ಬೆಂಗಳೂರಿನಲ್ಲಿ ಶೇ.25 ರಷ್ಟು ಸೈಬರ್ ಅಪರಾಧ ಪ್ರಕರಣ ದಾಖಲು: ಡಿಜಿ ಐಜಿಪಿ ಅಲೋಕ್ ಮೋಹನ್

Date:

ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ದಾಖಲಾದ ಪ್ರಕರಣಗಳ ಪೈಕಿ ಬೆಂಗಳೂರಿನಲ್ಲಿ ಶೇ.25 ಪ್ರಕರಣ ದಾಖಲಾದರೆ, ರಾಜ್ಯದಲ್ಲಿ ಶೇ.10 ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿವೆ.

ಬೆಂಗಳೂರು ನಗರ ಪೊಲೀಸ್‌ನ ಹಿರಿಯ ಅಧಿಕಾರಿಗಳೊಂದಿಗೆ ಗುರುವಾರ ನಡೆದ ಪರಿಶೀಲನಾ ಸಭೆಯಲ್ಲಿ ಡಿಜಿ ಐಜಿಪಿ ಅಲೋಕ್ ಮೋಹನ್ ಅವರು ಮಾತನಾಡಿ, “ವಾಸ್ತವವಾಗಿ, ಸೈಬರ್ ಅಪರಾಧಗಳ ಸಂಖ್ಯೆಯು ದೇಶಾದ್ಯಂತ ಮತ್ತು ಜಾಗತಿಕವಾಗಿ ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ, ಹೆಚ್ಚುವರಿ ಡಿಸಿಪಿ ಮತ್ತು ಇತರ ಉನ್ನತ ಮಟ್ಟದ ಮೇಲ್ವಿಚಾರಣಾ ಹುದ್ದೆಗಳಿಗೆ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗುವುದು” ಎಂದು ಹೇಳಿದರು.

“ಮುಂದಿನ ಆರು ತಿಂಗಳಲ್ಲಿ ಕರ್ನಾಟಕದಾದ್ಯಂತ ಸೈಬರ್ ಅಪರಾಧ ಪ್ರಕರಣಗಳ ತನಿಖೆಗೆ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ನೀಡಲಾಗುವುದು. ಸೈಬರ್ ಅಪರಾಧಗಳ ಬಗ್ಗೆ ಇನ್ನು ಮುಂದೆ ಹೆಚ್ಚಿನ ಗಮನ ನೀಡಲಾಗುವುದು” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಗನನ್ನೇ ಗುಂಡಿಕ್ಕಿ ಕೊಲೆ ಮಾಡಿದ ತಂದೆ

“ಇನ್‌ಸ್ಪೆಕ್ಟರ್‌ಗಳು ಮತ್ತು ಸಬ್‌ಇನ್‌ಸ್ಪೆಕ್ಟರ್‌ಗಳಿಗೆ ತರಬೇತಿ ಕಾರ್ಯಕ್ರಮಗಳನ್ನು ನಿಯಮಿತವಾಗಿ ನಡೆಸಲಾಗುವುದು. ಜತೆಗೆ ಕರ್ನಾಟಕವನ್ನು ಡ್ರಗ್ಸ್ ಮುಕ್ತ ಮಾಡಲು ಪ್ರಯತ್ನಿಸಲಾಗುತ್ತಿದೆ. ಕಳೆದ ವರ್ಷ, ಎನ್‌ಡಿಪಿಎಸ್ ಅಡಿಯಲ್ಲಿ ಗರಿಷ್ಠ ಸಂಖ್ಯೆಯ ಪ್ರಕರಣಗಳು ದಾಖಲಾಗಿದ್ದವು. 125 ಕೋಟಿ ಮೌಲ್ಯದ ಮಾದಕ ದ್ರವ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಳೆದ ವರ್ಷ 150 ವಿದೇಶಿ ಪ್ರಜೆಗಳು ಸೇರಿದಂತೆ 7,000 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ” ಎಂದು ಅವರು ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

14 ಲೋಕಸಭಾ ಕ್ಷೇತ್ರಗಳಿಗೆ ಕಾಂಗ್ರೆಸ್‌ನಿಂದ ಹೆಚ್ಚುವರಿ ಉಸ್ತುವಾರಿ ಸಚಿವರ ನೇಮಕ

ಕರ್ನಾಟಕದ ಎರಡನೇ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳಿಗೆ ಸಚಿವರನ್ನು ಹೆಚ್ಚುವರಿ...

ತುಮಕೂರು | ಕೇಂದ್ರದಲ್ಲಿ ಇಂಡಿಯಾ ಒಕ್ಕೂಟಕ್ಕೆ ಅಧಿಕಾರ: ಗೃಹ ಸಚಿವ ಪರಮೇಶ್ವರ್

ದೇಶದ ಭವಿಷ್ಯವನ್ನು ನಿರ್ಧರಿಸುವ ಚುನಾವಣೆ ಇದಾಗಿದ್ದು, ರಾಜ್ಯದಲ್ಲಿ ಅತಿ ಹೆಚ್ಚು ಲೋಕಸಭಾ...

ಚೊಂಬು, ಗ್ಯಾಸ್ ಹೊರತುಪಡಿಸಿ ಶಾಂತಿಯುತ ಮತದಾನಕ್ಕೆ ಸಾಕ್ಷಿಯಾದ ಬೆಂಗಳೂರು

ಲೋಕಸಭಾ ಚುನಾವಣೆ ಹಿನ್ನೆಲೆ, ರಾಜ್ಯದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ...

ಬರ ಪರಿಹಾರ | ಮೋದಿ ಶ್ಲಾಘಿಸುವ ಭರದಲ್ಲಿ ಮಾನ ಕಳೆದುಕೊಳ್ಳುತ್ತಿರುವ ಬಿಜೆಪಿ ನಾಯಕರು!

ಕೇಂದ್ರದಿಂದ ಬರ ಪರಿಹಾರ ಘೋಷಣೆಯಾಗುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಅಭಿನಂದಿಸಿ ಬಿಜೆಪಿ...