ಬುಧವಾರ ಒಂದೇ ದಿನ 24,500 ಆಸ್ತಿ ನೋಂದಣಿ; 244 ಕೋಟಿ ರೂ .ಆದಾಯ

Date:

ಬುಧವಾರ(ಸೆ.27) ಒಂದೇ ದಿನ ಆಸ್ತಿ ನೋಂದಣಿ ಸೇರಿದಂತೆ 24,500 ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 244 ಕೋಟಿ ರೂ. ಆದಾಯ ಸಂಗ್ರಹವಾಗಿದೆ. ಮುದ್ರಾಂಕ ಮತ್ತು ನೋಂದಣಿ ಇಲಾಖೆ ಇತಿಹಾಸದಲ್ಲೇ ಒಂದೇ ದಿನ ಇಷ್ಟು ದೊಡ್ಡ ಪ್ರಮಾಣದಲ್ಲಿ ಆಸ್ತಿ ನೋಂದಣಿ – ದಸ್ತಾವೇಜು ಪ್ರಕ್ರಿಯೆ ನಡೆದಿರುವುದು ಹಾಗೂ ಗರಿಷ್ಠ ಶುಲ್ಕ ಸಂಗ್ರಹವಾಗಿರುವುದು ಹೊಸ ದಾಖಲೆಯಾಗಿದೆ.

ಕಳೆದ ಸೋಮವಾರವಷ್ಟೇ 15936 ನೋಂದಣಿ ದಸ್ತಾವೇಜು ಪ್ರಕ್ರಿಯೆ ನಡೆದಿದ್ದು 158.28 ಕೋಟಿ ರೂ. ಆದಾಯ ಸಂಗ್ರಹವಾಗಿತ್ತು. ಇದೀಗ ಎರಡೇ ದಿನದಲ್ಲಿ ಈ ಸಂಖ್ಯೆ ಮತ್ತಷ್ಟು ಹೆಚ್ಚುತ್ತಲೇ ಇದ್ದು ಕಂದಾಯ – ನೋಂದಣಿ ಇಲಾಖೆ ಮತ್ತೊಂದು ಮೈಲುಗಲ್ಲು ಮುಟ್ಟಿದಂತಾಗಿದೆ.

ಕಳೆದ ಸೆಪ್ಟೆಂಬರ್ 22 ರಂದು 12,955 ಆಸ್ತಿ ನೋಂದಣಿ, ದಸ್ತಾವೇಜು ಪ್ರಕ್ರಿಯೆ ಮೂಲಕ 130.87 ಕೋಟಿ ರೂ. ಹಾಗೂ ಸೆ.25ರಂದು 158 28 ಕೋಟಿ ರೂ. ಹಣ ಸರಕಾರದ ಬೊಕ್ಕಸಕ್ಕೆ ಬಂದಿದೆ ಎಂಬುದು ಉಲ್ಲೇಖಾರ್ಹ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಕೇಜ್ರಿವಾಲ್ ಬಂಗಲೆ ನಿರ್ಮಾಣದಲ್ಲಿ ಅಕ್ರಮ ಎಂದ ಸಿಬಿಐ; ಬಿಜೆಪಿಯ ಸೇಡು ಎಂದು ಎಎಪಿ ತಿರುಗೇಟು

ಕಾವೇರಿ-2 ತಂತ್ರಾಂಶದ ಫಲಿತಾಂಶ

ನೋಂದಣಿಯು ಸೇರಿದಂತೆ ಇತರೆ ಪ್ರಕ್ರಿಯೆಗಳಿಗೆ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಮಧ್ಯವರ್ತಿಗಳ ಹಾವಳಿಯಿಲ್ಲದೆ ಆಸ್ತಿದಾರರೇ ಬಯಸಿದ ದಿನ ಮತ್ತು ಸಮಯಕ್ಕೆ ಆಸ್ತಿ ನೋಂದಣಿಯನ್ನು ಮಾಡಿಕೊಳ್ಳುವ, ಆನ್ಲೈನ್‌ನಲ್ಲೇ ಶುಲ್ಕ ಪಾವತಿ ವ್ಯವಸ್ಥೆಯಿರುವ ‘ಕಾವೇರಿ- 2’ ತಂತ್ರಾಂಶವು ಈಗಾಗಲೇ ಅಳವಡಿಕೆಯಾಗಿದೆ. ಇದೇ ಕಾರಣಕ್ಕೆ ಆಸ್ತಿ ನೋಂದಣಿ ಸಂಖ್ಯೆಯೂ ಹೆಚ್ಚುತ್ತಿದೆ.

ರಾಜ್ಯದ 256 ಉಪನೋಂದಣಿ ಕಚೇರಿಗಳಲ್ಲಿ ಜೂ.25ರಿಂದ ಪೂರ್ಣ ಪ್ರಮಾಣದಲ್ಲಿ ಸುಧಾರಿತ ತಂತ್ರಾಂಶದಡಿಯೇ ನೋಂದಣಿ, ದಸ್ತಾವೇಜು ಕಾರ್ಯ ನಡೆದಿವೆ. ಒಂದೇ ದಿನದಲ್ಲಿ ಗರಿಷ್ಠ ನೋಂದಣಿ, ದಸ್ತಾವೇಜು ಪ್ರಕ್ರಿಯೆಯನ್ನು ಯಶಸ್ವಿಯಾಗಿ ನಡೆಸುವ ಮೂಲಕ ತಂತ್ರಾಂಶವು ತನ್ನ ಗರಿಷ್ಠ ಕಾರ್ಯಕ್ರಮತೆಯನ್ನು ಸಾಬೀತುಪಡಿಸುತ್ತಿದೆ.

ಕಾವೇರಿ-2 ತಂತ್ರಾಂಶಕ್ಕೆ ಆರಂಭದಲ್ಲಿ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಇದರಲ್ಲಿರುವ ಸಮಸ್ಯೆಗಳ ಕುರಿತು ಸಾಕಷ್ಟು ದೂರುಗಳೂ ಇಲಾಖೆಗೆ ಬಂದಿದ್ದವು. ಇದೀಗ ಎಲ್ಲ ಸಮಸ್ಯೆಗಳನ್ನೂ ನಿವಾರಿಸಿದ್ದು, ಕಾವೇರಿ-2 ತಂತ್ರಾಂಶ ಸಾಕಷ್ಟು ಜನ ಮನ್ನಣೆ ಗಳಿಸಿದೆ.

ಇದರ ಸಹಾಯದಿಂದ ಮಧ್ಯವರ್ತಿಗಳ ಹಾವಳಿ ಇಲ್ಲದೇ ಶೀಘ್ರ ಮತ್ತು ಪಾರದರ್ಶಕವಾಗಿ ನೋಂದಣಿ ಪ್ರಕ್ರಿಯೆಗಳು ಮುಗಿಯುತ್ತಿವೆ. ಈ ಮೂಲಕ ಸರ್ಕಾರಕ್ಕೂ ಆದಾಯ ಹೆಚ್ಚುತ್ತಿದ್ದು, ಜನರಿಗೂ ಸರಳ ಸುಲಭ ಸೇವೆಯ ಜೊತೆಗೆ ಸಮಯವೂ ಉಳಿಯುತ್ತಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಶೇಷ ಜಾತ್ರೆ | ತಲೆ ಮೇಲೆ ತೆಂಗಿನಕಾಯಿ ಒಡೆದುಕೊಂಡು ಮಳೆಗಾಗಿ ಪ್ರಾರ್ಥನೆ ಮಾಡಿದ ಖಾಜಿಸೊನ್ನೇನಹಳ್ಳಿ ಗ್ರಾಮಸ್ಥರು

ಅಕಾಲಿಕ ಮಳೆಯಿಂದ ರಾಜ್ಯದಲ್ಲಿ ಬಿರು ಬೇಸಿಗೆ ವಾತಾವರಣ ಸೃಷ್ಟಿಯಾಗಿದೆ. ದಿನದಿಂದ ದಿನಕ್ಕೆ...

ಕೊಪ್ಪಳ | ಕಾಣೆಯಾಗಿದ್ದ ಏಳು ವರ್ಷದ ಬಾಲಕಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ

ಕೊಪ್ಪಳ ತಾಲೂಕಿನ ಕಿನ್ನಾಳ ಗ್ರಾಮದಲ್ಲಿ ಎರಡು ದಿನಗಳ ಹಿಂದೆ ಕಾಣೆಯಾಗಿದ್ದ ಬಾಲಕಿ...

ಕಾಂಗ್ರೆಸ್‌ ಗ್ಯಾರಂಟಿಗಳಿಂದ ಮಹಿಳೆಯರ ಸಬಲೀಕರಣ ಆಗಲ್ಲ: ಸುಮಲತಾ

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆಗಳು ಸಮರ್ಥನೀಯವಲ್ಲ. ಅವುಗಳು ಮಹಿಳೆಯರನ್ನು ಸಬಲೀಕರಣ ಮಾಡುವುದಿಲ್ಲ ಎಂದು...