ಶೌಚಾಲಯ ಕಾಣದ ರಾಜ್ಯದ 170 ಸರ್ಕಾರಿ ಶಾಲೆಗಳು

Date:

ರಾಜ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಮೂಲಭೂತ ಸೌಕರ್ಯಗಳನ್ನು ಪೂರೈಸುವಲ್ಲಿ ರಾಜ್ಯ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯದ 170 ಸರ್ಕಾರಿ ಶಾಲೆಗಳಲ್ಲಿ ಶೌಚಾಲಯದ ವ್ಯವಸ್ಥೆಯೇ ಇಲ್ಲದೆ ಇಂದಿಗೂ ವಿದ್ಯಾರ್ಥಿಗಳಿಗೆ ಬಯಲೇ ಗತಿ ಎಂಬಂತಾಗಿದೆ.

- Advertisement -

ಬಯಲು ಬಹಿರ್ದೆಸೆ ಮುಕ್ತ ದೇಶ ಮಾಡುವ ಉದ್ದೇಶದಿಂದ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭಾರಿ ಪ್ರಚಾರ ನಡೆಸಿ, ಅದಕ್ಕಾಗಿ ಕೋಟ್ಯಾಂತರ ಅನುದಾನ ವೆಚ್ಚ ಮಾಡುತ್ತಿದೆ. ಅಷ್ಟೇ ಅಲ್ಲ, ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿಯೇ ಸರ್ಕಾರ ಪ್ರತ್ಯೇಕ ಅನುದಾನವೂ ನೀಡುತ್ತಿದೆ. ಆದರೆ, ನೂರಕ್ಕೂ ಅಧಿಕ ಶಾಲೆಗಳಲ್ಲಿ ವ್ಯಾಸಂಗ ಮಾಡುವ ಮಕ್ಕಳಿಗೆ ಕನಿಷ್ಠ ಮೂಲಸೌಕರ್ಯ ಒದಗಿಸದೆ ಇರುವುದು ಶಿಕ್ಷಣ ಸಚಿವರೇ ಕೊಟ್ಟ ಅಂಕಿ-ಅಂಶಗಳಿಂದ ಗೊತ್ತಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಶಿಕ್ಷಣ ಹಕ್ಕು ಕಾಯ್ದೆ ಜಾರಿಯಲಿದ್ದರೂ ರಾಜ್ಯದ 701 ಶಾಲೆಗಳಲ್ಲಿ ವಿದ್ಯಾರ್ಥಿನಿಯರು ಈಗಲೂ ಬಯಲು ಶೌಚಾಲಯವನ್ನೇ ನೆಚ್ಚಿಕೊಳ್ಳಬೇಕಾದ ಸ್ಥಿತಿ ಇದೆ. 61 ಸರ್ಕಾರಿ ಶಾಲೆಗಳಲ್ಲಿ ಶುದ್ದ ಕುಡಿಯುವ ನೀರಿನ ಸೌಲಭ್ಯವಿಲ್ಲ. 4,755 ಶಾಲೆಗಳಿಗೆ ಕಾಂಪೌಂಡ್ ಗೋಡೆಗಳಿಲ್ಲ. 61 ಶಾಲೇಲಿ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದಿರುವುದು ಶಿಕ್ಷಣ ಇಲಾಖೆ ಬಹಿರಂಗಪಡಿಸಿದೆ.

ರಾಜ್ಯದಲ್ಲಿ 46,460 ಸರ್ಕಾರಿ ಶಾಲೆಗಳಿವೆ. 2025-26ನೇ ಸಾಲಿಗೆ 40,74,525 ವಿದ್ಯಾರ್ಥಿಗಳು ದಾಖಲಾಗಿದ್ದಾರೆ. ಒಟ್ಟು ಶಾಲೆಗಳ ಪೈಕಿ 45,688 ಶಾಲೆಗಳು ಸ್ವಂತ ಕಟ್ಟಡ ಹೊಂದಿವೆ. 606 ಸ್ವಂತ ಕಟ್ಟಡ ಹೊಂದಿಲ್ಲದೆ ಇರುವ ಶಾಲೆಗಳಿವೆ. 46,290 ಶಾಲೆಗಳು ಶೌಚಾಲಯವನ್ನು ಹೊಂದಿವೆ.

ಸರ್ಕಾರಿ ಶಾಲೆಗಳಿಗೆ ಶೌಚಾಲಯಗಳು ಮತ್ತು ಕುಡಿಯುವ ನೀರಿನಂತಹ ಮೂಲಭೂತ ಸೌಲಭ್ಯಗಳನ್ನು ಒದಗಿಸುವುದು ಮೂಲಭೂತ ಅಭಿವೃದ್ಧಿ ಹಕ್ಕುಗಳು. ಆದರೆ, ಸರ್ಕಾರ ಮಕ್ಕಳ ಹಕ್ಕುಗಳಿಗೆ ಆದ್ಯತೆ ನೀಡದೆ ಶಾಲೆಗಳನ್ನು ಮೂಲಭೂತ ಸೌಕರ್ಯಗಳಿಂದ ಸೊರಗುವಂತೆ ಮಾಡಿರುವುದು ವಿಪರ್ಯಾಸವೇ ಸರಿ.

ಶಾಲೆಗಳಲ್ಲಿ ವಿದ್ಯಾರ್ಥಿನಿಯರಿಗೆ ಪ್ರತ್ಯೇಕ ಶೌಚಾಲಯ ವ್ಯವಸ್ಥೆ ತೀರಾ ಅನಿವಾರ್ಯ. ಆದರೆ, ರಾಜ್ಯದ 701 ಸರ್ಕಾರಿ ಶಾಲೆಗಳ ಹೆಣ್ಣು ಮಕ್ಕಳು ಪ್ರತ್ಯೇಕ ಶೌಚಾಲಯ ವ್ಯವಸ್ಥೆಯಿಂದ ವಂಚಿತರಾಗಿದ್ದಾರೆ. ಇನ್ನು ಬಾಲಕರ ಶೌಚಾಲಯ ನಿರ್ಮಾಣಕ್ಕೂ ಮಹತ್ವ ನೀಡದ ಸರ್ಕಾರ, ರಾಜ್ಯದ 2,039 ಸರ್ಕಾರಿ ಶಾಲೆಗಳಲ್ಲಿ ಪ್ರತ್ಯೇಕ ಶೌಚಾಲಯ ಇಲ್ಲದೆ ಹುಡುಗರು ಶೌಚಕ್ಕೆ ಬಯಲನ್ನೇ ಆಶ್ರಯಿಸಿದ್ದಾರೆ.

ʼಕಲ್ಯಾಣ ಕರ್ನಾಟಕʼದಲೇ ಹೆಚ್ಚು : ‌

ಸರ್ಕಾರಿ ಶಾಲೆಯಲ್ಲಿ 20 ಸಾವಿರಕ್ಕೂ ಅಧಿಕ ಶಿಕ್ಷಕರ ಕೊರತೆ ಎದುರಿಸುತ್ತಿರುವ ʼಕಲ್ಯಾಣʼ ಶೈಕ್ಷಣಿಕವಾಗಿ ಹಿಂದುಳಿದ ಪ್ರದೇಶ ಎಂಬ ಹಣಿಪಟ್ಟಿ ಹೊಂದಿದೆ. ಆದರೆ, ಸರ್ಕಾರಿ ಶಾಲೆಯಲ್ಲಿ ಓದುವ ಬಾಲಕ-ಬಾಲಕಿಯರಿಗೆ ಶೌಚಾಲಯ ವ್ಯವಸ್ಥೆ ಕಲ್ಪಿಸದ ಅತಿ ಹೆಚ್ಚು ಶಾಲೆಗಳಿರುವುದು ʼಕಲ್ಯಾಣʼ ಕರ್ನಾಟಕದ ಏಳು ಜಿಲ್ಲೆಯಲ್ಲಿ ಎಂಬುದು ಶೋಚನೀಯ ಸಂಗತಿ. ಶೌಚಾಲಯ ವ್ಯವಸ್ಥೆ ಇಲ್ಲದ ರಾಜ್ಯದ ಒಟ್ಟು 170 ಶಾಲೆಗಳ ಪೈಕಿ ಕಲ್ಯಾಣ ಕರ್ನಾಟಕ ಭಾಗದ ಏಳು ಜಿಲ್ಲೆಗಳ 80 ಶಾಲೆಗಳಿವೆ.

ಬೀದರ್‌ ಹಿಂದೆ :

ರಾಜ್ಯದಲ್ಲಿ ಶೌಚಾಲಯ ಇಲ್ಲದ ಶಾಲೆಗಳು ಅತಿ ಹೆಚ್ಚು ಇರುವುದು ಕಲ್ಯಾಣ ಕರ್ನಾಟಕದ ಜಿಲ್ಲೆಗಳಾಗಿವೆ. ಅಚ್ಚರಿ ಸಂಗತಿ ಏನೆಂದರೆ ಬೀದರ್‌ ಜಿಲ್ಲೆಯ 27 ಶಾಲೆಗಳಿಗೆ ಶೌಚಾಲಯ ಇಲ್ಲ. ತದನಂತರ ವಿಜಯಪುರ ಜಿಲ್ಲೆಯ 17, ಬಳ್ಳಾರಿ ಜಿಲ್ಲೆಯ 15, ಕಲಬುರಗಿ ಜಿಲ್ಲೆಯ 11 ಶಾಲೆಗಳು ಶೌಚಾಲಯ ಹೊಂದಿಲ್ಲ. ಅಲ್ಲಿನ ಮಕ್ಕಳು ಇಂದಿಗೂ ಬಯಲು ಬಹಿರ್ದೆಸೆ ಅವಲಂಬಿಸಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ.

ರಾಜ್ಯ ಸರ್ಕಾರ 2026-27ನೇ ಶೈಕ್ಷಣಿಕ ವರ್ಷದಿಂದ ಕೆಪಿಎಸ್ ಶಾಲೆಗಳನ್ನು ಆರಂಭಿಸಲು ಸಿದ್ಧತೆ ಮಾಡಿಕೊಂಡಿದೆ. ಆದರೆ, ರಾಜ್ಯದಲ್ಲಿರುವ ಸರ್ಕಾರಿ ಶಾಲೆಗಳಿಗೆ ಯಾವುದೇ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಇರುವುದಕ್ಕೆ ನಾಗರಿಕ ಸಮಾಜ ಅಸಮಾಧಾನ ವ್ಯಕ್ತಪಡಿಸುತ್ತಿದೆ.

ʼಬೀದರ್‌ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಶೌಚಾಲಯ ಇಲ್ಲದಿರುವ ಬಗ್ಗೆ ನನಗೆ ಪೂರ್ಣ ಮಾಹಿತಿ ಇಲ್ಲ. ಕೆಲವೆಡೆ ಶೌಚಾಲಯಗಳಿದ್ದರೂ ಸೂಕ್ತ ನಿರ್ವಹಣೆ ಕೊರತೆಯಿಂದ ಹಾಳಾಗಿರಬಹುದು.ಈ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು ಪರಿಶೀಲಿಸುವೆʼ ಎಂದು ಶಿಕ್ಷಣ ಇಲಾಖೆ ಉಪನಿರ್ದೇಶಕ ಎಚ್.ಜಿ.ಸುರೇಶ ʼಈದಿನʼಕ್ಕೆ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಒಂದು ಲಕ್ಷ ಮನೆಗಳಲ್ಲಿ ಗ್ರಂಥಾಲಯ ನಿರ್ಮಿಸುವ ಗುರಿ : ಡಾ.ಮಾನಸ

ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಶೌಚಾಲಯ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸುವುದು ಶಿಕ್ಷಣ ಇಲಾಖೆಯ ಜವಾಬ್ದಾರಿ ಇದೆ. ಆದರೆ, ರಾಜ್ಯದಲ್ಲಿ ನೂರಕ್ಕೂ ಹೆಚ್ಚು ಶಾಲೆಗಳಲ್ಲಿ ಶೌಚಾಲಯವೇ ಇಲ್ಲದಿರುವುದು ವಿಪರ್ಯಾಸದ ಸಂಗತಿ. ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೊಳಿಸುತ್ತಿದೆ. ಅಲ್ಲಿನ ವಿದ್ಯಾರ್ಥಿಗಳ ಕಲಿಕೆಗೆ ಶಿಕ್ಷಕರ ಕೊರತೆ, ಅಗತ್ಯ ಮೂಲಭೂತ ಸೌಲಭ್ಯ ಸೇರಿ ನಾನಾ ಕೊರತೆಗಳ ಮಧ್ಯೆ ಶಾಲೆಗಳು ಸೊರಗುತ್ತಿವೆ. ಈ ಎಲ್ಲ ಕಾರಣಕ್ಕೆ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರ ಶಾಲೆಗಳಿಗೆ ಸೇರಿಸದೆ ಇರುವುದಕ್ಕೆ ದಾಖಲಾತಿ ಕುಸಿಯುತ್ತಿದೆ. ಕೂಡಲೇ ರಾಜ್ಯದ ಎಲ್ಲ ಸರ್ಕಾರ ಶಾಲೆಗಳಿಗೆ ಕಡ್ಡಾಯವಾಗಿ ಶೌಚಾಲಯ ನಿರ್ಮಿಸಲು ಇಲಾಖೆ ಕ್ರಮವಹಿಸಬೇಕು. ಇಲ್ಲದಿದ್ದರೆ ರಾಜ್ಯಾದ್ಯಂತ ಹೋರಾಟ ರೂಪಿಸಲಾಗುವುದುʼ ಎಂದು ಎಐಡಿಎಸ್‌ಒ ಬೀದರ್‌ ಜಿಲ್ಲಾ ಸಂಚಾಲಕ ವೆಂಕಟೇಶ ದೇವದುರ್ಗ ʼಈದಿನʼ ಹೇಳಿದ್ದಾರೆ.

WhatsApp Image 2025 02 06 at 11.55.32 e1738823214905
ಬಾಲಾಜಿ ಕುಂಬಾರ್
+ posts

ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ್
ಬಾಲಾಜಿ ಕುಂಬಾರ ಅವರು ಔರಾದ್ ತಾಲ್ಲೂಕಿನ ಚಟ್ನಾಳ ಗ್ರಾಮದವರು. ಸಾಹಿತ್ಯ, ಶಿಕ್ಷಣ ಹಾಗೂ ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದಾರೆ. ಸದ್ಯ 'ಈದಿನ.ಕಾಮ್‌' ಮಾಧ್ಯಮ ಸಂಸ್ಥೆಯಲ್ಲಿ ಬೀದರ್ ಜಿಲ್ಲಾ ಹಿರಿಯ ಸಂಯೋಜಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕವಿತೆ, ಲೇಖನ, ದೇಶಿ ನುಡಿ ಬರಹ ಬರೆಯುವುದು ಇವರ ಮುಖ್ಯ ಹವ್ಯಾಸ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿ ಶವ ಪತ್ತೆ; ಕೊಲೆ ಶಂಕೆ

ಕಮಲಾಪುರ ತಾಲ್ಲೂಕಿನ ಡೊಂಗರಗಾಂವ ಗ್ರಾಮದಲ್ಲಿ ಹಾಲು ಉತ್ಪಾದಕರ ಸಂಘದ ಕಾರ್ಯದರ್ಶಿಯೊಬ್ಬರ ಮೃತದೇಹ...

ಬಿಜೆಪಿ ಸರ್ಕಾರಗಳ ಅನಾಹುತಗಳಿಂದಾಗಿಯೇ ಆರ್ಥಿಕ ಇಲಾಖೆಯವರು ನಮಗೀಗ ಪತ್ರ ಬರೆದಿದ್ದಾರೆ: ಸಿಎಂ ಡಿ ಕೆ ಶಿವಕುಮಾರ್

"ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಬಜೆಟ್ ಮೀರಿ ಯೋಜನೆಗಳ...

ಎಂಆರ್‌ಪಿಎಲ್ ಸ್ಫೋಟದ ಹಾನಿಯು ಕಂಪೆನಿ ಹೇಳುತ್ತಿರುವುದಕ್ಕಿಂತ ಹಲವು ಪಟ್ಟು ಗಂಭೀರವಾಗಿದೆ: ಸಿಪಿಐಎಂ

ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಸುರತ್ಕಲ್ ಹತ್ತಿರದ ಜೋಕಟ್ಟೆ ಪ್ರದೇಶದಲ್ಲಿರುವ ಎಂಆರ್‌ಪಿಎಲ್‌ನಲ್ಲಿ...

ಬೀದರ್‌ | ಅ.2ಕ್ಕೆ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಪದಗ್ರಹಣ

ಬೀದರ್ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಅಬ್ದುಲ್ ಮನ್ನಾನ್...