- ಅಕಾಡೆಮಿ, ಪ್ರಾಧಿಕಾರ, ನಿಗಮಗಳಲ್ಲಿ ಸಮವಾಗಿ ಮಹಿಳಾ ಪ್ರಾತಿನಿಧ್ಯ ಇರಲಿ
- ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ ಕರ್ನಾಟಕ ಲೇಖಕಿಯರ ಸಂಘದ ನಿಯೋಗ
ರಾಜ್ಯದಲ್ಲಿ ಅತ್ಯಂತ ಕ್ರಿಯಾಶೀಲವಾಗಿ ಸಾಹಿತ್ಯಕ ಮತ್ತು ಸಾಂಸ್ಕೃತಿಕ ಚಟುವಟಿಕೆಗಳನ್ನು ಕರ್ನಾಟಕ ಲೇಖಕಿಯರ ಸಂಘ ನಡೆಸುತ್ತಿದ್ದು, ಹೀಗಾಗಿ ಕರ್ನಾಟಕ ಲೇಖಕಿಯರ ಸಂಘದ ಕಾರ್ಯ ಚಟುವಟಿಕೆಗಳಿಗೆ ಒಂದು ಕೋಟಿ ರೂಪಾಯಿ ವಿಶೇಷ ಅನುದಾನ ನೀಡಬೇಕು ಎಂದು ಸಂಘದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿತು.
ಸಂಘದ ಅಧ್ಯಕ್ಷೆ ಹೆಚ್.ಎಲ್.ಪುಷ್ಪ ಅವರ ನೇತೃತ್ವದ ನಿಯೋಗ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶುಕ್ರವಾರ ಭೇಟಿಯಾಗಿ ಹಲವು ಮಹತ್ವದ ಸಂಗತಿಗಳನ್ನು ಚರ್ಚಿಸಿ ತಮ್ಮ ಬೇಡಿಕೆಗಳನ್ನು ಮಂಡಿಸಿತು.
ವಿಶೇಷ ಅನುದಾನದ ಜತೆಗೆ ಅಕಾಡೆಮಿ ಮತ್ತು ಪ್ರಾಧಿಕಾರಗಳಿಗೆ ಅರ್ಹ ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು, ‘ನನ್ನ ಕವಿತೆ-ನನ್ನ ಹಾಡು’ ಯೋಜನೆಯ ಹಣವನ್ನು ಬಿಡುಗಡೆ ಮಾಡಲು ಸೂಚಿಸಬೇಕು ಎನ್ನುವುದೂ ಸೇರಿ ಹಲವು ಹಕ್ಕೊತ್ತಾಯಗಳನ್ನು ಮಂಡಿಸಿದರು.
ನಿಯೋಗದಲ್ಲಿ ವಸುಂಧರಾ ಭೂಪತಿ, ಎಂ.ಎಸ್.ಆಶಾದೇವಿ, ಬಿ.ಟಿ.ಲಲಿತಾನಾಯಕ್ ಸೇರಿ ಹಲವು ಲೇಖಕಿಯರಿದ್ದರು.