ಮೂವರು ಸ್ಟಾರ್ ಆಟಗಾರರ ದಾಖಲೆ ಮುರಿಯುವ ಹೊಸ್ತಿಲಲ್ಲಿ ಯಶಸ್ವಿ ಜೈಸ್ವಾಲ್‌

Date:

ಇಂಗ್ಲೆಂಡ್‌ ವಿರುದ್ಧದ ಎರಡನೇ ಟೆಸ್ಟ್‌ ಪಂದ್ಯ ಎಡ್ಜ್‌ಬಸ್ಟನ್‌ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಆತಿಥೇಯ ತಂಡ ಟೀಂ ಇಂಡಿಯಾವನ್ನು ಮಣಿಸಿ ಸರಣಿಯನ್ನು ಮತ್ತಷ್ಟು ಬಲಪಡಿಸಿಕೊಳ್ಳುವ ಲೆಕ್ಕಾಚಾರದಲ್ಲಿದ್ದಾರೆ. ಇದೇ ಪಂದ್ಯದಲ್ಲಿ ಆರಂಭಿಕ ಯುವ ಆಟಗಾರ ಯಶಸ್ವಿ ಜೈಸ್ವಾಲ್‌ ಹೊಸ ದಾಖಲೆಯನ್ನು ಬರೆಯುವ ಕನಸಿನಲ್ಲಿದ್ದಾರೆ.

- Advertisement -

ಲೀಡ್ಸ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಶತಕದ ಮೂಲಕ ಅಮೋಘ ಪ್ರದರ್ಶನ ನೀಡಿದ್ದ ಯಶಸ್ವಿ ಜೈಸ್ವಾಲ್‌ ಕ್ಯಾಚ್‌ಗಳನ್ನು ಬಿಟ್ಟು ಟೀಕೆಗೆ ಗುರಿಯಾಗಿದ್ದರು. ಇದೇ ಫಾರ್ಮ್‌ನ್ನು ಜೈಸ್ವಾಲ್ ಮುಂದುವರಿಸಿದರೆ ದೊಡ್ಡ ದಾಖಲೆಯನ್ನು ಬರೆಯಬಹುದು. ಎರಡನೇ ಟೆಸ್ಟ್‌ನ ಮೊದಲ ಇನಿಂಗ್ಸ್‌ನಲ್ಲಿ 97 ರನ್‌ ಬಾರಿಸುವಲ್ಲಿ ಸಫಲರಾದರೆ, ಸುನಿಲ್ ಗವಾಸ್ಕರ್, ರಾಹುಲ್ ದ್ರಾವಿಡ್‌ ಹಾಗೂ ವೀರೇಂದ್ರ ಸೆಹ್ವಾಗ್ ಅವರ ದಾಖಲೆಯನ್ನು ಅಳಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಟೆಸ್ಟ್‌ ಕ್ರಿಕೆಟ್‌ನಲ್ಲಿ 2 ಸಾವಿರ ರನ್‌ಗಳನ್ನು ವೇಗವಾಗಿ ಕಲೆ ಹಾಕಿದ ಕೀರ್ತಿ ಟೀಮ್ ಇಂಡಿಯಾದ ದಿಗ್ಗಜ ಆಟಗಾರ ಸುನಿಲ್ ಗವಾಸ್ಕರ್ ಅವರಿಗೆ ಸಲ್ಲುತ್ತದೆ. ಇವರ ನಂತರ ರಾಹುಲ್ ದ್ರಾವಿಡ್ ಮತ್ತು ವೀರೇಂದ್ರ ಸೆಹ್ವಾಗ್ ಈ ಸಾಧನೆಯನ್ನು 40 ಇನಿಂಗ್ಸ್‌ಗಳಲ್ಲಿ ಮಾಡಿದ ಸಾಧನೆಯನ್ನು ಮಾಡಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ನಾಗರಹೊಳೆ ಬುಡಕಟ್ಟು ಜನಾಂಗಕ್ಕೆ ಸಿಗಲಿ ನ್ಯಾಯ

ಯಶಸ್ವಿ ಜೈಸ್ವಾಲ್‌ ತಾವು ಆಡಿದ 20 ಪಂದ್ಯಗಳ 38 ಇನಿಂಗ್ಸ್‌ಗಳಲ್ಲಿ 1903 ರನ್‌ ಕಲೆ ಹಾಕಿದ್ದಾರೆ. ಟೆಸ್ಟ್‌ ಕ್ರಿಕೆಟ್‌ನಲ್ಲಿ 2000 ರನ್‌ ಪೂರೈಸಲು ಇವರಿಗೆ 97 ರನ್‌ ಅಗತ್ಯವಿದೆ. ಎಡ್ಜ್‌ಬಾಸ್ಟನ್‌ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್‌ನಲ್ಲಿ ಅವರು 97 ರನ್ ಗಳಿಸುವಲ್ಲಿ ಯಶಸ್ವಿಯಾದರೆ, ಅವರು ಕನಿಷ್ಠ ಪಂದ್ಯಗಳಲ್ಲಿ 2000 ಟೆಸ್ಟ್ ರನ್ ಗಳಿಸಿದ ಭಾರತೀಯರಾಗುತ್ತಾರೆ.

ಕಡಿಮೆ ಇನಿಂಗ್ಸ್‌ಗಳಲ್ಲಿ ಈ ಸಾಧನೆಯನ್ನು ಮಾಡಿದ ಕೀರ್ತಿ ಸುನಿಲ್ ಗವಾಸ್ಕರ್ ಹೆಸರಿನಲ್ಲಿದೆ. ಇವರು 23 ಟೆಸ್ಟ್‌ ಪಂದ್ಯಗಳಲ್ಲಿ ಈ ಸಾಧನೆ ಪೂರೈಸಿದ್ದರು. ಜೈಸ್ವಾಲ್ ಈ ದಾಖಲೆಯನ್ನು ಸಹ ಮುರಿಯಬಹುದಾಗಿದೆ. ಇನ್ನು ವೀರೇಂದ್ರ ಸೆಹ್ವಾಗ್ ಹಾಗೂ ರಾಹುಲ್ ದ್ರಾವಿಡ್ 25 ಪಂದ್ಯಗಳಲ್ಲಿ 2 ಸಾವಿರ ರನ್‌ ಪೇರಿಸಿದ್ದಾರೆ.

ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಯಶಸ್ವಿ ಜೈಸ್ವಾಲ್‌ ಎರಡನೇ ಟೆಸ್ಟ್‌ನಲ್ಲಿ ಆಡುತ್ತಾರಾ ಎಂಬ ಅನುಮಾನ ಆರಂಭವಾಗಿತ್ತು. ಆದರೆ ಆಡಳಿತ ಮಂಡಳಿ ಜೈಸ್ವಾಲ್‌ ಅವರನ್ನು ಆಡಿಸುವ ಕುರಿತು ಶುಭ ಮುನ್ಸೂಚನೆ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಾರತಕ್ಕೆ ಚಿನ್ನ ತಂದ ಮಹಿಳೆಯರು: ಏಷ್ಯನ್‌ ಗೇಮ್ಸ್‌ನಲ್ಲಿ ಮಹಿಳಾ ಕ್ರಿಕೆಟ್‌ ಕಲಿಗಳ ಸಾಧನೆ

ಜಪಾನ್‌ನ ಐಚಿ–ನಾಗೋಯಾದಲ್ಲಿ ನಡೆಯುತ್ತಿರುವ 2026ನೇ ಸಾಲಿನ ಪ್ರತಿಷ್ಠಿತ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ...

ಏಷ್ಯನ್ ಗೇಮ್ಸ್: ಸ್ಕೀಟ್ ಶೂಟಿಂಗ್, ಸಾಫ್ಟ್ ಟೆನಿಸ್‌ನಲ್ಲಿ ಭಾರತಕ್ಕೆ ಕಂಚು; ಪದಕದತ್ತ ಮೀರಾಬಾಯಿ ದಾಪುಗಾಲು

ಜಪಾನ್‌ನ ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನ ನಾಲ್ಕನೇ ದಿನವಾದ ಬುಧವಾರ...

ಏಷ್ಯನ್ ಗೇಮ್ಸ್: ಶ್ರೀಲಂಕಾ ಮಣಿಸಿ ಸತತ ಎರಡನೇ ಬಾರಿಗೆ ಚಿನ್ನ ಗೆದ್ದ ಭಾರತದ ವನಿತೆಯರು

ಜಪಾನ್‌ನಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಕ್ರಿಕೆಟ್...

ಸೋತರೂ ಎಲ್ಲರ ಹೃದಯ ಗೆದ್ದ ಸುಚಿಕಾ: 700 ಗ್ರಾಂ ಹಿನ್ನಡೆಯಿಂದ ತಪ್ಪಿದ ಚಿನ್ನ

ಮಹಿಳೆಯರ ಸಾಂಪ್ರದಾಯಿಕ 60 ಕೆ.ಜಿ ವಿಭಾಗದ ಮಿಕ್ಸೆಡ್ ಮಾರ್ಷಲ್ ಆರ್ಟ್ಸ್ (ಎಂಎಂಎ)...