ಮಾಜಿ ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್‌ರಿಂದ ರಾಜ್ಯದಲ್ಲಿ 1,400 ಕೋಟಿ ರೂ. ಹೂಡಿಕೆ‌

Date:

ಚಾಮರಾಜನಗರ ಜಿಲ್ಲೆಯ ಬದನಕುಪ್ಪೆಯಲ್ಲಿ ಶ್ರೀಲಂಕಾದ ಖ್ಯಾತ ಕ್ರಿಕೆಟ್ ಆಟಗಾರ ಮುತ್ತಯ್ಯ ಮುರಳೀಧರನ್ ತಂಪು ಪಾನೀಯ ಮತ್ತು ಸಿಹಿತಿಂಡಿಗಳ ಉದ್ಯಮ ಆರಂಭಿಸುತ್ತಿದ್ದು, ಹಂತಹಂತವಾಗಿ ಒಟ್ಟು 1,400 ಕೋಟಿ ರೂ. ಹೂಡಿಕೆ ಮಾಡಲಿದ್ದಾರೆ ಎಂದು ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.

ಮಂಗಳವಾರ ತಮ್ಮನ್ನು ಭೇಟಿಯಾದ ಮುತ್ತಯ್ಯ ಅವರೊಂದಿಗೆ ಸಚಿವರು ಈ ಸಂಬಂಧ ಮಾತುಕತೆ ನಡೆಸಿದರು.

ಬಳಿಕ ಮಾತನಾಡಿದ ಸಚಿವರು, “ಬದನಕುಪ್ಪೆಯಲ್ಲಿ ಮುರಳೀಧರನ್ ಅವರು ‘ಮುತ್ತಯ್ಯ ಬ್ರಿವರೇಜಸ್ ಮತ್ತು ಕನ್ಫೆಕ್ಷನರೀಸ್’ ಎನ್ನುವ ಬ್ರ್ಯಾಂಡ್ ನಲ್ಲಿ ತಮ್ಮ ಉದ್ದಿಮೆ ಆರಂಭಿಸುತ್ತಿದ್ದು, ಶುರುವಿನಲ್ಲಿ 230 ಕೋಟಿ ರೂಪಾಯಿ ಹೂಡಿಕೆಗೆ ಯೋಜನೆ ರೂಪಿಸಲಾಗಿತ್ತು. ನಂತರ ಅದು ಈಗ ಸಾವಿರ ಕೋಟಿ ಮುಟ್ಟುತ್ತಿದೆ. ಮುಂದಿನ ದಿನಗಳಲ್ಲಿ 1,400 ಕೋಟಿ ಆಗಲಿದೆ ಎಂದು ಮುತ್ತಯ್ಯ ತಮಗೆ ತಿಳಿಸಿದ್ದಾರೆ” ಎಂದು ಅವರು ವಿವರಿಸಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ

“ಇದಕ್ಕಾಗಿ ಅವರಿಗೆ ಈಗಾಗಲೇ 46 ಎಕರೆ ಭೂಮಿ ಕೊಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಕೆಲ ಸಣ್ಣಪುಟ್ಟ ತೊಡಕುಗಳಿದ್ದವು. ಅವುಗಳನ್ನು ಕೂಡಲೇ ಸರಿಪಡಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಬದನಕುಪ್ಪೆಯಲ್ಲಿ ಮುಂಬರುವ ಜನವರಿಯಲ್ಲಿ ಉತ್ಪಾದನಾ ಚಟುವಟಿಕೆ ಆರಂಭವಾಗಲಿದೆ” ಎಂದು ಹೇಳಿದರು.

“ಮುಂಬರುವ ದಿನಗಳಲ್ಲಿ ಮುತ್ತಯ್ಯ ಧಾರವಾಡದಲ್ಲಿ ಕೂಡ ತಮ್ಮ ಉದ್ಯಮದ ಒಂದು ಘಟಕ ಸ್ಥಾಪಿಸಲಿದ್ದಾರೆ” ಎಂದು ಸಚಿವರು ತಿಳಿಸಿದರು.

ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್, ಆಯುಕ್ತರಾದ ಗುಂಜನ್ ಕೃಷ್ಣ, ಕೆಐಎಡಿ ಸಿಇಒ ಡಾ.ಮಹೇಶ, ಉದ್ಯೋಗ ಮಿತ್ರ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಈ ಸಂದರ್ಭದಲ್ಲಿ ಇದ್ದರು.

ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿ ಸಿ ಪಿ ಯೋಗೇಶ್ವರ್ ರಾಜೀನಾಮೆ: ಕಾಂಗ್ರೆಸ್ ಸೇರ್ಪಡೆ ಸಾಧ್ಯತೆ

ಚನ್ನಪಟ್ಟಣ ಉಪ ಚುನಾವಣೆ ದಿನದಿಂದ ದಿನಕ್ಕೆ ಮತ್ತಷ್ಟು ರಂಗೇರುತ್ತಿದೆ. ಎರಡು ದಿನಗಳ...

ಕರ್ನಾಟಕದ ಹಲವೆಡೆ ಮುಂದಿನ 6 ದಿನ ಭಾರಿ ಮಳೆ: ಹವಾಮಾನ ಇಲಾಖೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದೊಂದು ವಾರದಿಂದ ಅಬ್ಬರಿಸುತ್ತಿರುವ ವರುಣನ ಆರ್ಭಟ ಮುಂದುವರೆಯುವ...

ವಿಜಯನಗರ | ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವು

ಕಲುಷಿತ ನೀರು ಸೇವಿಸಿ ನವಜಾತ ಶಿಶು ಸೇರಿ ಐವರು ಸಾವನ್ನಪ್ಪಿದ್ದಾರೆ. ಶುದ್ಧ...

ಬೆಂಗಳೂರು ಕಟ್ಟಡ ದುರಂತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ

ಬೆಂಗಳೂರಿನ ಹೆಣ್ಣೂರಿನ ಬಾಬುಸಾಪಾಳ್ಯದಲ್ಲಿ ಮಂಗಳವಾರ ನಿರ್ಮಾಣ ಹಂತದ 6 ಅಂತಸ್ತಿನ ಕಟ್ಟಡವೊಂದು...