ಕ್ರಿಕೆಟ್ ವಿಶ್ವಕಪ್ ಉದ್ಘಾಟನಾ ಪಂದ್ಯ | ನರೇಂದ್ರ ಮೋದಿ ಸ್ಟೇಡಿಯಂ ಖಾಲಿ ಖಾಲಿ: ಫೋಟೋ ವೈರಲ್

Date:

Advertisements

ಕೋಟ್ಯಂತರ ಕ್ರಿಕೆಟ್ ಅಭಿಮಾನಿಗಳು ಕಾಯುತ್ತಿದ್ದ ವಿಶ್ವಕಪ್‌ ಮಹಾಸಮರಕ್ಕೆ ಇಂದಿನಿಂದ (ಗುರುವಾರ) ಅಧಿಕೃತ ಚಾಲನೆ ಸಿಕ್ಕಿದೆ. ಪ್ರಶಸ್ತಿಗಾಗಿ 10 ತಂಡಗಳು ಸೆಣಸಾಡಲಿವೆ. ಇಂದಿನಿಂದ ನವೆಂಬರ್ 19ರವರೆಗೆ ವಿಶ್ವಕಪ್ ಕದನ ನಡೆಯಲಿದೆ.

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ವಿಶ್ವಕಪ್ ಅದ್ಧೂರಿ ಉದ್ಘಾಟನಾ ಸಮಾರಂಭಕ್ಕೆ ಯೋಜನೆ ಹಾಕಿಕೊಂಡಿದ್ದ ಬಿಸಿಸಿಐ ಕೊನೆ ಗಳಿಗೆಯಲ್ಲಿ ಸಮಾರಂಭ ಕೈಬಿಟ್ಟಿದೆ.

ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ತಂಡಗಳು ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಿವೆ. ಆದರೆ ಈ ಪಂದ್ಯಕ್ಕೆ ಅಭಿಮಾನಿಗಳಿಂದ ಅತ್ಯಂತ ನೀರಸವಾದ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ವಿಶ್ವದ ಅತಿ ದೊಡ್ಡ ಕ್ರೀಡಾಂಗಣ ಎನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಹೆಸರಿನ ಕ್ರೀಡಾಂಗಣ ಸಂಪೂರ್ಣವಾಗಿ ಖಾಲಿ ಖಾಲಿಯಾಗಿದೆ. ಇದರ ಫೋಟೋಗಳು ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗಿವೆ.

Advertisements

ಅಹ್ಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ 1,32,000 ದಷ್ಟು ವೀಕ್ಷಕರು ಕುಳಿತುಕೊಳ್ಳುವ ಸಾಮರ್ಥ್ಯವನ್ನು ಹೊಂದಿದೆ. ಆದರೆ ಇಷ್ಟು ದೊಡ್ಡ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯಕ್ಕೆ ಅಭಿಮಾನಿಗಳು ಅತ್ಯಂತ ನೀರಸವಾದ ಪ್ರತಿಕ್ರಿಯೆ ನೀಡಿದ್ದಾರೆ. ಕೇವಲ 4 ಸಾವಿರ ಮಂದಿ ಭಾಗಿಯಾಗಿರುವುದಾಗಿ ಟ್ವಿಟ್ಟರ್ ಸೇರಿದಂತೆ ಹಲವು ಸೋಷಿಯಲ್ ಮೀಡಿಯಾಗಳಲ್ಲಿ ಬಳಕೆದಾರರು ಮಾಹಿತಿ ಹಂಚಿಕೊಳ್ಳುತ್ತಿದ್ದಾರೆ. ಈ ಬೆಳವಣಿಗೆಯು ಕೇಂದ್ರ ಸರ್ಕಾರ ಹಾಗೂ ಬಿಸಿಸಿಐಯನ್ನು ಮುಜುಗರಕ್ಕೀಡು ಮಾಡಿದೆ.

bjp 18

ಉಚಿತ ಟಿಕೆಟ್ ವಿತರಿಸಿದ್ದ ಬಿಜೆಪಿ ಮುಖಂಡರು

‘ಇಂಡಿಯನ್ ಎಕ್ಸ್‌ಪ್ರೆಸ್’ ಜೊತೆಗೆ ಮಾತನಾಡಿದ್ದ ಬೋಡಕ್‌ದೇವ್ ಪ್ರದೇಶದ ಬಿಜೆಪಿ ಉಪಾಧ್ಯಕ್ಷ ಲಲಿತ್ ವಾಧವನ್, ‘ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಗೊಂಡಿರುವ ಹಿನ್ನೆಲೆಯಲ್ಲಿ ಸುಮಾರು 40 ಸಾವಿರ ಟಿಕೆಟ್‌ಗಳನ್ನು ಗುಜರಾತ್‌ನ ಮಹಿಳೆಯರಿಗೆ ಉಚಿತವಾಗಿ ಹಂಚಿದ್ದೇವೆ. ಜೊತೆಗೆ ಊಟದ ಕೂಪನ್ ಕೂಡ ವಿತರಿಸಿದ್ದೇವೆ. ಅವರೆಲ್ಲರೂ ಉದ್ಘಾಟನಾ ಪಂದ್ಯ ವೀಕ್ಷಿಸಲಿದ್ದಾರೆ. ಸ್ಟೇಡಿಯಂ ಜನರಿಂದ ತುಂಬಿ ತುಳುಕಲಿದೆ’ ಎಂದು ತಿಳಿಸಿದ್ದರು.

ಆದರೆ, ಬಿಜೆಪಿ ವಿತರಿಸಿದ್ದ 40 ಸಾವಿರ ಟಿಕೆಟ್‌ಗಳ ಪೈಕಿ ಅರ್ಧದಷ್ಟೂ ಜನರು ಉದ್ಘಾಟನಾ ಪಂದ್ಯವನ್ನು ವೀಕ್ಷಿಸಲು ಸ್ಟೇಡಿಯಂಗೆ ಬಾರದಿರುವುದು ಈಗ ಗುಜರಾತ್ ಹಾಗೂ ಕೇಂದ್ರದ ಬಿಜೆಪಿ ನಾಯಕರನ್ನು ಮುಜುಗರಕ್ಕೀಡು ಮಾಡಿದೆ.

ಈ ರೀತಿಯ ಬೆಳವಣಿಗೆಗೆ ಬಿಸಿಸಿಐ ಕಾರ್ಯದರ್ಶಿ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರ ಮಗ ಜಯ್ ಶಾ ಅವರೇ ಕಾರಣ ಎಂದು ನೆಟ್ಟಿಗರು ಟ್ರೋಲ್ ಮಾಡುತ್ತಿದ್ದಾರೆ. ಬಿಸಿಸಿಐನಲ್ಲಿ ಜಯ್ ಶಾ ದುರಾಡಳಿತ ಕ್ರಿಕೆಟ್ ಅನ್ನು ಈ ಸ್ಥಿತಿಗೆ ತಂದು ನಿಲ್ಲಿಸಿದೆ ಎನ್ನುವ ಟೀಕೆಗಳು ವ್ಯಕ್ತವಾಗಿವೆ. ಪ್ರಧಾನಿ ಮೋದಿ ಹಾಗೂ ಬಿಜೆಪಿಯವರು ಕ್ರೀಡೆಯಲ್ಲೂ ಹಸ್ತಕ್ಷೇಪ ಮಾಡಿದರೆ ಈ ರೀತಿಯ ಪರಿಣಾಮ ಉಂಟಾಗದಿರುತ್ತದಾ” ಎಂದು ಕೆಲವರು ಪ್ರಶ್ನಿಸುತ್ತಿದ್ದಾರೆ.

ನರೇಂದ್ರ ಮೋದಿ ಕ್ರೀಡಾಂಗಣ 1,32,000ದಷ್ಟು ಆಸನದ ಸಾಮರ್ಥ್ಯವಿದ್ದರೂ ಕೇವಲ 3 ರಿಂದ 4 ಸಾವಿರ ಜನ ಭಾಗವಹಿಸಿದ್ದಾರೆ. ಅಂದರೆ ಕೇವಲ ಶೇ.3 ರಷ್ಟು ಮಂದಿ ಮಾತ್ರ ಎಂದು ‘ದಿ ಡೈಲಿ ಮೇಲ್’ ವರದಿ ಮಾಡಿದೆ.

ಇಷ್ಟು ದೊಡ್ಡ ಕ್ರೀಡಾಂಗಣದಲ್ಲಿ ಈ ಉದ್ಘಾಟನಾ ಪಂದ್ಯವನ್ನು ಆಯೋಜನೆ ಮಾಡಿ ಮುಜುಗರಕ್ಕೆ ಒಳಗಾಗುವ ಅಗತ್ಯವಿತ್ತಾ ಎನ್ನುವ ಪ್ರಶ್ನೆಗಳು ಈಗ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಎದ್ದಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

ಕೇರಳ ಭೇಟಿ ರದ್ದುಗೊಳಿಸಿದ ಮೆಸ್ಸಿ ನೇತೃತ್ವದ ಅರ್ಜೆಂಟೀನಾ ತಂಡ

ಲಿಯೊನೆಲ್ ಮೆಸ್ಸಿ ನೇತೃತ್ವದ ಫೀಫಾ ವಿಶ್ವಕಪ್ ವಿಜೇತ ಅರ್ಜೆಂಟೀನಾ ತಂಡವನ್ನು ಕೇರಳಕ್ಕೆ...

Download Eedina App Android / iOS

X