ಟೆಸ್ಟ್‌ ಚಾಂಪಿ​ಯ​ನ್‌​ಶಿ​ಪ್‌ ಫೈನಲ್‌ | ಅಭ್ಯಾಸದ ವೇಳೆ ರೋಹಿತ್‌ ಶರ್ಮಾ ಕೈ ಬೆರಳಿಗೆ ಗಾಯ

Date:

ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ರೋಹಿತ್‌ ಶರ್ಮಾ ಸಾರಥ್ಯದ ಟೀಮ್‌ ಇಂಡಿಯಾ ಮತ್ತು ಆಸ್ಟ್ರೇಲಿಯಾ ತಂಡಗಳು ಬುಧವಾರದಿಂದ ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ಆರಂಭವಾಗುವ ʻಫೈನಲ್‌ ಪೈಟ್‌ʼನಲ್ಲಿ ಮುಖಾಮುಖಿಯಾಗಲಿವೆ.

ಡಬ್ಲ್ಯೂಟಿಸಿ ಫೈನಲ್‌ ಪಂದ್ಯ ಪ್ರಾರಂಭವಾಗಲು ಒಂದೇ ದಿನ ಬಾಕಿ ಉಳಿದಿದೆ. ಆದರೆ ಈ ವೇಳೆ ಅಭ್ಯಾಸದಲ್ಲಿ ತೊಡಗಿದ್ದ ನಾಯಕ ರೋಹಿತ್‌ ಶರ್ಮಾ ಕೈ ಬೆರಳಿಗೆ ಗಾಯವಾಗಿ ಮೈದಾನ ತೊರೆದಿದ್ದಾರೆ. ಇದು ಟೀಮ್‌ ಇಂಡಿಯಾ ಪಾಳಯದಲ್ಲಿ ಆತಂಕಕ್ಕೆ ಕಾರಣವಾಗಿದೆ.

ಮಂಗಳವಾರ ನೆಟ್ಸ್‌ನಲ್ಲಿ ಬ್ಯಾಟಿಂಗ್ ಮಾಡುವ ಸಂದರ್ಭದಲ್ಲಿ ರೋಹಿತ್ ಶರ್ಮಾ ಅವರ ಎಡಗೈ ಹೆಬ್ಬೆರಳಿಗೆ ಗಾಯವಾಗಿದೆ. ಕೂಡಲೇ ತಂಡದ ಫಿಸಿಯೋ ರೋಹಿತ್‌ ಅವರಿಗೆ ಚಿಕಿತ್ಸೆ ನೀಡಿದ್ದಾರೆ. ವಿಶ್ರಾಂತಿ ಪಡೆದ ಬಳಿಕ ನೆಟ್ಸ್‌ಗೆ ವಾಪಸ್ಸಾದ ರೋಹಿತ್‌ ಶರ್ಮಾ, ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಜೊತೆ ಕೆಲಕಾಲ ಚರ್ಚೆ ನಡೆಸಿದ ನಂತರ ಅಭ್ಯಾಸ ಮಾಡದೇ ಇರಲು ನಿರ್ಧಿರಿಸಿ ಮೈದಾನದಿಂದ ಹೊರನಡೆದಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ರೋಹಿತ್ ಶರ್ಮಾ ಗಾಯವು ಗಂಭೀರವಾಗಿದೆಯೇ ಎಂಬುದರ ಕುರಿತು ಬಿಸಿಸಿಐ ಯಾವುದೇ ಅಧಿಕೃತ ಹೇಳಿಕೆ ನೀಡಿಲ್ಲ. ವಿರಾಟ್ ಕೊಹ್ಲಿ, ಶುಭಮನ್ ಗಿಲ್ ಸೇರಿದಂತೆ ಪ್ರಮುಖ ಆಟಗಾರರು  ಇಂದಿನ ʻಐಚ್ಛಿಕ ಅಭ್ಯಾಸʼಕ್ಕೆ ಹಾಜರಾಗಿರಲಿಲ್ಲ.

ಗಾಯದ ಕಾರಣ ಪ್ರಮುಖರು ಗೈರು

ಸತತ ಎರಡನೇ ಬಾರಿಗೆ ಡಬ್ಲ್ಯೂಟಿಸಿ ಫೈನಲ್‌ ಪ್ರವೇಶಿಸಿರುವ ಭಾರತ, ಈ ಬಾರಿ ಬಲಿಷ್ಠ ಆಸ್ಟ್ರೇಲಿಯಾ ತಂಡದ ಸವಾಲನ್ನು ಎದುರಿಸಬೇಕಾಗಿದೆ. ಈಗಾಗಲೇ ಗಾಯದ ಸಮಸ್ಯೆ ಭಾರತ ತಂಡವನ್ನು ಕಾಡುತ್ತಿದೆ. ತಂಡದ ಪ್ರಮುಖ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ, ಆರಂಭಿಕ ಬ್ಯಾಟರ್ ಕೆ.ಎಲ್ ರಾಹುಲ್, ಶ್ರೇಯಸ್ ಅಯ್ಯರ್, ವಿಕೆಟ್‌ ಕೀಪರ್ ರಿಷಬ್ ಪಂತ್ ಗಾಯದ ಸಮಸ್ಯೆಯಿಂದಾಗಿ ಮಹತ್ವದ ಫೈನಲ್‌ ಪಂದ್ಯದಿಂದ ಹೊರಗುಳಿದಿದ್ದಾರೆ. ‌ಅತ್ತ ಆಸ್ಟ್ರೇಲಿಯಾ ತಂಡದ ಪ್ರಧಾನವೇಗಿ ಜೋಶ್ ಹೇಜಲ್‌ವುಡ್ ಸಹ ಗಾಯದ ಕಾರಣ ಫೈನಲ್ ಪಂದ್ಯದಿಂದ ಹೊರಗುಳಿದಿದ್ದಾರೆ.

2013ರ ಬಳಿಕ ಟೀಮ್‌ ಇಂಡಿಯಾ, ಐಸಿಸಿ ಆಯೋಜಿಸುವ ಯಾವುದೇ ಕೂಟದಲ್ಲೂ ಪ್ರಶಸ್ತಿ ಗೆದ್ದಿಲ್ಲ. 2021ರಲ್ಲಿ ಚೊಚ್ಚಲ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನ ಫೈನಲ್ ಪ್ರವೇಶಿಸಿತ್ತಾದರೂ ಸಹ,  ನ್ಯೂಜಿಲೆಂಡ್ ಯಂಡಕ್ಕೆ ಶರಣಾಗಿತ್ತು.

ಲಂಡ​ನ್‌ನ ದಿ ಓವಲ್‌ ಕ್ರೀಡಾಂಗ​ಣದಲ್ಲಿ ಪ್ರತಿಷ್ಠಿತ ʻವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್‌ ಫೈನಲ್‌ʼ ಪಂದ್ಯ ನಡೆಯಲಿದ್ದು, ಭಾರತೀಯ ಕಾಲಮಾನ ಮಧ್ಯಾಹ್ನ 3.30ಕ್ಕೆ ಪಂದ್ಯ ಆರಂಭವಾಗಲಿದೆ.

ಭಾರತ ತಂಡ: ರೋಹಿತ್‌ ಶರ್ಮಾ(ನಾಯಕ), ಶುಭ್‌ಮನ್‌ ಗಿಲ್‌, ಚೇತೇಶ್ವರ್‌ ಪೂಜಾರ, ವಿರಾಟ್‌ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್‌.ಭರತ್‌, ಆರ್‌.ಅಶ್ವಿನ್‌, ರವೀಂದ್ರ ಜಡೇಜಾ, ಅಕ್ಷರ್‌ ಪಟೇಲ್‌, ಶಾರ್ದೂಲ್‌ ಠಾಕೂರ್‌, ಮುಹಮದ್‌ ಶಮಿ, ಮುಹಮದ್‌ ಸಿರಾಜ್‌, ಉಮೇಶ್‌ ಯಾದವ್‌, ಜಯದೇವ್‌ ಉನಾದ್ಕತ್‌, ಇಶಾನ್‌ ಕಿಶನ್‌.

ಮೀಸಲು ಆಟಗಾರರು: ಯಶಸ್ವಿ ಜೈಸ್ವಾಲ್‌, ಮುಕೇಶ್‌ ಕುಮಾರ್‌, ಸೂರ್ಯಕುಮಾರ್‌ ಯಾದವ್‌.

ಆಸ್ಟ್ರೇಲಿಯಾ ತಂಡ:

ಪ್ಯಾಟ್ ಕಮಿನ್ಸ್‌(ನಾಯಕ), ಡೇವಿಡ್ ವಾರ್ನರ್‌, ಉಸ್ಮಾನ್ ಖವಾಜ, ಮ್ಯಾಟ್ ರೆನ್ಶಾ, ಮಾರ್ಕಸ್ ಹ್ಯಾರಿಸ್‌, ಮಾರ್ನಸ್ ಲಬುಶೇನ್‌, ಸ್ಟೀವ್ ಸ್ಮಿತ್‌, ಟ್ರಾವಿಸ್ ಹೆಡ್‌, ಕ್ಯಾಮರೋನ್ ಗ್ರೀನ್‌, ಮಿಚೆಲ್‌ ಮಾರ್ಷ್‌, ಅಲೆಕ್ಸ್‌ ಕೇರ್ರಿ, ಜೋಶ್ ಇಂಗ್ಲಿಸ್‌, ಮಿಚೆಲ್ ಸ್ಟಾರ್ಕ್, ಸ್ಕಾಟ್‌ ಬೋಲೆಂಡ್‌, ನೇಥನ್ ಲಯನ್‌, ಟೋಡ್ ಮರ್ಫಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್‌ನಲ್ಲಿ ಹೊಸ ದಾಖಲೆ ಬರೆದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 22ರಂದು ನಡೆದ 2024ರ ಇಂಡಿಯನ್...

ಐಪಿಎಲ್ | ರಾಜಸ್ಥಾನಕ್ಕೆ ಜಯ: ಆರ್‌ಸಿಬಿ ಕಪ್ ಕನಸು ಮತ್ತೆ ಭಗ್ನ

ಲೀಗ್ ಹಂತದ ಪ್ರಮುಖ ಆರು ಪಂದ್ಯಗಳನ್ನು ಸತತವಾಗಿ ಗೆದ್ದು, ಪ್ಲೇ ಆಫ್...

ಎಲಿಮಿನೇಟರ್ ಪಂದ್ಯ | ರಾಜಸ್ಥಾನ ಗೆಲುವಿಗೆ 173 ರನ್‌ಗಳ ಸ್ಪರ್ಧಾತ್ಮಕ ಗುರಿ ನೀಡಿದ ಆರ್‌ಸಿಬಿ

ಗುಜರಾತ್‌ನ ಅಹ್ಮದಬಾದ್‌ನಲ್ಲಿರುವ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಇಂದು ನಡೆಯುತ್ತಿರುವ ಐಪಿಎಲ್ ಟೂರ್ನಿಯ...