ಟಿ20 ಪಂದ್ಯದಲ್ಲಿ 344 ರನ್ ಬಾರಿಸಿದ ಜಿಂಬಾಬ್ವೆ: ಒಂದೇ ಪಂದ್ಯದಲ್ಲಿ 7 ವಿಶ್ವದಾಖಲೆ ನಿರ್ಮಾಣ

Date:

ಜಿಂಬಾಬ್ವೆ ತಂಡವು ಕೀನ್ಯಾದ ನೈರೋಬಿಯಲ್ಲಿ ನಡೆದ ಟಿ20 ವಿಶ್ವಕಪ್ ಸಬ್​ರೀಜನಲ್ ​ಆಫ್ರಿಕಾ ಕ್ವಾಲಿಫೈಯರ್ ಗ್ರೂಪ್ ಬಿ ಪಂದ್ಯದ ಗ್ಯಾಂಬಿಯಾ ವಿರುದ್ಧದ ಪಂದ್ಯದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದೆ. ಈ ಒಂದೇ ಪಂದ್ಯದಲ್ಲಿ ಜಿಂಬಾಬ್ವೆ ತಂಡ 7 ವಿಶ್ವದಾಖಲೆಗಳನ್ನು ಮುರಿಯುವಲ್ಲಿ ಯಶಸ್ವಿಯಾಗಿದೆ.

- Advertisement -

ದಾಖಲೆ 1: ಮೊದಲು ಬ್ಯಾಟ್‌ ಮಾಡಿದ ಜಿಂಬಾಬ್ವೆ ಜಿಂಬಾಬ್ವೆ ನಿಗದಿತ 20 ಓವರ್ ಗಳಲ್ಲಿ ನಾಲ್ಕು ವಿಕೆಟ್ ಕಳೆದುಕೊಂಡು ಬರೋಬ್ಬರಿ 344 ರನ್ ಗಳಿಸಿತು. ಇದು ಟಿ20 ಕ್ರಿಕೆಟ್​ನಲ್ಲಿ ದಾಖಲಾದ ಗರಿಷ್ಠ ಮೊತ್ತವಾಗಿದೆ. ಟಿ20 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಜಿಂಬಾಬ್ವೆ ಟಿ20ಯಲ್ಲಿ ಗರಿಷ್ಠ ರನ್​ ದಾಖಲೆ ಬರೆದಿದ್ದ ನೇಪಾಳದ ವಿಶ್ವದಾಖಲೆಯನ್ನು ಮುರಿದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದಾಖಲೆ 2: ಈ ಮೊದಲು ನೇಪಾಳ 2023ರಲ್ಲಿ ಮಂಗೋಲಿಯಾ ವಿರುದ್ಧ ಮೂರು ವಿಕೆಟ್ ನಷ್ಟಕ್ಕೆ 314 ರನ್ ಗಳಿಸಿತ್ತು. 3ನೇ ಸ್ಥಾನದಲ್ಲಿ ಭಾರತ ತಂಡವಿದ್ದು, ಬಾಂಗ್ಲಾದೇಶದ ವಿರುದ್ಧ ಇತ್ತೀಚೆಗೆ 297 ರನ್​ಗಳಿಸಿತ್ತು. ನಂತರ ಅಫ್ಘಾನಿಸ್ತಾನ (278/3 ವಿರುದ್ಧ ಐರ್ಲೆಂಡ್) ಮತ್ತು ಜೆಕ್ ರಿಪಬ್ಲಿಕ್ (278/4 ವಿರುದ್ಧ ಟರ್ಕಿ) 4 ಮತ್ತು 5ನೇ ಸ್ಥಾನಗಳಿಸಿವೆ.

ದಾಖಲೆ 3: ಈ ಪಂದ್ಯದಲ್ಲಿ ಜಿಂಬಾಬ್ವೆ ತಂಡ ಕಲೆಹಾಕಿದ 344 ರನ್​​ಗಳಲ್ಲಿ 282 ರನ್​ಗಳು ಕೇವಲ ಸಿಕ್ಸರ್ ಮತ್ತು ಬೌಂಡರಿಗಳಿಂದಲೇ ಬಂದವು. ಈ ಮೂಲಕ ಕೇವಲ ಬೌಂಡರಿ ಹಾಗೂ ಸಿಕ್ಸರ್​ಗಳ ಮೂಲಕ ದೊಡ್ಡ ಮೊತ್ತದ ರನ್ ಕಲೆಹಾಕಿದ ಮೊದಲ ತಂಡ ಎಂಬ ವಿಶ್ವದಾಖಲೆ ಸಹ ಜಿಂಬಾಬ್ವೆ ಪಾಲಾಗಿದೆ. ಇತ್ತೀಚೆಗಷ್ಟೇ ಬಾಂಗ್ಲಾದೇಶ ವಿರುದ್ಧದ ಟಿ20 ಪಂದ್ಯದಲ್ಲಿ ಬೌಂಡರಿಗಳ ನೆರವಿನಿಂದ 232 ರನ್ ಗಳಿಸಿದ್ದ ಟೀಂ ಇಂಡಿಯಾ ಹೆಸರಿನಲ್ಲಿ ಈ ದಾಖಲೆ ಇತ್ತು.

ದಾಖಲೆ 4: ಈ ಪಂದ್ಯದಲ್ಲಿ ಬರೋಬ್ಬರಿ 27 ಸಿಕ್ಸರ್‌ಗಳನ್ನು ಬಾರಿಸುವ ಮೂಲಕ ಜಿಂಬಾಬ್ವೆ ತಂಡ, ಟಿ20 ಇನಿಂಗ್ಸ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ ಸಿಡಿಸಿದ ಮೊದಲ ತಂಡವೆಂಬ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿದೆ. ಈ ಹಿಂದೆ ಈ ದಾಖಲೆ 26 ಸಿಕ್ಸರ್ ಬಾರಿಸಿದ್ದ ನೇಪಾಳ ತಂಡದ ಹೆಸರಿನಲ್ಲಿತ್ತು.

ಈ ಸುದ್ದಿ ಓದಿದ್ದೀರಾ? ಮಹಿಳೆಯರ ಟಿ20 ವಿಶ್ವಕಪ್: ನ್ಯೂಜಿಲೆಂಡ್‌ ಚೊಚ್ಚಲ ಚಾಂಪಿಯನ್

ದಾಖಲೆ 5: ಗ್ಯಾಂಬಿಯಾ ವಿರುದ್ಧ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ ತಂಡ ಕೇವಲ 12.5 ಓವರ್‌ಗಳಲ್ಲಿ 200 ರನ್ ಪೂರೈಸಿತು. ಈ ಮೂಲಕ ಅಂತಾರಾಷ್ಟ್ರೀಯ ಟಿ20ಯಲ್ಲಿ ವೇಗವಾಗಿ 200 ರನ್ ಗಳಿಸಿದ ತಂಡವೆಂಬ ಹೆಗ್ಗಳಿಕೆಗೂ ಜಿಂಬಾಬ್ವೆ ಪಾತ್ರವಾಗಿದೆ. ಈ ಹಿಂದೆ 13.5 ಓವರ್‌ಗಳಲ್ಲಿ ಈ ಸಾಧನೆ ಮಾಡಿದ್ದ ದಕ್ಷಿಣ ಆಫ್ರಿಕಾ ಹೆಸರಲ್ಲಿ ಈ ದಾಖಲೆ ಇತ್ತು.

ದಾಖಲೆ 6: ಇನ್ನು ಜಿಂಬಾಬ್ವೆ ನೀಡಿದ 344 ರನ್​ಗಳ ಗುರಿ ಬೆನ್ನಟ್ಟಿದ ಗ್ಯಾಂಬಿಯಾ ತಂಡ ಕೇವಲ 54 ರನ್​ಗಳಿಗೆ ಆಲೌಟ್ ಆಯಿತು. ಹೀಗಾಗಿ ಜಿಂಬಾಬ್ವೆ ತಂಡ ಬರೋಬ್ಬರಿ 290 ರನ್‌ಗಳ ಅಂತರದ ಜಯ ಸಾಧಿಸಿತು. ಈ ಮೂಲಕ ಟಿ20 ಕ್ರಿಕೆಟ್ ಇತಿಹಾಸದಲ್ಲಿ ಇದು ಅತಿ ದೊಡ್ಡ ಅಂತರದ ಗೆಲುವು ದಾಖಲಿಸಿದ ದಾಖಲೆಯೂ ಜಿಂಬಾಬ್ವೆ ಪಾಲಾಗಿದೆ.

ದಾಖಲೆ 7: ಒಂದು ಪಂದ್ಯದಲ್ಲಿ 30 ಬೌಂಡರಿಗಳು ಹರಿದು ಬಂದಿದ್ದು ಕೂಡ ವಿಶ್ವ ದಾಖಲೆಗಾಗಿದೆ. ಅದೇ ರೀತಿ ಮೂವರು ಅರ್ಧ ಶತಕ ಗಳಿಸಿದ್ದು ಕೂಡ ವಿಶ್ವ ದಾಖಲೆಗೆ ಸೇರ್ಪಡೆಗೊಂಡಿತು.

ತಂಡದ ವೈಯಕ್ತಿಕ ದಾಖಲೆ: ಜಿಂಬಾಬ್ವೆಯ ಈ ಐತಿಹಾಸಿಕ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ ನಾಯಕ ಸಿಕಂದರ್ ರಾಝಾ ಕೇವಲ 33 ಎಸೆತಗಳಲ್ಲಿ ಶತಕ ಬಾರಿಸಿದರು. ಇದರೊಂದಿಗೆ ಐಸಿಸಿಯ ಪೂರ್ಣ ಸದಸ್ಯ ತಂಡದ ಆಟಗಾರನೊಬ್ಬ ಸಿಡಿಸಿದ ವೇಗದ ಶತಕ ಎಂಬ ದಾಖಲೆ ರಾಝಾ ಅವರ ಪಾಲಾಯಿತು. ಇದಲ್ಲದೆ ಅವರು 35 ಎಸೆತಗಳಲ್ಲಿ ಶತಕ ಸಿಡಿಸಿದ್ದ ರೋಹಿತ್ ಶರ್ಮಾ ಹಾಗೂ ಡೇವಿಡ್ ಮಿಲ್ಲರ್ ಅವರ ದಾಖಲೆಯನ್ನು ಮುರಿದರು. ಸಿಕಂದರ್ ರಾಝಾ ತಮ್ಮ ಬ್ಯಾಟಿಂಗ್‌ನಲ್ಲಿ 43 ಚೆಂಡುಗಳಲ್ಲಿ 15 ಸಿಕ್ಸರ್‌ ಹಾಗೂ 7 ಬೌಂಡರಿಗಳಿದ್ದವು.

ಜಿಂಬಾಬ್ವೆಯ ಗುರಿ ಬೆನ್ನಟ್ಟಿದ ಗ್ಯಾಂಬಿಯಾ 14.4 ಓವರ್‌ಗಳಲ್ಲಿ 54 ರನ್‌ಗಳಿಗೆ ಕುಸಿಯಿತು. ಆಂಡ್ರೆ ಜಾರ್ಜು (12) ಮಾತ್ರ ಎರಡಂಕಿ ಮೊತ್ತ ಗಳಿಸಿದರು. ಜಿಂಬಾಬ್ವೆ ಬೌಲರ್‌ಗಳಲ್ಲಿ ರಿಚರ್ಡ್ ಮತ್ತು ಬ್ರಾಂಡನ್ ತಲಾ ಮೂರು ವಿಕೆಟ್ ಪಡೆದು ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹ್ಯಾಟ್ರಿಕ್ ಗೆಲುವಿನ ಬೆನ್ನಲ್ಲೇ ನಾಯಕತ್ವಕ್ಕೆ ವಿದಾಯ: ದಿಟ್ಟ ನಿರ್ಧಾರದೊಂದಿಗೆ ನಿರ್ಗಮಿಸಿದ ಹರ್ಮನ್‌ಪ್ರೀತ್ ಕೌರ್

ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಸ್ಥಾನದಿಂದ ಕೆಳಗಿಳಿಯುತ್ತಿರುವುದಾಗಿ ಹರ್ಮನ್‌ಪ್ರೀತ್ ಕೌರ್...

ಏಷ್ಯನ್ ಗೇಮ್ಸ್ : ತಂಡಗಳ ಯಶಸ್ಸಿನ ನಡುವೆ ವ್ಯಕ್ತಿಗತ ಚಿನ್ನದ ಕೊರತೆ; ಒಲಿಂಪಿಕ್ಸ್‌ಗೆ ಎಚ್ಚರಿಕೆಯ ಗಂಟೆ

ಭಾರತದ ಸಾಂಪ್ರದಾಯಿಕ ಕ್ರೀಡಾ ಶಕ್ತಿಗಳಾದ ಅಥ್ಲೆಟಿಕ್ಸ್ ಮತ್ತು ಶೂಟಿಂಗ್ ವಿಭಾಗಗಳು ಈ...

ಜಪಾನ್ ಅಂಗಳದಲ್ಲಿ ಮಿನುಗಿದ ಭಾರತದ ‘ಚಿನ್ನ’ದ ನಾರಿಯರು: ಕಷ್ಟಗಳನ್ನು ಮೆಟ್ಟಿ ನಿಂತ ಗೆಲುವಿನ ಗಾಥೆ

ಜಪಾನ್‌ನ ಐಚಿ ಪ್ರಾಂತ್ಯದಲ್ಲಿ ನಡೆದ 2026ರ ಏಷ್ಯನ್ ಗೇಮ್ಸ್ ಕ್ರೀಡಾಕೂಟ ಭಾರತೀಯ...

ಏಷ್ಯನ್ ಗೇಮ್ಸ್: ಪಾಕ್ ಮಣಿಸಿ ಐತಿಹಾಸಿಕ ಚಿನ್ನದ ಪದಕ ಗೆದ್ದ ಟೀಮ್ ಇಂಡಿಯಾ

ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಪುರುಷರ ಟಿ20 ಕ್ರಿಕೆಟ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ...