ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಎಡ್ಜ್‌ಬಸ್ಟನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡ ಟೀಂ ಇಂಡಿಯಾವನ್ನು ಮಣಿಸಿ ಸರಣಿಯನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿದ್ದಾರೆ. ಇದೇ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್ ಹೊಸ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ.
ಲೀಡ್ಸ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶತಕದ ಮೂಲಕ ಅಮೋಘ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್ ಕ್ಯಾಚ್‌ಗಳನ್ನು ಬಿಟ್ಟು ಟೀಕೆಗೆ ಗುರಿಯಾಗಿದ್ದರು. ಇದೇ ಫಾರ್ಮ್‌ನ್ನು ಜೈಸ್ವಾಲ್ ಮುಂದುವರಿಸಿದರೆ ದೊಡ್ಡ ದಾಖಲೆಯನ್ನು ಬರೆಯಬಹುದು. ಎರಡನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 97 ರನ್ ಬಾರಿಸುವಲ್ಲಿ ಸಫಲರಾದರೆ, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್ ಹಾಗೂ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಅಳಿಸಬಹುದು.
ಟೆಸ್ಟ್ ಕ್ರಿಕೆಟ್‌ನಲ್ಲಿ 2 ಸಾವಿರ ರನ್‌ಗಳನ್ನು ವೇಗವಾಗಿ ಕಲೆ ಹಾಕಿದ ಕೀರ್ತಿ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಅವರಿಗೆ ಸಲ್ಲುತ್ತದೆ. ಇವರ ನಂತರ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಈ ಸಾಧನೆಯನ್ನು 40 ಇನಿಂಗ್ಸ್‌ಗಳಲ್ಲಿ ಮಾಡಿದ ಸಾಧನೆಯನ್ನು ಮಾಡಿದ್ದಾರೆ.
ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ
ಯಶಸ್ವಿ ಜೈಸ್ವಾಲ್ ತಾವು ಆಡಿದ 20 ಪಂದ್ಯಗಳ 38 ಇನಿಂಗ್ಸ್‌ಗಳಲ್ಲಿ 1903 ರನ್ ಕಲೆ ಹಾಕಿದ್ದಾರೆ. ಟೆಸ್ಟ್ ಕ್ರಿಕೆಟ್‌ನಲ್ಲಿ 2000 ರನ್ ಪೂರೈಸಲು ಇವರಿಗೆ 97 ರನ್ ಅಗತ್ಯವಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ನಲ್ಲಿ ಅವರು 97 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಕನಿಷ್ಠ ಪಂದ್ಯಗಳಲ್ಲಿ 2000 ಟೆಸ್ಟ್ ರನ್ ಗಳಿಸಿದ ಭಾರತೀಯರಾಗುತ್ತಾರೆ.
ಕಡಿಮೆ ಇನಿಂಗ್ಸ್‌ಗಳಲ್ಲಿ ಈ ಸಾಧನೆಯನ್ನು ಮಾಡಿದ ಕೀರ್ತಿ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. ಇವರು 23 ಟೆಸ್ಟ್ ಪಂದ್ಯಗಳಲ್ಲಿ ಈ ಸಾಧನೆ ಪೂರೈಸಿದ್ದರು. ಜೈಸ್ವಾಲ್ ಈ ದಾಖಲೆಯನ್ನು ಸಹ ಮುರಿಯಬಹುದಾಗಿದೆ. ಇನ್ನು ವೀರೇಂದ್ರ ಸೆಹ್ವಾಗ್ ಹಾಗೂ ರಾಹುಲ್ ದ್ರಾವಿಡ್ 25 ಪಂದ್ಯಗಳಲ್ಲಿ 2 ಸಾವಿರ ರನ್ ಪೇರಿಸಿದ್ದಾರೆ.
ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಯಶಸ್ವಿ ಜೈಸ್ವಾಲ್ ಎರಡನೇ ಟೆಸ್ಟ್‌ನಲ್ಲಿ ಆಡುತ್ತಾರಾ ಎಂಬ ಅನುಮಾನ ಆರಂಭವಾಗಿತ್ತು. ಆದರೆ ಆಡಳಿತ ಮಂಡಳಿ ಜೈಸ್ವಾಲ್ ಅವರನ್ನು ಆಡಿಸುವ ಕುರಿತು ಶುಭ ಮುನ್ಸೂಚನೆ ನೀಡಿದೆ.