 4 ರನ್ ಗಳಿಸಿ, ಆಸೀಸ್ ನಾಯಕ ಪ್ಯಾಟ್ ಕಮ್ಮಿನ್ಸ್ ಬೌಲಿಂಗ್‌ನಲ್ಲಿ ಪೆವಿಲಿಯನ್ ಸೇರಿದರು.

ಪ್ರಸ್ತುತ 19 ಓವರ್‌ಗಳು ಮುಗಿದಿದ್ದು, ಭಾರತ 113 ರನ್ ಮಾಡಿದೆ. ಸದ್ಯ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ 39*, ರಾಹುಲ್ 18* ರನ್ ಗಳಿಸಿ, ಕ್ರೀಸ್‌ನಲ್ಲಿದ್ದಾರೆ.

ಈ ಬಾರಿಯ ವಿಶ್ವಕಪ್‌ನ ಆಸ್ಟ್ರೇಲಿಯಾ ವಿರುದ್ಧ ನಡೆದಿದ್ದ ಆರಂಭಿಕ ಪಂದ್ಯದಲ್ಲಿ ಕೊಹ್ಲಿ-ರಾಹುಲ್ ಜೋಡಿ ಉತ್ತಮ ಜೊತೆಯಾಟ ನಡೆಸಿದ ಪರಿಣಾಮ ಸೋಲನುಭವಿಸುವುದನ್ನು ತಪ್ಪಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...