ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌ | ಭಾರತದ ಗೆಲುವಿಗೆ 444 ರನ್‌ಗಳ ಕಠಿಣ ಗುರಿ

Date:

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌ ಪಂದ್ಯದಲ್ಲಿ ಭಾರತ ಗೆಲುವಿಗೆ ಆಸ್ಟ್ರೇಲಿಯಾ, 444 ರನ್‌ಗಳ ಕಠಿಣ ಗುರಿಯನ್ನು ಮುಂದಿಟ್ಟಿದೆ.

- Advertisement -

ಲಂಡನ್‌ನ ಓವಲ್‌ನಲ್ಲಿ ನಡೆಯುತ್ತಿರುವ ಫೈನಲ್‌ ಪಂದ್ಯದ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಶನಿವಾರ, 8 ವಿಕೆಟ್‌ ನಷ್ಟದಲ್ಲಿ 270 ರನ್‌ಗಳಿಸಿದ್ದ ವೇಳೆ ಆಸೀಸ್‌, ಇನ್ನಿಂಗ್ಸ್‌ ಡಿಕ್ಲೇರ್‌ ಘೋಷಿಸಿದೆ. ಇದರೊಂದಿಗೆ ಕಮ್ಮಿನ್ಸ್‌ ಪಡೆ ಒಟ್ಟು 443 ರನ್‌ಗಳ ಮುನ್ನಡೆ ಸಾಧಿಸಿದ್ದು, ಒಂದೂವರೆ ದಿನಗಳ ಆಟ ಇನ್ನೂ ಬಾಕಿಯಿದೆ. ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವನ್ನು ತಡೆಯಲು ಟೀಮ್‌ ಇಂಡಿಯಾ ಬ್ಯಾಟರ್‌ಗಳು ದೊಡ್ಡ ಸಾಹಸವನ್ನೇ ಮಾಡಬೇಕಾಗಿದೆ.   

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

4 ವಿಕೆಟ್ ನಷ್ಟದಲ್ಲಿ 123 ರನ್ ಗಳಿಂದ ಮೂರನೇ ದಿನದಾಟ ಆರಂಭಿಸಿದ್ದ ಆಸ್ಟ್ರೇಲಿಯಾ ತಂಡ, ಶನಿವಾರ, ಭೊಜನ ವಿರಾಮದ ವೇಳೆಗೆ 6 ವಿಕೆಟ್‌ ನಷ್ಟದಲ್ಲಿ 223 ರನ್‌ಗಳಿಸಿತ್ತು. ವಿಕೆಟ್‌ ಕೀಪರ್‌ ಅಲೆಕ್ಸ್‌ ಕ್ಯಾರಿ ಅರ್ಧ ಶತಕ (66*) ಗಳಿಸಿದರೆ, 57 ಎಸೆತಗಳನ್ನು ಎದುರಿಸಿದ ವೇಗಿ ಮಿಚೆಲ್‌ ಸ್ಟಾರ್ಕ್‌ 41 ರನ್‌ಗಳಿಸುವ ಮೂಲಕ ತಂಡದ ಲೀಡ್‌ ಹೆಚ್ಚಿಸಲು ನೆರವಾದರು. ಬಳಿಕ ಬಂದ ನಾಯಕ ಪ್ಯಾಟ್‌ ಕಮ್ಮಿನ್ಸ್‌ (5 ರನ್‌) ತಮ್ಮ ವಿಕೆಟ್‌ ನಷ್ಟವಾಗುತ್ತಲೇ ಇನ್ನಿಂಗ್ಸ್‌ ಡಿಕ್ಲೇರ್‌ ಘೋಷಿಸಿದರು.

ಭಾರತದ ಪರ ಬೌಲಿಂಗ್‌ನಲ್ಲಿ ಮಿಂಚಿದ ರವೀಂದ್ರ ಜಡೇಜಾ 58 ರನ್‌ ನೀಡಿ ಮೂರು ವಿಕೆಟ್‌ ಪಡೆದರೆ,  ಉಮೇಶ್ ಯಾದವ್ ಮತ್ತು ಮುಹಮ್ಮದ್ ಸಿರಾಜ್ ತಲಾ ಎರಡು ವಿಕೆಟ್ ಪಡೆದರು.

ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ ಗಳಿಸಿದ್ದ 469ರನ್‌ಗಳಿಗೆ ಉತ್ತರವಾಗಿ ಟೀಮ್‌ ಇಂಡಿಯಾ 296 ರನ್‌ಗಳಿಗೆ ಸರ್ವಪತನ ಕಂಡಿತ್ತು. ಅಗ್ರ ಕ್ರಮಾಂಕದ ಬ್ಯಾಟರ್‌ಗಳು ಸಂಪೂರ್ಣ ವೈಫಲ್ಯ ಕಂಡರೂ ಸಹ, ಮಧ್ಯಮ ಕ್ರಮಾಂಕದಲ್ಲಿ ಅಜಿಂಕ್ಯಾ ರಹಾನೆ (89), ರವೀಂದ್ರ ಜಡೇಜಾ (48) ಹಾಗೂ ಶಾರ್ದೂಲ್‌ ಠಾಕೂರ್‌ 51 ರನ್‌ ಗಳಿಸುವ ಮೂಲಕ ಫಾಲೋಅನ್‌ ತಪ್ಪಿಸುವಲ್ಲಿ ನೆರವಾಗಿದ್ದರು.

ವಿಶ್ವ ಟೆಸ್ಟ್‌ ಚಾಂಪಿಯನ್‌ಶಿಪ್‌ʼ ಫೈನಲ್‌

ಆಸ್ಟ್ರೇಲಿಯಾ; ಮೊದಲ ಇನ್ನಿಂಗ್ಸ್‌ 469. ದ್ವಿತೀಯ ಇನ್ನಿಂಗ್ಸ್‌ 270/8 ಡಿಕ್ಲೇರ್‌

ಭಾರತ; ಮೊದಲ ಇನ್ನಿಂಗ್ಸ್‌ 296

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...