ಇಡಿ, ಐಟಿ ಮತ್ತು ಮೋದಿಗೆ ಹೆದರಿ ಬಿಜೆಪಿಗೆ ಹೋಗುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

Date:

ಹಿಂದುಳಿದ ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸಲು ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಮಾಡಬೇಕೆಂದು ಮನವಿ ಸಲ್ಲಿಸಿದ್ದೆವು. ಆದರೆ, ಅಂದಿನ ಉಪಪ್ರಧಾನಿ ಎಲ್‌.ಕೆ. ಅಡ್ವಾಣಿ ಅವರು ಅದನ್ನು ನಿರಾಕರಿಸಿದ್ದರು. ಆದರೆ, ಕೇಂದ್ರದಲ್ಲಿ ಮನಮೋಹನ್‌ ಸಿಂಗ್‌ ನೇತೃತ್ವದಲ್ಲಿ ಯುಪಿಎ ಸರ್ಕಾರ ಬಂದ ನಂತರ ಸಂವಿಧಾನಕ್ಕೆ ತಿದ್ದುಪಡಿ ಮಾಡಿ, ಸೌಲಭ್ಯ ಕಲ್ಪಿಸಲಾಯಿತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದರು.

ಕಲ್ಯಾಣ ಕರ್ನಾಟಕಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಸಂವಿಧಾನದ ಕಲಂ 371(ಜೆ) ತಿದ್ದುಪಡಿಯಾಗಿ ಹತ್ತು ವರ್ಷ ಪೂರೈಸಿರುವುದು ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ರಾಜಕೀಯ ಜೀವನಕ್ಕೆ ಕಾಲಿಟ್ಟು 52 ವರ್ಷ ತುಂಬಿದ ಹಿನ್ನೆಲೆಯಲ್ಲಿ ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾ ಕಾಂಗ್ರೆಸ್‌ ಸಮಿತಿ ಹಾಗೂ ಇತರೆ 17 ಸಂಘಟನೆಗಳಿಂದ ಮಂಗಳವಾರ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.

2009ರ ಲೋಕಸಭೆ ಚುನಾವಣೆಗೆ ಸ್ಪರ್ಧಿಸಬೇಕೆಂದು ಸೋನಿಯಾ ಗಾಂಧಿಯವರು ಹೇಳಿದ್ದರು. ಅವಾಗ ನಾನು ಶಾಸಕನಾಗಿ ಒಂದು ವರ್ಷವಾಗಿತ್ತು. ಹೀಗಾಗಿ ನಾನು ದೆಹಲಿಗೆ ಬರಲು ಇಷ್ಟ ಇಲ್ಲ ಎಂದು ಹೇಳಿದ್ದೆ. ಆದೆ 371(ಜೆ) ತಿದ್ದುಪಡಿ ಮಾಡಿ ಕೊಡ್ತೀನಿ ಅಂದ್ರೆ ಮಾತ್ರ ಚುನಾವಣೆಗೆ ನಿಲ್ಲುತ್ತೇನೆ ಎಂದು ಷರತ್ತು ಹಾಕಿದ್ದೆ. ಬಳಿಕ ಕೇಂದ್ರದಲ್ಲಿ ನಮ್ಮದೇ ಸರ್ಕಾರ ರಚನೆಯಾಯಿತು. ಸೋನಿಯಾ ಗಾಂಧಿಯವರು ಹಾಗೂ ನನ್ನ ಪ್ರಯತ್ನದಿಂದ ಲೋಕಸಭೆಯಲ್ಲಿ 404 ಸದಸ್ಯರ ಬೆಂಬಲದೊಂದಿಗೆ ಕಾನೂನಿಗೆ ತಿದ್ದುಪಡಿ ಮಾಡಲಾಯಿತು. ಯಾವುದೇ ಪ್ರಯತ್ನ ಮಾಡುವಾಗ ಹಿಂದೆ ಮುಂದೆ ನೋಡಬಾರದು. ಸತತ ಪ್ರಯತ್ನದಿಂದ ಪಡೆಯಬಹುದು” ಎಂದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ನಾನು ಕೇಂದ್ರದಲ್ಲಿ ರೈಲ್ವೆ ಸಚಿವನಿದ್ದಾಗ ಬೀದರ್‌ ಜಿಲ್ಲೆಯ ಜನಪ್ರತಿನಿಧಿಗಳ ನಿಯೋಗ ಬಂದು, ನಾಂದೇಡ್‌–ಬೆಂಗಳೂರು ರೈಲಿನ ಸಮಯ ಬದಲಿಸಬೇಕೆಂದು ಕೇಳಿದ್ದರು. ನಾನು ರೈಲಿನ ಸಮಯ ಬದಲಿಸಿದರೆ ನನ್ನ ನಂತರ ಬಂದವರು ಪುನಃ ಸಮಯ ಬದಲಿಸಬಹುದೆಂದು ನಾನು ಯೋಚಿಸಿ ಬೀದರ್‌–ಬೆಂಗಳೂರು ನಡುವೆ ಹೊಸ ರೈಲು ಬಿಟ್ಟಿದ್ದೆ, ಬೀದರ್‌-ಕಲಬುರಗಿ ರೈಲು ಮಾರ್ಗ ಪೂರ್ಣಗೊಳಿಸಿದ್ದೆ” ಎಂದು ತಿಳಿಸಿದರು.

“ನನ್ನ 52 ವರ್ಷಗಳ ರಾಜಕೀಯ ಜೀವನದಲ್ಲಿ ಕೈಲಾದಷ್ಟು ಎಲ್ಲ ಕೆಲಸ ಮಾಡಿದ್ದೇನೆ. ದೀರ್ಘಕಾಲ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಯಾವ ತತ್ವದ ಮೇಲೆ ನನಗೆ ನಂಬಿಕೆ ಇದೆಯೋ ಅದರ ಮೇಲೆ ನಂಬಿಕೆ ಇಟ್ಟು ಮುನ್ನಡೆಯುತ್ತಿರುವೆ. ಆರನೇ ತರಗತಿಯಲ್ಲಿದ್ದಾಗ ಡಾ.ಬಿ.ಆರ್‌. ಅಂಬೇಡ್ಕರ್‌ ಅವರ ಪೋಸ್ಟರ್‌ ಅಂಟಿಸುತ್ತಿದ್ದೆ. ಜನಬೆಂಬಲದಿಂದ ಬೆಳೆದಿದ್ದೇನೆ. ಮುಂದೆಯೂ ಜನರ ಒಳಿತಿಗೆ ಶ್ರಮಿಸುವೆ” ಎಂದರು.

“ಕೇಂದ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ಮೋದಿ ಸರ್ಕಾರ ಏನೂ ಕೆಲಸ ಮಾಡಿಲ್ಲ. ಸುಳ್ಳು ಹೇಳುವುದರಲ್ಲಿ ಕಾಲ ಕಳೆದಿದೆ. ನಾವು ಮಾಡಿದ್ದೆಲ್ಲ ಅವರು ಮಾಡಿದ್ದು ಎಂದು ಹೇಳುತ್ತಿದ್ದಾರೆ. ವರ್ಷಕ್ಕೆ 2 ಕೋಟಿ ಉದ್ಯೋಗ, ಕಪ್ಪು ಹಣ ತಂದು ಪ್ರತಿಯೊಬ್ಬರ ಖಾತೆಗೆ ತಲಾ 15 ಲಕ್ಷ ರೂ. ಜಮೆ ಮಾಡುವೆ ಎಂದು ಹೇಳಿದ್ದರು. ಆದರೆ ಮಾಡಿಲ್ಲ. ಎಲ್ಲ ವಸ್ತುಗಳ ಬೆಲೆ ಗಗನಕ್ಕೇರಿದೆ. ಜತೆಗೆ ಸಂವಿಧಾನ, ಪ್ರಜಾಪ್ರಭುತ್ವ ಅಪಾಯದಲ್ಲಿದೆ. ದೇಶದಲ್ಲಿ ಮನುವಾದ ಹೇರಲು ಹೊರಟಿದ್ದಾರೆ. ಆದರೆ ಸಂವಿಧಾನ ರಕ್ಷಿಸುವ ಹೊಣೆಗಾರಿಕೆ ನಿಮ್ಮೆಲ್ಲರ ಮೇಲಿದೆ” ಎಂದು ತಿಳಿಸಿದರು.

2024ರ ಚುನಾವಣೆ ಬಹಳ ಮುಖ್ಯ :

“ನಮ್ಮ ಮುಂದೆ 2024ರ ಗುರಿ ಮುಖ್ಯವಾಗಿದೆ. ಮುಂಬರುವ 2024ರ ಲೋಕಸಭಾ ಚುನಾವಣೆಯಲ್ಲಿ ನೀವು ಜಯಭೇರಿ ಸಾಧಿಸಿದಾಗ ಮಾತ್ರ ನನಗೆ ಆನಂದವಾಗುತ್ತದೆ. ನನಗೆ ಅಭಿನಂದನಾ ಸಲ್ಲುತ್ತದೆ, 371(J)ಗೆ ಮಾನ್ಯತೆಗೂ ಕೊಟ್ಟಿದಂತಾಗುತ್ತದೆ. ನಾವು ಕೆಲಸ ಮಾಡುತ್ತ ಹೋಗುವುದು, ನೀವು ಮರೆಯುವುದು. ನಿಮ್ಮಿಂದ ಏನಾದರೂ ಪ್ರೋತ್ಸಾಹ ಸಿಗಬೇಕಲ್ಲ. ಯಾವ ತತ್ವದಲ್ಲಿ ನಂಬಿಕೆ ಇದೆಯೋ ಅದಕ್ಕೆ ಬೆಂಬಲ ಕೊಡಬೇಕು” ಎಂದರು.

ಮುಂಬರುವ ಚುನಾವಣೆಯಲ್ಲಿ ಜನ ಕಾಂಗ್ರೆಸ್‌ ಪಕ್ಷಕ್ಕೆ ಸಹಕಾರ ಕೊಡಬೇಕು. ಕೊಡದಿದ್ದರೆ ಪ್ರಜಾಪ್ರಭುತ್ವ, ಸಂವಿಧಾನ ಈ ದೇಶದಲ್ಲಿ ಉಳಿಯುವುದಿಲ್ಲ. ಸಂವಿಧಾನ, ಪ್ರಜಾಪ್ರಭುತ್ವ ನಾಶಪಡಿಸಲು ಮೋದಿ ಸರ್ಕಾರ ಒಂದೊಂದೆ ಹೆಜ್ಜೆ ಇಡುತ್ತಿದೆ. ಮಾಧ್ಯಮದವರು ಶ್ರೀಮಂತರ ಕೈಯಲ್ಲಿದ್ದಾರೆ. ಅವರು ಹೇಳಿದಂತೆ ಮಾಡುತ್ತಿದ್ದಾರೆ. ಆದರೆ, ಜನರ ಹಣ ಲೂಟಿ ಹೊಡೆಯುತ್ತಿರುವವನ್ನು ನಾವು ಬಿಡುವುದಿಲ್ಲ. ಜನರ ಹಿತಕ್ಕಾಗಿ ನಾವು ಕೆಲಸ ಮಾಡುತ್ತಿದ್ದೇವೆ. ವೈಯಕ್ತಿಕವಾಗಿ ಮೋದಿ, ಅದಾನಿ ವಿರುದ್ಧ ನಾವಿಲ್ಲ” ಎಂದರು.

ಮೋದಿಗೆ ಹೆದರಿ ಬಿಜೆಪಿ ಸೇರ್ಪಡೆ:

“ಇವತ್ತು ಎಲ್ಲ ಕಡೆ ಬಿಜೆಪಿ, ಆರ್‌ಎಸ್‌ಎಸ್ ಎನ್ನುತ್ತಿದ್ದಾರೆ, ಕಾಂಗ್ರೇಸ್‌ನಲ್ಲಿ ದೀರ್ಘಕಾಲ ಉಳಿದು ಮುಖ್ಯಮಂತ್ರಿ, ಮಂತ್ರಿಗಳಾಗಿ ಎಲ್ಲ ಲಾಭ ಪಡೆದವರೇ ಬಿಜೆಪಿಗೆ ಓಡೋಡಿ ಹೋಗುತ್ತಿದ್ದಾರೆ. ಅವರೆಲ್ಲರಿಗೂ ಇ.ಡಿ, ಐ.ಟಿ ಮತ್ತು ಮೋದಿ ಹೆದರಿಸುತ್ತಿದ್ದಾರೆ. ಅನೇಕ ರಾಜ್ಯಗಳಲ್ಲಿ ಸರ್ಕಾರವನ್ನು ಕೆಡವಿದ್ದಾರೆ. ಒಂದು ಪಕ್ಷದಿಂದ ಆಯ್ಕೆಯಾದವರಿಗೆ ಒಂದು ತತ್ವದ ಮೇಲೆ ನಂಬಿಕೆ ಇಲ್ಲದ ಕಾರಣ ಹೀಗಾಗುತ್ತಿದೆ. 30–40 ವರ್ಷ ಕಾಂಗ್ರೆಸ್‌ನಲ್ಲಿದ್ದ ಕೆಲವರು ಅಧಿಕಾರದ ಆಸೆಗೆ, ಮತ್ತೆ ಕೆಲವರು ಹಣಕ್ಕಾಗಿ ಬಿಜೆಪಿಗೆ ಹೋಗುತ್ತಿದ್ದಾರೆ. ಯಾರ ಬಳಿ ಧೈರ್ಯ ಇರುವುದಿಲ್ಲವೋ ಅವರು ಎಂದೂ ಉದ್ಧಾರ ಆಗುವುದಿಲ್ಲ. ಆ ಸಮಾಜವೂ ಉದ್ಧಾರ ಆಗುವುದಿಲ್ಲ” ಎಂದು ಮಲ್ಲಿಕಾರ್ಜುನ ಖರ್ಗೆ ಅಸಮಾಧಾನ ವ್ಯಕ್ತಪಡಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ‘ಜಾಹೀರಾತು ಮುಕ್ತ ಅಭಿಯಾನ’ಕ್ಕೆ ಕೈ ಜೋಡಿಸಲು ನಾಗರಿಕರಲ್ಲಿ ಮನವಿ ಮಾಡಿದ ಬಿಬಿಎಂಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್, ಬಂಟಿಂಗ್ಸ್, ಭಿತ್ತಿಪತ್ರಗಳು ಸೇರಿದಂತೆ...

ಬಿಟ್ ಕಾಯಿನ್ ಹಗರಣ​ | ಸೈಬರ್ ಕ್ರೈಂ ಠಾಣೆ ಇನ್ಸ್​ಪೆಕ್ಟರ್ ಚಂದ್ರಾಧರ್​ ಬಂಧನ

ಬಿಟ್‌ ಕಾಯಿನ್ ಪ್ರಕರಣಕ್ಕೆ ಸಂಬಂಧಿಸಿದಂತೆ, ಇನ್ಸ್‌ಪೆಕ್ಟರ್ ಚಂದ್ರಾಧರ್ ಎಂಬುವವರನ್ನು ಸಿಐಡಿ ಪೊಲೀಸರು...

ಸಂತ್ರಸ್ತೆ ಅಪಹರಣ ಪ್ರಕರಣ | ಮೇ 31ಕ್ಕೆ ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ತೀರ್ಪು

ಕೆ ಆರ್‌ ನಗರ ಮಹಿಳೆ ಅಪಹರಣದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ...