ಜಪಾನ್, ದಕ್ಷಿಣ ಕೊರಿಯಾ ಕಂಪನಿಗಳಿಂದ ₹6,450 ಕೋಟಿ ಹೂಡಿಕೆ: ಸಚಿವ ಎಂ ಬಿ ಪಾಟೀಲ್

Date:

ಕೈಗಾರಿಕೆ ಮತ್ತು ಮೂಲಸೌಲಭ್ಯ ಅಭಿವೃದ್ಧಿ ಇಲಾಖೆ ಸಚಿವ ಎಂ ಬಿ ಪಾಟೀಲ್ ನೇತೃತ್ವದಲ್ಲಿನ ಕರ್ನಾಟಕದ ಉನ್ನತ ಮಟ್ಟದ ನಿಯೋಗವು ಜಪಾನ್ ಮತ್ತು ದಕ್ಷಿಣ ಕೊರಿಯಾದ ಎರಡು ವಾರಗಳ ಭೇಟಿಯನ್ನು ಪೂರ್ಣಗೊಳಿಸಿದ್ದು, ₹6,450 ಕೋಟಿ ಮೊತ್ತದ ಬಂಡವಾಳ ಹೂಡಿಕೆಯ ಬದ್ಧತೆ ಪಡೆದುಕೊಂಡಿದೆ.‌

- Advertisement -

ಈ ಬದ್ಧತೆ ಹಾಗೂ ಒಪ್ಪಂದಗಳ ಫಲವಾಗಿ ರಾಜ್ಯದಲ್ಲಿ 1,000 ಉದ್ಯೋಗ ಅವಕಾಶಗಳು ಸೃಷ್ಟಿಯಾಗುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ಉಭಯ ದೇಶಗಳ ಭೇಟಿಯ ಫಲಶ್ರುತಿ ಬಗ್ಗೆ ಬುಧವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಸಚಿವರು, “ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಿಗಾಗಿ (ಎಸ್‌ಎಂಇ) ಬಂಡವಾಳ ಹೂಡಿಕೆ ರೋಡ್‌ಷೋಗಳನ್ನು ನಡೆಸಿತು. ತಯಾರಿಕಾ ವಲಯಕ್ಕೆ ರಾಜ್ಯದಲ್ಲಿ ಇರುವ ಉತ್ತೇಜಕರ ಪೂರಕ ಸೌಲಭ್ಯಗಳ ಮಾಹಿತಿ ವಿನಿಮಯ ಮಾಡಿಕೊಂಡಿತು” ಎಂದು ಹೇಳಿದರು.

“35 ಉದ್ಯಮಗಳ ಪ್ರಮುಖರನ್ನು ಭೇಟಿ ಮಾಡಿದ ನಿಯೋಗವು, ಮುಂದಿನ ವರ್ಷ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶ – ʼಇನ್ವೆಸ್ಟ್ ಕರ್ನಾಟಕ 2025ʼರಲ್ಲಿ ಭಾಗವಹಿಸಲು ಟೋಕಿಯೊ ಮತ್ತು ಸೋಲ್‌ನಲ್ಲಿ ನಡೆದ ರೋಡ್‌ ಷೋಗಳಲ್ಲಿ 200ಕ್ಕೂ ಹೆಚ್ಚು ಕಂಪನಿಗಳಿಗೆ ಆಹ್ವಾನ ನೀಡಲಾಯಿತು” ಎಂದರು.

“ಜಪಾನ್‌ನಲ್ಲಿ ನಡೆದ ಸಭೆಗಳಲ್ಲಿ ರೆನೆಸಾಸ್ ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್, ಟೊಯೊಟಾ ಮೋಟರ್ ಕಾರ್ಪೊರೇಷನ್, ಯಮಹಾ ಮೋಟರ್ ಕಂಪನಿ, ಸುಮಿಟೊಮೊ ಹೆವಿ ಇಂಡಸ್ಟ್ರೀಸ್, ಪ್ಯಾನಾಸೋನಿಕ್ ಎನರ್ಜಿ, ನಿಡೆಕ್ ಕಾರ್ಪೊರೇಷನ್, ನಿಸಾನ್ ಮೋಟರ್ ಕಾರ್ಪೊರೇಷನ್, ಬ್ರದರ್ ಇಂಡಸ್ಟ್ರೀಸ್, ಶಿಮಾಡ್ಜು ಕಾರ್ಪೊರೇಷನ್, ಹಿಟಾಚಿ ಮತ್ತಿತರ ಕಂಪನಿಗಳು ಪ್ರಮುಖವಾಗಿವೆ” ಎಂದರು.

“ದಕ್ಷಿಣ ಕೊರಿಯಾದಲ್ಲಿ ವ್ಯಾಪಾರ, ಕೈಗಾರಿಕೆ ಮತ್ತು ಇಂಧನ ಸಚಿವಾಲಯದ ಉಪ ಮಂತ್ರಿ, ಕೊರಿಯಾದ ಜಿಯೊಂಗಿ ಪ್ರಾಂತ್ಯದ ವೈಸ್‌ ಗವರ್ನರ್ ಮತ್ತು ಸೋಲ್‌ ಮೆಟ್ರೊಪಾಲಿಟನ್ ಸರ್ಕಾರದಲ್ಲಿ ಆರ್ಥಿಕ ನೀತಿಯ ಉಪ ಮೇಯರ್ ಸೇರಿದಂತೆ ಸರ್ಕಾರಿ ಅಧಿಕಾರಿಗಳ ಜೊತೆಗೆ ಸಭೆಗಳನ್ನು ನಡೆಸಲಾಯಿತು. ದಕ್ಷಿಣ ಕೊರಿಯಾದಲ್ಲಿ ನಡೆದ ಸಭೆಗಳಲ್ಲಿ ಸ್ಯಾಮ್ಸಂಗ್‌ ಎಲೆಕ್ಟ್ರಾನಿಕ್ಸ್‌, ಎಲ್‌ಜಿ ಎನರ್ಜಿ ಸೊಲ್ಯೂಷನ್ಸ್, ಎಲ್‌ಎಕ್ಸ್‌ ಎಲೆಕ್ಟ್ರಾನಿಕ್ಸ್, ನಿಫ್ಕೊ ಕೊರಿಯಾ, ಒಸಿಐ ಹೋಲ್ಡಿಂಗ್ಸ್, ಕ್ರಾಫ್ಟನ್‌, ಎಚ್‌ವೈಎಸಿ, ಹುಂಡೈ ಮೋಟರ್ಸ್‌, ವೈಜಿ-1, ಹೊಯ್ಸಂಗ್‌ ಅಡ್ವಾನ್ಸಡ್‌ ಮಟೇರಿಯಲ್ಸ್‌ ಮುಂತಾದವು ಸೇರಿವೆ” ಎಂದು ಸಚಿವರು ವಿವರಿಸಿದರು.

ಹೂಡಿಕೆ ಬದ್ಧತೆಗಳು & ಒಪ್ಪಂದಗಳ ವಿವರ

ಒಸಾಕಾ ಗ್ಯಾಸ್: ಜಪಾನಿನ ಪ್ರಮುಖ ಇಂಧನ ಕಂಪನಿಯಾಗಿರುವ ಒಸಾಕಾ ಗ್ಯಾಸ್, ಮುಂದಿನ 5 ವರ್ಷಗಳಲ್ಲಿ ಅನಿಲ ವಿತರಣಾ ಮೂಲಸೌಲಭ್ಯ ವಿಸ್ತರಿಸಲು ₹5000 ಕೋಟಿ (600 ದಶಲಕ್ಷ ಡಾಲರ್‌) ಮೊತ್ತದ ಬಂಡವಾಳ ಹೂಡಿಕೆ ಮಾಡಲು ಬದ್ಧತೆ ತೋರಿದೆ.

ಡಿಎನ್‌ ಸೊಲ್ಯೂಷನ್ಸ್: ಕೊರಿಯಾದ ಮಷಿನ್ ಟೂಲ್ಸ್ ಕಂಪನಿಯಾಗಿರುವ ಡಿಎನ್‌ ಸೊಲ್ಯೂಷನ್ಸ್‌, ಕೈಗಾರಿಕಾ ಯಂತ್ರೋಪಕರಣಗಳು ಮತ್ತು ಸ್ವಯಂಚಾಲಿತ ವ್ಯವಸ್ಥೆಗಳ ತಯಾರಿಕಾ ಘಟಕ ಸ್ಥಾಪಿಸಲು ₹1000 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

ಅವೊಯಮಾ ಸೈಸಕುಶೊ: ವಾಹನ ಬಿಡಿಭಾಗಗಳನ್ನು ಪೂರೈಸುವ ಜಪಾನಿನ ಅವೊಯಮಾ ಸೈಸಕುಶೊ, ತುಮಕೂರು ಬಳಿಯ ಜಪಾನ್‌ ಕೈಗಾರಿಕಾ ಟೌನ್‌ಶಿಪ್‌ನಲ್ಲಿ ತಯಾರಿಕಾ ಘಟಕ ಸ್ಥಾಪಿಸಲು ₹210 ಕೋಟಿ ಮೌಲ್ಯದ ಒಪ್ಪಂದಕ್ಕೆ ಸಹಿ ಹಾಕಿದೆ.

ಡೈಕಿ ಆ್ಯಕ್ಸಿಸ್‌, ಹೈವಿಷನ್‌ ಮತ್ತು ಇಎಂಎನ್‌ಐ ಕಂಪನಿ ಲಿಮಿಟೆಡ್‌: ಬ್ಯಾಟರಿ ಸೆಲ್‌ಗಳ ಸಂಗ್ರಹ ಮತ್ತು ಪರೀಕ್ಷಾ ಕೇಂದ್ರ ಹಾಗೂ ಪರಿಸರ ಸಂರಕ್ಷಣೆ ಸಲಕರಣೆ ತಯಾರಿಸುವ ಘಟಕ ಸ್ಥಾಪಿಸಲು ಜಂಟಿಯಾಗಿ ₹210 ಮೊತ್ತದ ಬಂಡವಾಳ ಹೂಡಿಕೆ ಮಾಡುವ ಒಪ್ಪಂದಕ್ಕೆ ಸಹಿ ಹಾಕಿವೆ.

ಸುಮಿಟೊಮೊ ಹೆವಿ ಇಂಡಸ್ಟ್ರೀಸ್ (ಎಸ್‌ಎಚ್‌ಐ) ಬೆಂಗಳೂರಿನಲ್ಲಿ ತನ್ನ ಮುಖ್ಯ ಕಚೇರಿಯನ್ನು ತೆರೆಯಲು ಸಜ್ಜಾಗಿದ್ದು, 2024ರ ಅಂತ್ಯಕ್ಕೆ ಉದ್ಘಾಟನೆ ನೆರವೇರಿಸಲು ಉದ್ದೇಶಿಸಿದೆ.

ಈ ತಕ್ಷಣದ ಹೂಡಿಕೆಗಳನ್ನು ಹೊರತುಪಡಿಸಿ, ವಾಹನ ತಯಾರಿಕೆ, ಎಲೆಕ್ಟ್ರಾನಿಕ್ಸ್ ಮತ್ತು ಇಂಧನ ಪರಿಹಾರ ವಲಯಗಳಲ್ಲಿ ₹ 25,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಸಾಧ್ಯತೆಗಳನ್ನೂ ರಾಜ್ಯದ ನಿಯೋಗವು ಗುರುತಿಸಿದೆ. ಈ ಹೂಡಿಕೆ ನಿರೀಕ್ಷೆಯು, ಕರ್ನಾಟಕವು ಜಾಗತಿಕ ಹೂಡಿಕೆದಾರರ ಪಾಲಿಗೆ ಆಕರ್ಷಕ ತಾಣವಾಗಿರುವುದರ ಮಹತ್ವವನ್ನು ಸೂಚಿಸುತ್ತದೆ.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತೆ ಗುಂಜನ್ ಕೃಷ್ಣ, ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್.ಮಂಜುಳಾ, ಕೆಐಎಡಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹೇಶ, ಮೂಲಸೌಕರ್ಯ ಇಲಾಖೆ ಉಪ ಕಾರ್ಯದರ್ಶಿ ಹೆಬ್ಸಿಬಾ ರಾಣಿ ಈ ಸಂದರ್ಭದಲ್ಲಿ ಇದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಡಿಜಿಟಲ್ ಅರೆಸ್ಟ್‌ಗಿಂತ ಭಯಾನಕ ‘ಎಐ ವಾಯ್ಸ್ ಕ್ಲೋನಿಂಗ್’ ವಂಚನೆ; ನಿಮ್ಮ ಆತ್ಮೀಯರ ಧ್ವನಿಯಲ್ಲೇ ಕರೆ ಬರುತ್ತದೆ ಎಚ್ಚರ!

ಸೈಬರ್ ವಂಚಕರು ಜನರನ್ನು ವಂಚಿಸಲು ದಿನಕ್ಕೊಂದು ಹೊಸ ತಂತ್ರಜ್ಞಾನವನ್ನು ಬಳಸುತ್ತಿದ್ದಾರೆ. ಇತ್ತೀಚಿನ...

ರಾಜ್ಯದಲ್ಲಿ ಮತ್ತೆ ಸಿಎಂ ಬದಲಾವಣೆ ವದಂತಿ; ಡಾ. ಜಿ ಪರಮೇಶ್ವರ್ ಸ್ಪಷ್ಟನೆ!

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾಪೋಹಗಳಿಗೆ ಉಪಮುಖ್ಯಮಂತ್ರಿ, ಕಂದಾಯ ಸಚಿವ ಡಾ....

ಗೃಹಲಕ್ಷ್ಮಿ | ಹಳ್ಳಿ ಮಹಿಳೆಯರ ಬದುಕು ಬದಲಿಸುತ್ತಿದೆ ‘ಗ್ರಾಮೀಣ ಮೈಕ್ರೋ-ಉದ್ಯಮ’!

ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯು ಮಹಿಳೆಯರ ಜೀವನದಲ್ಲಿ...