ಬಿಡದಿ ಫಾರ್ಮ್‌ಹೌಸ್‌ನಲ್ಲಿ 25 ತಲೆಬುರುಡೆ, ಮೂಳೆಗಳು ಪತ್ತೆ

Date:

Advertisements

ಬಿಡದಿಯ ಜೋಗರ ದೊಡ್ಡಿ ಗ್ರಾಮದಲ್ಲಿ ನಿವಾಸಿಯೊಬ್ಬರ ತೋಟದ ಮನೆಯಲ್ಲಿ 25 ಮಾನವ ತಲೆಬುರುಡೆಗಳು ಮತ್ತು ಎರಡು ಮೂಟೆ ಮೂಳೆಗಳು ಪತ್ತೆಯಾಗಿವೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

ತಲೆ ಬುರುಡೆಯನ್ನು ಬಲರಾಮ್ ಎಂಬ ವ್ಯಕ್ತಿ ಸಂಗ್ರಹ ಮಾಡುತ್ತಿದ್ದನು ಎಂದು ತಿಳಿದುಬಂದಿದೆ. ಈತ ಮಾನವ ತಲೆ ಬುರಡೆಗಳನ್ನು ಸಂಗ್ರಹ ಮಾಡಿ, ಅವುಗಳಿಂದ ಮಾಟ-ಮಂತ್ರ ಮಾಡುತ್ತಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಆತ ಸ್ಮಶಾನದಲ್ಲಿ ಪೂಜೆ ಮಾಡುತ್ತಿದ್ದದನ್ನು ನೋಡಿದ ಜನರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಬಂದ ಪೊಲೀಸರು ಬಲರಾಮ್​ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Advertisements

ತಲೆಬುರುಡೆ ಮತ್ತು ಮೂಳೆಗಳಿಂದ ಮಾಡಿದ ಕುರ್ಚಿ ಪತ್ತೆ

ಫಾರ್ಮ್‌ಹೌಸ್‌ಗೆ ಭೇಟಿ ನೀಡಿದಾಗಲೆಲ್ಲ ಶಂಕಿತ ವ್ಯಕ್ತಿಯು ವಿಶ್ರಾಂತಿ ಪಡೆಯುತ್ತಿದ್ದನು. ಅತನ ಬಳಿಯಿದ್ದ ತಲೆಬುರುಡೆ ಮತ್ತು ಮೂಳೆಗಳಿಂದ ಮಾಡಿದ ಕುರ್ಚಿ ಮತ್ತು ಹಾಸಿಗೆ ಜನರಲ್ಲಿ ಭಯವನ್ನು ಉಂಟುಮಾಡಿದೆ.

ಅಮಾವಾಸ್ಯೆಯ ದಿನವಾದ ಭಾನುವಾರ, ಶಂಕಿತ ತನ್ನ ಜಮೀನಿನ ಬಳಿಯ ಸ್ಮಶಾನದಲ್ಲಿ ಕೆಲವು ಧಾರ್ಮಿಕ ಕ್ರಿಯೆಗಳನ್ನು ನಡೆಸುತ್ತಿರುವುದು ಕಂಡುಬಂದಿದೆ. ಇದನ್ನು ನೋಡಿದ ಸ್ಥಳೀಯರು ಈತ ಮಾಟಮಂತ್ರ ಮಾಡುತ್ತಿದ್ದಾನೆ ಎಂದು ಹೆದರಿ ಬಿಡದಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಸ್ಥಳಕ್ಕಾಗಮಿಸಿದ ಪೊಲೀಸರು ಮನೆ ಶೋಧ ನಡೆಸಿದಾಗ ತಲೆಬುರುಡೆ ಹಾಗೂ ಮೂಳೆಗಳು ಪತ್ತೆಯಾಗಿವೆ. ಆದರೆ, ಶಂಕಿತ ವ್ಯಕ್ತಿಯು ತಾನು ಯಾವುದೇ ತಪ್ಪು ಮಾಡಿಲ್ಲ ಮತ್ತು ಅಮವಾಸ್ಯೆ ದಿನದಂದು ಪೂಜೆ ಮಾಡುವುದನ್ನು ತನ್ನ ಕುಟುಂಬವು ದಶಕಗಳಿಂದ ಅನುಸರಿಸುತ್ತಿದೆ ಎಂದು ಪೊಲೀಸರಿಗೆ ಹೇಳಿದ್ದಾನೆ.

“ಆರೋಪಿಯೂ ಆಚರಣೆಗೆ ತಲೆಬುರುಡೆ ಬಳಸಿದ್ದಾರೆ. ಅವರ ಜಮೀನಿನಲ್ಲಿ ಪತ್ತೆಯಾದ ತಲೆಬುರುಡೆ ಮತ್ತು ಮೂಳೆಗಳನ್ನು ಸಮಾಧಿ ಸ್ಥಳದಿಂದ ಸಂಗ್ರಹಿಸಲಾಗಿದೆ” ಎಂದು ತಿಳಿದುಬಂದಿದೆ.

ಶಂಕಿತನ ಫಾರ್ಮ್‌ಹೌಸ್ ಬಿಡದಿ ಕೈಗಾರಿಕಾ ಪ್ರದೇಶಕ್ಕೆ ಸಮೀಪದಲ್ಲಿದೆ. ಅವರ ಆಸ್ತಿಯ ಮುಂಭಾಗದ ಭಾಗವನ್ನು ಉದ್ಯಮಕ್ಕೆ ಗುತ್ತಿಗೆ ನೀಡಲಾಗಿದೆ. ಆದರೆ ಫಾರ್ಮ್‌ಹೌಸ್ ಹಿಂಭಾಗದಲ್ಲಿದೆ. ಅಲ್ಲಿ ಆರೋಪಿ ಆಚರಣೆಗಳನ್ನು ನಡೆಸುತ್ತಿದ್ದರು.

ಫಾರ್ಮ್‌ಹೌಸ್‌ಗೆ ಶ್ರೀ ಸ್ಮಶಾನ (ಸಮಾಧಿ ಸ್ಥಳ) ಕಾಳಿ ಪೀಠ ಎಂದು ಹೆಸರಿಸಲಾಗಿದೆ. ಪೊಲೀಸರು ಎರಡು ಮೂಟೆ ಮೂಳೆಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೋರ್ಡ್ ಪರೀಕ್ಷೆ | ಸಂವಿಧಾನದ ಮೂಲಭೂತ ಹಕ್ಕನ್ನು ಸುಪ್ರೀಂಕೋರ್ಟ್‌ ಎತ್ತಿಹಿಡಿದಿದೆ: ನಿರಂಜನಾರಾಧ್ಯ ವಿ.ಪಿ

“ಶಂಕಿತ ಆರೋಪಿಯನ್ನು ಬಲರಾಮ್ (30) ಎಂದು ಗುರುತಿಸಲಾಗಿದ್ದು, ಆತನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಆತನನ್ನು ಇನ್ನೂ ಬಂಧಿಸಿಲ್ಲ. ಮಾನವ ತಲೆಬುರುಡೆಗಳು ತನ್ನೊಂದಿಗೆ ದಶಕಗಳಿಂದ ಇವೆ ಎಂದು ಅವರು ಹೇಳಿಕೊಂಡಿದ್ದರೂ, ಅವರು ಎಲ್ಲಿಂದ ಪಡೆದರು ಎಂಬುದನ್ನು ಪರಿಶೀಲಿಸುತ್ತಿದ್ದೇವೆ” ತನಿಖೆಯ ಭಾಗವಾಗಿರುವ ಅಧಿಕಾರಿಯೊಬ್ಬರು ಹೇಳಿದರು.

“ಅಮಾವಾಸ್ಯೆ ಮತ್ತು ಹುಣ್ಣಿಮೆ ದಿನಗಳಲ್ಲಿ ಕೆಲವು ಆಚರಣೆಗಳನ್ನು ಮಾಡಲು ಅವರು ತಲೆಬುರುಡೆಯನ್ನು ಬಳಸುತ್ತಿದ್ದರು ಎಂದು ಹೇಳಿದ್ದಾರೆ. ಫಾರ್ಮ್‌ಹೌಸ್‌ನಲ್ಲಿ ತಲೆಬುರುಡೆಗಳ ಜತೆಗೆ ನೂರಾರು ಎಲುಬುಗಳೂ ಸಿಕ್ಕಿವೆ. ಫಾರ್ಮ್‌ಹೌಸ್ ತನ್ನ ಪೂರ್ವಜರಿಗೆ ಸೇರಿದ್ದು ಮತ್ತು ಅದು ತನಗೆ ಅದೃಷ್ಟ ತಂದಿದ್ದರಿಂದ ಅದನ್ನು ನವೀಕರಿಸಲು ಅವರು ಬಯಸಲಿಲ್ಲ ಎಂದು ಅವರು ತಿಳಿಸಿದ್ದಾರೆ” ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಫೋರೆನ್ಸಿಕ್ ಸೈನ್ಸ್ ಲ್ಯಾಬೊರೇಟರಿ (ಎಫ್‌ಎಸ್‌ಎಲ್) ತಜ್ಞರ ತಂಡವು ಪೊಲೀಸರೊಂದಿಗೆ ಫಾರ್ಮ್‌ಹೌಸ್‌ಗೆ ಭೇಟಿ ನೀಡಿ ಪರೀಕ್ಷೆಗಾಗಿ ತಲೆಬುರುಡೆ ಮತ್ತು ಮೂಳೆಗಳ ಮಾದರಿಗಳನ್ನು ಸಂಗ್ರಹಿಸಿದೆ. ವಿಧಿವಿಜ್ಞಾನ ಪರೀಕ್ಷೆಗಳು ಪ್ರತಿ ತಲೆಬುರುಡೆಯ ವಯಸ್ಸು, ಲಿಂಗ ಮತ್ತು ಇತರ ವಿವರಗಳನ್ನು ದೃಢೀಕರಿಸುತ್ತವೆ. ಶಂಕಿತನ ವಿರುದ್ಧ ಕ್ರಮ ಕೈಗೊಳ್ಳಲು ಎಫ್‌ಎಸ್‌ಎಲ್ ವರದಿ ಅವಶ್ಯಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X