2023ರ ಏಕದಿನ ವಿಶ್ವಕಪ್‌ಗೆ ಭಾರತ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.
15 ಮಂದಿಯ ತಂಡವನ್ನು ಪ್ರಕಟಿಸಿದ್ದು ಕೆಎಲ್ ರಾಹುಲ್ ಮತ್ತು ಇಶಾನ್ ಕಿಶನ್ ತಂಡಕ್ಕೆ ಸೇರ್ಪಡೆಗೊಂಡಿದ್ದಾರೆ. ಶ್ರೇಯಸ್ ಅಯ್ಯರ್ ಮತ್ತು ಸೂರ್ಯಕುಮಾರ್ ಯಾದವ್ ಕೂಡ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ. ಸಂಜು ಸ್ಯಾಮ್ಸನ್ ಹೆಸರನ್ನು ಪಟ್ಟಿಯಿಂದ ಬಿಡಲಾಗಿದೆ.
ತಂಡಗಳು ತಮ್ಮ ತಾತ್ಕಾಲಿಕ ತಂಡದಲ್ಲಿ ಬದಲಾವಣೆಗಳನ್ನು ಮಾಡಲು ಸೆಪ್ಟೆಂಬರ್ 28ರವರೆಗೆ ಅನುಮತಿಸಲಾಗಿದೆ. ಏಕದಿನ ವಿಶ್ವಕಪ್ ಅಕ್ಟೋಬರ್ 5ರಂದು ಭಾರತದಲ್ಲಿ ಪ್ರಾರಂಭವಾಗಲಿದೆ.
ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್