ಎಲ್ಲ ಮಾದರಿ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ ವೃದ್ಧಿಮಾನ್ ಸಾಹಾ

Date:

ಟೀಂ ಇಂಡಿಯಾದ ಬ್ಯಾಟರ್‌ ಹಾಗೂ ವಿಕೆಟ್ ಕೀಪರ್ ವೃದ್ಧಿಮಾನ್ ಸಾಹಾ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ. 18 ವರ್ಷಗಳ ಸುದೀರ್ಘ ಕ್ರಿಕೆಟ್ ಬದುಕಿನಿಂದ ಸಾಹಾ ನಿವೃತ್ತಿ ಘೋಷಿಸಿದ್ದಾರೆ.

- Advertisement -

ತಮ್ಮ 18 ವರ್ಷಗಳ ವೃತ್ತಿಜೀವನದಲ್ಲಿ ವೃದ್ಧಿಮಾನ್ ಸಾಹಾ 15 ವರ್ಷಗಳ ಕಾಲ ಬಂಗಾಳ ಪರವಾಗಿ ಮತ್ತು 2 ವರ್ಷಗಳ ಕಾಲ ತ್ರಿಪುರಾ ಪರ ದೇಶೀಯ ಕ್ರಿಕೆಟ್ ಆಡಿದ್ದಾರೆ. ಈ ವೇಳೆ 142 ಪಂದ್ಯಗಳನ್ನಾಡಿರುವ ಅವರು 14 ಶತಕಗಳೊಂದಿಗೆ ಒಟ್ಟು 7169 ರನ್ ಕಲೆಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇನ್ನು 2010 ರಲ್ಲಿ ಟೀಮ್ ಇಂಡಿಯಾ ಪರ ಪಾದಾರ್ಪಣೆ ಮಾಡಿದ್ದ ವೃದ್ಧಿಮಾನ್ ಸಾಹ 40 ಟೆಸ್ಟ್ ಪಂದ್ಯಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ವೇಳೆ 56 ಇನಿಂಗ್ಸ್ ಆಡಿರುವ ಅವರು 3 ಶತಕ ಹಾಗೂ 6 ಅರ್ಧಶತಕಗಳೊಂದಿಗೆ ಒಟ್ಟು 1353 ರನ್ ಪೇರಿಸಿದ್ದಾರೆ.

ಹಾಗೆಯೇ ಭಾರತದ ಪರ 9 ಏಕದಿನ ಪಂದ್ಯಗಳಲ್ಲೂ ವಿಕೆಟ್ ಕೀಪರ್ ಆಗಿ ಕಣಕ್ಕಿಳಿದಿರುವ ಸಾಹ ಕೇವಲ 41 ರನ್​ಗಳಿಸಲಷ್ಟೇ ಶಕ್ತರಾಗಿದ್ದರು. ಹೀಗಾಗಿ 2014 ರ ಬಳಿಕ ಅವರಿಗೆ ಭಾರತ ಏಕದಿನ ತಂಡದಲ್ಲಿ ಅವಕಾಶ ಸಿಕ್ಕಿರಲಿಲ್ಲ.

ಈ ಸುದ್ದಿ ಓದಿದ್ದೀರಾ? ಐಸಿಸಿ ವರ್ಷದ ಕ್ರಿಕೆಟಿಗ ಪ್ರಶಸ್ತಿಗೆ ಬುಮ್ರಾ ಭಾಜನ: ಮೊದಲ ಭಾರತೀಯ ಬೌಲರ್‌ ಎಂಬ ಹಿರಿಮೆ

ಇನ್ನು 2021ರವರೆಗೆ ಭಾರತ ಟೆಸ್ಟ್ ತಂಡದಲ್ಲಿ ಕಾಣಿಸಿಕೊಂಡಿದ್ದ ವೃದ್ಧಿಮಾನ್ ಸಾಹ ಅತ್ಯುತ್ತಮ ವಿಕೆಟ್ ಕೀಪಿಂಗ್ ಮೂಲಕ ಗಮನ ಸೆಳೆದಿದ್ದರು. ಇದೀಗ ತಮ್ಮ 40ನೇ ವಯಸ್ಸಿನಲ್ಲಿ ಎಲ್ಲ ಮಾದರಿಯ ಕ್ರಿಕೆಟ್​ಗೆ ವಿದಾಯ ಹೇಳಿದ್ದಾರೆ.

ಸಹಾ ತಮ್ಮ ಕೊನೆಯ ಪಂದ್ಯದಲ್ಲಿ ವಿಶೇಷವಾದುದನ್ನು ಮಾಡಲು ಸಾಧ್ಯವಾಗಲಿಲ್ಲ. ಸಹಾಗೆ ಮೊದಲ ಇನಿಂಗ್ಸ್‌ನಲ್ಲಿ ಸಿಕ್ಸರ್ ಸಿಡಿಸಲು ಸಾಧ್ಯವಾಗಲಿಲ್ಲ. ಅಲ್ಲದೆ, ಪಂದ್ಯವನ್ನು ಇನಿಂಗ್ಸ್‌ನಿಂದ ಗೆದ್ದುಕೊಂಡ ಬಂಗಾಳಕ್ಕೆ ಎರಡನೇ ಇನಿಂಗ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಅವಕಾಶವೂ ಸಿಗಲಿಲ್ಲ. ಬಂಗಾಳ ತಂಡ ಪಂಜಾಬ್ ತಂಡವನ್ನು 1 ಇನಿಂಗ್ಸ್ ಮತ್ತು 13 ರನ್‌ಗಳಿಂದ ಸೋಲಿಸಿತು.

“ಈಗ ಜೀವನದಲ್ಲಿ ಹೊಸ ಅಧ್ಯಾಯವನ್ನು ಪ್ರಾರಂಭಿಸುವ ಸಮಯ. ಕುಟುಂಬ ಮತ್ತು ಸ್ನೇಹಿತರಿಗೆ ನಮ್ಮನ್ನು ಮೀಸಲಿಡುವ ಸಮಯ. ಕ್ರಿಕೆಟ್‌ ಆಡುವ ಸಮಯದಲ್ಲಿ ಸಾಧ್ಯವಾಗದ ಆ ಕ್ಷಣಗಳನ್ನು ಬದುಕಲು ಮತ್ತು ಅನುಭವಿಸಲು ನಾನು ಬಯಸುತ್ತೇನೆ” ಎಂದಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಷ್ಯನ್ ಗೇಮ್ಸ್: ಲವ್ಲಿನಾಗೆ ಚಿನ್ನ, ಬಿಲ್ಲುಗಾರಿಕೆಯಲ್ಲಿ ಐತಿಹಾಸಿಕ ಸಾಧನೆ; ಪದಕ ಪಟ್ಟಿಯಲ್ಲಿ ಭಾರತಕ್ಕೆ 6ನೇ ಸ್ಥಾನ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಫೈನಲ್‌ಗೇರಿದ ಭಾರತ ಹಾಕಿ ತಂಡ; ಕುಸ್ತಿಯಲ್ಲಿ ನಿತೇಶ್‌ಗೆ ಬೆಳ್ಳಿ

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದ 13ನೇ ದಿನವಾದ...

ಏಷ್ಯಾಡ್’ನಲ್ಲಿ ಶ್ರೀಲಂಕಾ ಸೋಲಿಸಿದ ಟೀಮ್ ಇಂಡಿಯಾ: ಚಿನ್ನದ ಪದಕಕ್ಕಾಗಿ ಪಾಕ್ ಎದುರು ಸೆಣಸು

ಸಂಘಟಿತ ಪ್ರದರ್ಶನ ನೀಡಿದ ಭಾರತ ಪುರುಷರ ಕ್ರಿಕೆಟ್ ತಂಡ, ಇಲ್ಲಿ ನಡೆಯುತ್ತಿರುವ...

ಗಿಲ್ ಅಮೋಘ ದ್ವಿಶತಕದಾಟ, ರೋಹಿತ್ ಶತಕ: 406 ರನ್ ಗುರಿ ಮುಟ್ಟಿ ಐತಿಹಾಸಿಕ ಜಯ ಸಾಧಿಸಿದ ಭಾರತ

ಗುವಾಹಟಿಯಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡ ಇತಿಹಾಸ...