ವಿಶ್ವಕಪ್ | ಇಂದು ಭಾರತ-ಪಾಕ್ ಪಂದ್ಯ: ಉದ್ಘಾಟನಾ ಪಂದ್ಯದಂತೆ ತಯಾರಿ ನಡೆಸಿದ ಬಿಸಿಸಿಐ!

Date:

ಐಸಿಸಿ ವಿಶ್ವಕಪ್‌ನಲ್ಲಿ ಇಂದು ಸಾಂಪ್ರದಾಯಿಕ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಪಂದ್ಯ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಲಿದೆ.

- Advertisement -

ವಿಶ್ವಕಪ್‌ ಕೂಟದಲ್ಲಿ ಇಂದು ನಡೆಯುತ್ತಿರುವ ಪಂದ್ಯ 12ನೇ ಪಂದ್ಯವಾಗಿದ್ದರೂ, ಉದ್ಘಾಟನಾ ಪಂದ್ಯದಂತೆ ಬಿಸಿಸಿಐ ತಯಾರಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇಂದಿನ ಪಂದ್ಯ ಭಾರತೀಯ ಕಾಲಮಾನ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದ್ದು ಮಧ್ಯಾಹ್ನ 1:30ಕ್ಕೆ ಟಾಸ್ ನಡೆಯಲಿದೆ. ಇನ್ನು ಟಾಸ್‌ಗೂ ಒಂದು ಗಂಟೆಗಳ ಕಾಲ ಮುನ್ನ ಸಂಗೀತ ಕಾರ್ಯಕ್ರಮವಿರಲಿದ್ದು ಅರ್ಜಿತ್ ಸಿಂಗ್, ಶಂಕರ್ ಮಹದೇವನ್ ಸೇರಿದಂತೆ ಕೆಲ ಬಾಲಿವುಡ್‌ನ ಸ್ಟಾರ್ ಗಾಯಕರು ಈ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಇದಕ್ಕೆ ಪೂರ್ವ ತಯಾರಿಯೂ ಕಳೆದ ಎರಡು ದಿನಗಳಿಂದ ನಡೆಯುತ್ತಿದೆ.

ಭಾರತ ಹಾಗೂ ಪಾಕಿಸ್ತಾನ ಎರಡು ತಂಡಗಳು ಕೂಡ ಈ ಬಾರಿಯ ವಿಶ್ವಕಪ್‌ನಲ್ಲಿ ಮೊದಲ ಎರಡು ಪಂದ್ಯಗಳಲ್ಲಿ ಅದ್ಭುತ ಗೆಲುವು ಸಾಧಿಸಿದ್ದು ಆತ್ಮವಿಶ್ವಾಸದಲ್ಲಿದೆ. ಭಾರತ ತಂಡ ಬಲಿಷ್ಠ ಆಸ್ಟ್ರೇಲಿಯಾ ಹಾಗೂ ಅಫ್ಘಾನಿಸ್ತಾನ ತಂಡಗಳನ್ನು ಮಣಿಸಿದ್ದರೆ ಪಾಕಿಸ್ತಾನ ನೆದರ್ಲೆಂಡ್ಸ್ ಹಾಗೂ ಶ್ರೀಲಂಕಾ ವಿರುದ್ಧ ಭರ್ಜರಿ ಗೆಲುವು ಸಾಧಿಸಿ ಈ ಮೂರನೇ ಪಂದ್ಯಕ್ಕೆ ಸಿದ್ಧವಾಗಿದೆ.

ಕಳೆದ 31 ವರ್ಷಗಳಲ್ಲಿ ನಡೆದ ವಿಶ್ವಕಪ್ ಟೂರ್ನಿಯಲ್ಲಿ ಪಾಕಿಸ್ತಾನ ಭಾರತದ ವಿರುದ್ಧ ಈವರೆಗೆ ಒಂದೂ ಗೆಲುವು ಸಾಧಿಸಲು ಸಾಧ್ಯವಾಗಿಲ್ಲ. ಏಳು ಬಾರಿ ಮುಖಾಮುಖಿಯಾದಾಗಲೂ ಭಾರತವೇ ಗೆದ್ದುಕೊಂಡಿದೆ. ಹೀಗಾಗಿ ಈ ಬಾರಿಯ ಮುಖಾಮುಖಿಯಲ್ಲಿ ಯಾರು ಗೆಲ್ಲಲಿದ್ದಾರೆ ಎಂಬುದು ಕಾದುನೋಡಬೇಕಿದೆ.

‘ಇಂತಹ ಪಂದ್ಯಗಳು ಯಾವತ್ತೂ ತುಂಬಾ ವಿಶೇಷ’ ಎಂದ ಕಿಂಗ್ ಕೊಹ್ಲಿ
ಭಾರತ-ಪಾಕ್ ನಡುವಿನ ಪಂದ್ಯಕ್ಕೂ ಮುನ್ನ ಐಸಿಸಿ ವಿಡಿಯೋ ಒಂದನ್ನು ಬಿಡುಗಡೆ ಮಾಡಿದ್ದು, ಪಂದ್ಯದ ಕುರಿತು ಟೀಮ್ ಇಂಡಿಯಾ ಆಟಗಾರರಾದ ವಿರಾಟ್ ಕೊಹ್ಲಿ, ಹಾರ್ದಿಕ್ ಪಾಂಡ್ಯ ಮತ್ತು ಮುಖ್ಯ ಕೋಚ್ ರಾಹುಲ್ ದ್ರಾವಿಡ್ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

 

View this post on Instagram

 

A post shared by ICC (@icc)

‘ಇಂತಹ ಪಂದ್ಯಗಳು ಯಾವತ್ತೂ ತುಂಬಾ ವಿಶೇಷವೆನಿಸುತ್ತದೆ. ಮೆಲ್ಬರ್ನ್‌ನ (ಕಳೆದ ಬಾರಿದ ವಿಶ್ವಕಪ್ ಪಂದ್ಯವನ್ನು ಉಲ್ಲೇಖ ಮಾಡುತ್ತಾ) ಹೋಟೆಲ್, ಸ್ಟೇಡಿಯಂ ಹೊರಗಡೆ ಅಭಿಮಾನಿಗಳ ಸದ್ದು ನಿಜಕ್ಕೂ ಅದ್ಭುತವಾಗಿದೆ. ಕ್ರೀಡಾಂಗಣದಲ್ಲೂ ಆ ಶಕ್ತಿಯು ಭಾಸವಾಗುತ್ತಿದೆ’ ಎಂದು ವಿಡಿಯೋದಲ್ಲ ಕ್ರೀಡಾಭಿಮಾನಿಗಳ ಫೇವರೀಟ್ ಆಗಿರುವ ವಿರಾಟ್ ಕೊಹ್ಲಿ ತಿಳಿಸಿದ್ದಾರೆ.

 

ಅಹ್ಮದಾಬಾದ್‌ನಲ್ಲಿ ಜನಸಾಗರ
ಭಾರತ-ಪಾಕಿಸ್ತಾನ ನಡುವಿನ ವಿಶ್ವಕಪ್ ಕದನ ಹಿನ್ನೆಲೆಯಲ್ಲಿ ಅಹಮದಾಬಾದ್‌ನಲ್ಲಿ ಎಲ್ಲಿ ನೋಡಿದರೂ ಟೀಂ ಇಂಡಿಯಾ ಟೀ-ಶರ್ಟ್‌ಗಳನ್ನು ಧರಿಸಿರುವ ಕ್ರಿಕೆಟ್ ಅಭಿಮಾನಿಗಳೇ ಕಾಣುತ್ತಿದ್ದು, ಅಹಮದಾಬಾದ್ ಸಂಪೂರ್ಣ ನೀಲಿಮಯವಾಗಿದೆ.

ದೇಶದ ಹಲವು ಕಡೆಗಳಲ್ಲಿ ಟೀಂ ಇಂಡಿಯಾ ಗೆಲುವಿಗೆ ಕ್ರಿಕೆಟ್ ಅಭಿಮಾನಿಗಳು ಹೋಮ-ಹವನ ನಡೆಸುತ್ತಿದ್ದಾರೆ. ವಿಶ್ವಕಪ್ ಭಾರತ ತಂಡದ ಎಲ್ಲ ಆಟಗಾರರ ಭಾವಚಿತ್ರಗಳನ್ನು ಇಟ್ಟು ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ಬೆಳಗ್ಗೆಯಿಂದಲೇ ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದ ಹೊರಗೆ ಅಭಿಮಾನಿಗಳು ಸರತಿ ಸಾಲಿನಲ್ಲಿ ನಿಂತಿರುವುದು ಕಂಡು ಬಂದಿದೆ.

‘ಪಂದ್ಯ ವೀಕ್ಷಿಸಲು ನಾವೆಲ್ಲರೂ ಉತ್ಸುಕರಾಗಿದ್ದೇವೆ. ರೋಹಿತ್ ಮತ್ತು ವಿರಾಟ್ ಇಂದು ಉತ್ತಮ ಪ್ರದರ್ಶನ ನೀಡುತ್ತಾರೆ’ ಎಂದು ಭಾವಿಸುವುದಾಗಿ ಅಭಿಮಾನಿಗಳು ನೆರೆದಿರುವ ಮಾಧ್ಯಮಗಳೊಂದಿಗೆ ಮಾತನಾಡುತ್ತಾ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...

ಏಷ್ಯನ್ ಗೇಮ್ಸ್: ಬಿಲ್ಲುಗಾರಿಕೆಯಲ್ಲಿ ಇತಿಹಾಸ ಬರೆದ 17 ವರ್ಷದ ಕುಂಕುಮ್‌ಗೆ ಬಂಗಾರ!

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನ 15ನೇ ದಿನ...