ಯಶಸ್ವಿ ಜೈಸ್ವಾಲ್ ಎರಡು ದ್ವಿಶಕ ಸಾಧನೆ: ಐಸಿಸಿ ಟಾಪ್ 20 ಟೆಸ್ಟ್ ಶ್ರೇಯಾಂಕದಲ್ಲಿ ಜೈಸ್ವಾಲ್‌ಗೆ ಸ್ಥಾನ

Date:

ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್‌ ಕ್ರಿಕೆಟ್ ಸರಣಿಯಲ್ಲಿ ಸತತ ಎರಡು ದ್ವಿಶತಕ ಸಾಧನೆ ಮಾಡಿರುವ ಟೀಂ ಇಂಡಿಯಾದ ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್‌ ಅವರು ಐಸಿಸಿ ಪುರುಷರ ಟೆಸ್ಟ್‌ ಶ್ರೇಯಾಂಕದ 20ರ ಬಳಗದಲ್ಲಿ 14ನೇ ಸ್ಥಾನ ಪಡೆದಿದ್ದಾರೆ.

ಜೈಸ್ವಾಲ್ ಇಂಗ್ಲೆಂಡ್‌ ವಿರುದ್ಧದ ಟೆಸ್ಟ್‌ ಸರಣಿಯಲ್ಲಿ ಟೀಂ ಇಂಡಿಯಾ ಪರ ವಿಶಾಖಪಟ್ಟಣ ಹಾಗೂ ರಾಜ್‌ಕೋಟ್‌ನಲ್ಲಿ ದ್ವಿಶತಕ ಬಾರಿಸುವ ಮೂಲಕ ಇಂಡಯಾದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಐಸಿಸಿ 20ರ ಬಳಗದ ಶ್ರೇಯಾಂಕದಲ್ಲಿ ಭಾರತದ ನಾಲ್ವರು ಬ್ಯಾಟರ್‌ಗಳು ಸ್ಥಾನ ಪಡೆದಿದ್ದಾರೆ. 7ನೇ ಸ್ಥಾನದಲ್ಲಿ ವಿರಾಟ್ ಕೊಹ್ಲಿ, 12ನೇ ಸ್ಥಾನದಲ್ಲಿ ರೋಹಿತ್ ಶರ್ಮಾ, 14ನೇ ಸ್ಥಾನದಲ್ಲಿ ರಿಷಬ್ ಪಂತ್ ಹಾಗೂ 15ನೇ ಸ್ಥಾನದಲ್ಲಿ ಯಶಸ್ವಿ ಜೈಸ್ವಾಲ್‌ ಇದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರಕ್ಷಕ ಇಲಾಖೆ ಯಾತಕ್ಕಾಗಿ, ಪೊಲೀಸರು ಇರುವುದು ಯಾರ ರಕ್ಷಣೆಗಾಗಿ?

ದಕ್ಷಿಣ ಆಫ್ರಿಕಾ ವಿರುದ್ಧ ಹ್ಯಾಮಿಲ್ಟನ್‌ನಲ್ಲಿ ನಡೆದ ಪಂದ್ಯದಲ್ಲಿ ಟೆಸ್ಟ್‌ನ ಎರಡು ಇನಿಂಗ್ಸ್‌ನಲ್ಲಿಯೂ ಶತಕ ಬಾರಿಸಿದ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್‌ ಮೊದಲ ಶ್ರೇಯಾಂಕದಲ್ಲಿದ್ದಾರೆ. 2ನೇ ಸ್ಥಾನದಲ್ಲಿ ಆಸೀಸ್‌ನ ಸ್ಟೀವ್‌ ಸ್ಮಿತ್, ಮೂರನೇ ಸ್ಥಾನದಲ್ಲಿ ಕಿವೀಸ್‌ನ ಡೇರಿಲ್ ಮಿಷಲ್, ನಾಲ್ಕನೇ ಸ್ಥಾನದಲ್ಲಿ ಬಾಬರ್‌ ಅಜಂ, ಐದನೇ ಸ್ಥಾನದಲ್ಲಿ ಇಂಗ್ಲೆಂಡ್‌ನ ಜೋರೂಟ್‌ ಸ್ಥಾನ ಪಡೆದಿದ್ದಾರೆ.

ಶ್ರೇಯಾಂಕದ 20ರ ಬಳಗದಲ್ಲಿ ಭಾರತ, ಇಂಗ್ಲೆಂಡ್‌ ಹಾಗೂ ಆಸೀಸ್‌ನ ತಲಾ ನಾಲ್ವರು,  ನ್ಯೂಜಿಲೆಂಡ್‌ನ ಇಬ್ಬರು, ಪಾಕ್‌ನ ಮೂವರು, ಶ್ರೀಲಂಕಾ, ಬಾಂಗ್ಲಾದೇಶ ಹಾಗೂ ದಕ್ಷಿಣ ಆಫ್ರಿಕಾದ ತಲಾ ಒಬ್ಬರು ಆಟಗಾರರು ಸ್ಥಾನ ಪಡೆದಿದ್ದಾರೆ.

ಐಸಿಸಿ ಟಾಪ್ 20 ಬೌಲಿಂಗ್‌ ವಿಭಾಗದಲ್ಲಿ ಮೊದಲೆರಡು ಸ್ಥಾನದಲ್ಲಿ ಜಸ್‌ಪ್ರೀತ್ ಬೂಮ್ರಾ, ಆರ್‌ ಅಶ್ವಿನ್ ಇದ್ದರೆ,  ಆರನೇ ಸ್ಥಾನದಲ್ಲಿ ರವೀಂದ್ರ ಜಡೇಜಾ ಹಾಗೂ ಮೊಹಮದ್ ಸಿರಾಜ್‌ 19ನೇ ಸ್ಥಾನದಲ್ಲಿದ್ದಾರೆ.

ಆಲ್‌ರೌಂಡರ್‌ ವಿಭಾಗದಲ್ಲಿ ರವೀಂದ್ರ ಜಡೇಜಾ, ಆರ್‌ ಅಶ್ವಿನ್ ಮೊದಲೆರಡು ಸ್ಥಾನದಲ್ಲಿದ್ದರೆ, ನಾಲ್ಕನೇ ಸ್ಥಾನದಲ್ಲಿ ಅಕ್ಸರ್‌ ಪಟೇಲ್ ಸ್ಥಾನ ಪಡೆದಿದ್ದಾರೆ.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಪಿಎಲ್ ಫೈನಲ್ | ಕೋಲ್ಕತ್ತಾ ನೈಟ್‌ ರೈಡರ್ಸ್‌ ಮಾರಕ ಬೌಲಿಂಗ್‌ಗೆ ಮಕಾಡೆ ಮಲಗಿದ ಹೈದರಾಬಾದ್!

ಐಪಿಎಲ್‌ನ ಲೀಗ್ ಹಂತದಲ್ಲಿ ಭರ್ಜರಿ ಸ್ಫೋಟಕ ಬ್ಯಾಟಿಂಗ್‌ನ ಕಾರಣಕ್ಕೆ ಸುದ್ದಿಯಾಗುತ್ತಿದ್ದ ಪ್ಯಾಟ್...

ಟಿ20 ವಿಶ್ವಕಪ್ | ನಾಯಕ ರೋಹಿತ್ ಶರ್ಮಾ ನೇತೃತ್ವದಲ್ಲಿ ಅಮೆರಿಕಕ್ಕೆ ಹಾರಿದ ಟೀಮ್ ಇಂಡಿಯಾದ ಮೊದಲ ಬ್ಯಾಚ್

ಜೂನ್ 2ರಿಂದ ಆರಂಭವಾಗಲಿರುವ 9ನೇ ಆವೃತ್ತಿಯ ಟಿ20 ವಿಶ್ವಕಪ್‌ಗಾಗಿ ಟೀಮ್ ಇಂಡಿಯಾ...

ಅವಕಾಶ ಕೈಚೆಲ್ಲಿದ ರಾಜಸ್ಥಾನ ಸ್ಪಿನ್ ಮೋಡಿಗೆ ‘ಬಲಿ’ : ಫೈನಲ್‌ಗೆ ಲಗ್ಗೆ ಇಟ್ಟ ಸನ್‌ರೈಸರ್ಸ್‌ ಹೈದರಾಬಾದ್

ಈ ಬಾರಿಯ ಐಪಿಎಲ್‌ನಲ್ಲಿ ಸಂಜು ಸ್ಯಾಮ್ಸನ್‌ ನೇತೃತ್ವದ ರಾಜಸ್ಥಾನ್ ರಾಯಲ್ಸ್ ಬಳಗ...