ಮಾ.1 ರಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ

Date:

Advertisements

ಮಾರ್ಚ್‌ 1 ರಿಂದ ಮಾ. 22ರವರಗೆ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗಲಿದ್ದು, ಈ ಬಾರಿ 6,98,624 ಮಕ್ಕಳು ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಮಾರ್ಚ್ 1 ರಿಂದ 22 ರವರೆಗೆ ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಪರೀಕ್ಷೆಗಳು ನಡೆಯಲಿವೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ 2024ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1 ರ ವಾರ್ಷಿಕ ಪರೀಕ್ಷೆಗಳನ್ನು ನಡೆಸಲಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್‌ಟಿಡಿ, ಮೊಬೈಲ್, ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ. ಅಲ್ಲದೇ, ಪರೀಕ್ಷಾ ಕೇಂದ್ರಗಳ ಸುತ್ತಲೂ ಜನರು ಮಾರಕಾಸ್ತ್ರಗಳನ್ನು ಹಿಡಿದು ತಿರುಗಾಡುವದನ್ನು ನಿಷೇಧಿಸಿದೆ. ಈ ಆದೇಶವು ಮದುವೆ, ಶವ ಸಂಸ್ಕಾರಗಳು ಹಾಗೂ ಇನ್ನಿತರ ಧಾರ್ಮಿಕ ಕಾರ್ಯಕ್ರಮಗಳಿಗೆ ಅನ್ವಯವಾಗುವುದಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisements

ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಪತ್ರ ಪಡೆದ ಹಾಗೂ ನಿಯೋಜಿತ ಶಿಕ್ಷಕರನ್ನು ಜಾಗೃತ ದಳದವರನ್ನು ಹೊರತುಪಡಿಸಿ ಇನ್ನುಳಿದವರಿಗೆ ಪರವಾನಿಗೆ ಇಲ್ಲದೇ ಪರೀಕ್ಷಾ ಕೇಂದ್ರದಲ್ಲಿ ಪ್ರವೇಶ ಮಾಡುವುದನ್ನು ನಿಷೇಧಿಸಲಾಗಿದೆ. ನಕಲು ಮಾಡುವ ಸಾಮಗ್ರಿಗಳನ್ನು ಹಾಗೂ ಹೊರಗಿನಿಂದ ಕಾಪಿ ಬರೆದು ಪರೀಕ್ಷಾ ಕೇಂದ್ರಗಳಲ್ಲಿ ಪೂರೈಸುವುದನ್ನು ನಿರ್ಬಂಧಿಸಲಾಗಿದೆ.

2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಪರೀಕ್ಷೆ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆದರೆ, ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 2 ವರ್ಷದಲ್ಲಿ 259ಕ್ಕೂ ಹೆಚ್ಚು ಮಹಿಳೆಯರಿಗೆ ವಂಚಿಸಿದ 45 ವರ್ಷದ ವ್ಯಕ್ತಿಯ ಬಂಧನ

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿ, ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗಿದೆ.

ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ

  • 01-03-2024 ರಂದು ಶುಕ್ರವಾರ ಕನ್ನಡ ಹಾಗೂ ಅರೇಬಿಕ್
  • 04-03-2024 ರಂದು ಸೋಮವಾರ ಗಣಿತ, ಶಿಕ್ಷಣ ಶಾಸ್ತ್ರ
  • 05-03-2024 ರಂದು ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
  • 06-03-2024 ರಂದು ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್
  • 07-03-2024 ರಂದು ಇತಿಹಾಸ ಹಾಗೂ ಭೌತಶಾಸ್ತ್ರ
  • 09-03-2024 ರಂದು ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಗೃಹ ವಿಜ್ಞಾನ
  • 11-03-2024 ರಂದು ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
  • 13-03-2024 ರಂದು ಇಂಗ್ಲಿಷ್
  • 15-03-2024 ರಂದು ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
  • 16-03-2024 ರಂದು ಅರ್ಥಶಾಸ್ತ್ರ
  • 18-03-2024 ರಂದು ಭೂಗೋಳ ಶಾಸ್ತ್ರ, ಜೀವಶಾಸ್ತ್ರ
  • 20-03-2024 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ
  • 22-03-2024 ರಂದು ಹಿಂದಿ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

Download Eedina App Android / iOS

X