WTC FINAL | ಗೆಲುವಿನ ಹೋರಾಟದಲ್ಲಿ ದಕ್ಷಿಣ ಆಫ್ರಿಕಾ; ರೋಚಕ ಹಂತ ತಲುಪಿದ ಪಂದ್ಯ

Date:

ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ನಡುವೆ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ವಿಶ್ವ ಟೆಸ್ಟ್‌ ಚಾಂಪಿಯನ್‌ ಶಿಪ್ ಫೈನಲ್‌ ಪಂದ್ಯ ರೋಚಕ ಹಂತಕ್ಕೆ ತಲುಪಿದೆ.

- Advertisement -

ಮೂರನೇ ದಿನವಾದ ಇಂದು ಆಸ್ಟ್ರೇಲಿಯಾ ನೀಡಿದ 282 ರನ್‌ಗಳ ಗುರಿಯನ್ನು ಬೆನ್ನಟ್ಟುತ್ತಿರುವ ದಕ್ಷಿಣ ಆಫ್ರಿಕಾ ಬ್ಯಾಟರ್‌ಗಳು ತಮ್ಮ 2ನೇ ಇನಿಂಗ್ಸ್‌ನಲ್ಲಿ 35 ಓವರ್‌ಗಳಲ್ಲಿ 2 ವಿಕೆಟ್‌ ಕಳೆದುಕೊಂಡು 130 ರನ್‌ ಪೇರಿಸಿದ್ದಾರೆ. ಹರಿಣಿಗಳ ಪಡೆ ಚೊಚ್ಚಲ ಐಸಿಸಿ ಟ್ರೋಫಿ ಹಿಡಿಯಲು 152 ರನ್‌ಗಳ ಅಗತ್ಯವಿದೆ. ಅದೇ ರೀತಿ ಎರಡನೇ ಬಾರಿ ಚಾಂಪಿಯನ್‌ ಶಿಪ್ ಪಡೆಯಲು ಆಸೀಸ್‌ ತಂಡ ಬೇಗನೆ ದಕ್ಷಿಣ ಆಫ್ರಿಕಾ 8 ಬ್ಯಾಟರ್‌ಗಳನ್ನು ಪೆವಿಲಿಯನ್‌ಗೆ ಕಳಿಸಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಏಡನ್ ಮಾರ್ಕರಮ್ ಅರ್ಧ ಶತಕ ಪೂರೈಸಿ ಅಜೇಯವಾಗಿ ಆಟವಾಡುತ್ತಿದ್ದಾರೆ. ಇವರಿಗೆ ಜೊತೆಯಾಗಿ ತೆಂಬಾ ಬವುಮಾ 33 ರನ್‌ ಗಳಿಸಿ ಕ್ರೀಸಿನಲ್ಲಿದ್ದಾರೆ. 91 ಚೆಂಡುಗಳನ್ನು ಎದುರಿಸಿರುವ ಮಾರ್ಕರಮ್ 4 ಬೌಂಡರಿಗಳೊಂದಿಗೆ 61 ರನ್‌ ಪೇರಿಸಿದ್ದಾರೆ. ಇದಕ್ಕೂ ಮುನ್ನ ವಯಾನ್ ಮುಡ್ಲರ್ 27 ಹಾಗೂ ರಿಯಾನ್‌ ರಿಕಲ್ಟನ್‌ 6 ಗಳಿಸಿ ಸ್ಟಾರ್ಕ್‌ ಬೌಲಿಂಗ್‌ನಲ್ಲಿ ಔಟಾದರು.

ಮೂರನೇ ದಿನದಾಟವನ್ನು 144/8 ರನ್‌ನೊಂದಿಗೆ 2ನೇ ಇನಿಂಗ್ಸ್‌ ಆರಂಭಿಸಿದ ಆಸ್ಟ್ರೇಲಿಯಾ ತಂಡ ಪಾನೀಯ ವಿರಾಮದ ವೇಳೆಗೆ 65 ಓವರ್‌ಗಳಲ್ಲಿ 207 ರನ್‌ ಗಳಿಸಿ ಆಲೌಟ್‌ ಆಗುವುದರೊಂದಿಗೆ 281 ರನ್‌ ಮುನ್ನಡೆ ಗಳಿಸಿತು. ಕೊನೆಯವರೆಗೂ ಉತ್ತಮ ಆಟವಾಡಿದ ಮಿಷಲ್‌ ಸ್ಟಾರ್ಕ್‌ 5 ಬೌಂಡರಿಗಳೊಂದಿಗೆ ಅಜೇಯ 58 ರನ್‌ ಗಳಿಸಿದರು.

ಇದನ್ನು ಓದಿದ್ದೀರಾ? ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್​ ಫೈನಲ್‌ | ರಬಾಡ ಮಾರಕ ದಾಳಿ; 212 ರನ್‌ಗಳಿಗೆ ಆಸೀಸ್‌ ಆಲೌಟ್

ಮೃತರಿಗೆ ಆಟಗಾರರಿಂದ ಗೌರವ ಸಲ್ಲಿಕೆ

ಗುಜರಾತ್‌ನಲ್ಲಿ ಏರ್ ಇಂಡಿಯಾ ವಿಮಾನ ಅಪಘಾತದಲ್ಲಿ ಮೃತಪಟ್ಟ ಸಂತ್ರಸ್ತರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್(ಡಬ್ಲ್ಯೂಟಿಸಿ) ಫೈನಲ್‌ ಪಂದ್ಯ ಆಡುತ್ತಿರುವ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾ ಆಟಗಾರರು ಮೌನಾಚರಣೆ ಹಾಗೂ ಕಪ್ಪು ಪಟ್ಟಿ ಧರಿಸುವ ಮೂಲಕ ಗೌರವ ಸಲ್ಲಿಸಿದರು.

ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ನಡೆಯುತ್ತಿರುವ ಡಬ್ಲ್ಯೂಟಿಸಿ ಫೈನಲ್‌ನ ಮೂರನೇ ದಿನದಾಟಕ್ಕೂ ಮುನ್ನ ದಕ್ಷಿಣ ಆಫ್ರಿಕಾ ಮತ್ತು ಆಸ್ಟ್ರೇಲಿಯಾದ ಆಟಗಾರರು ಒಂದು ನಿಮಿಷ ಮೌನ ಆಚರಿಸಿದರು. ಅಲ್ಲದೆ ತೋಳಿಗೆ ಕಪ್ಪು ಪಟ್ಟಿ ಮೈದಾನಕ್ಕಿಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಇಲ್ಲ: ಬಡತನ ಮೆಟ್ಟಿ ನಿಂತು ಏಷ್ಯಾಡ್‌ನಲ್ಲಿ ಚಿನ್ನ ಗೆದ್ದ ನೀರು ದಂಡಾ

ಮನೆಯಲ್ಲಿ ಸ್ಮಾರ್ಟ್‌ಫೋನ್, ಟಿವಿ ಸೇರಿದಂತೆ ಯಾವೊಂದು ಸೌಕರ್ಯವೂ ಇಲ್ಲ. ಕೈಯಲ್ಲಿ ಬಿಪಿಎಲ್...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ...

ವಿರಾಟ್ ‘ವಿಶ್ವ’ರೂಪ: 15 ಸಾವಿರ ರನ್ ಗಡಿ ದಾಟಿ ಸಚಿನ್ ದಾಖಲೆ ಹಿಂದಿಕ್ಕಿದ ಕೊಹ್ಲಿ

ಕೇರಳದ ತಿರುವನಂತಪುರದಲ್ಲಿರುವ ಗ್ರೀನ್‌ಫೀಲ್ಡ್‌ ಅಂತರರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ವೆಸ್ಟ್ ಇಂಡೀಸ್...