ಬೆಂಗಳೂರು | 446 ಅಕ್ರಮ ಒಳಚರಂಡಿ ಸಂಪರ್ಕ ಗುರುತಿಸಿದ ಬಿಡಬ್ಲೂಎಸ್‌ಎಸ್‌ಬಿ

Date:

Advertisements

ಕೇವಲ ಒಂದು ವಾರದಲ್ಲಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ (ಬಿಡಬ್ಲುಎಸ್‌ಎಸ್‌ಬಿ) ಬೆಂಗಳೂರಿನಲ್ಲಿ 446 ಅಕ್ರಮ ಒಳಚರಂಡಿ ಸಂಪರ್ಕಗಳನ್ನು ಗುರುತಿಸಿದೆ.

ಕಳೆದ ವಾರದಿಂದ ಸುಮಾರು 528 ಮನೆಗಳು ಮತ್ತು ವಾಣಿಜ್ಯ ಸಂಸ್ಥೆಗಳನ್ನು ಪರಿಶೀಲಿಸಿದ ಅಧಿಕಾರಿಗಳು, 446 ಕಟ್ಟಡಗಳು ಬಿಡಬ್ಲೂಎಸ್‌ಎಸ್‌ಬಿ ನಿರ್ವಹಿಸುತ್ತಿರುವ ಚರಂಡಿಗಳಿಗೆ ಅಕ್ರಮವಾಗಿ ಕೊಳಚೆ ನೀರನ್ನು ಬಿಡುತ್ತಿರುವುದು ಕಂಡುಹಿಡಿದಿದ್ದಾರೆ. ಈ ಪೈಕಿ, 221 ಸಂಪರ್ಕಗಳನ್ನು ಅಧಿಕಾರಿಗಳು ನಿಗದಿತ ಶುಲ್ಕ ವಸೂಲಿ ಮಾಡಿ ಸಕ್ರಮಗೊಳಿಸಿದ್ದಾರೆ. ಉಳಿದ 390 ಗ್ರಾಹಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ವಿ ಮಾತನಾಡಿ, “ಅಗತ್ಯ ಅನುಮತಿ ಪಡೆಯದೆ ಬಿಡಬ್ಲೂಎಸ್‌ಎಸ್‌ಬಿಯ ಲೈನ್‌ಗಳಿಗೆ ಕೊಳಚೆ ನೀರನ್ನು ಬಿಡುವುದು ಆರೋಗ್ಯದ ಅಪಾಯಗಳಿಗೆ ಕಾರಣವಾಗಬಹುದು” ಎಂದಿದ್ದಾರೆ.

Advertisements

“ಇಂತಹ ಅಕ್ರಮ ಸಂಪರ್ಕಗಳು ಆರೋಗ್ಯಕ್ಕೆ ಹಾನಿ ಉಂಟು ಮಾಡುತ್ತವೆ. ರೋಗಗಳು ಹರಡುವುದನ್ನು ತಡೆಗಟ್ಟುವುದು ಮತ್ತು ನಗರದಲ್ಲಿ ಸ್ವಚ್ಛತೆ ಕಾಪಾಡುವುದು ನಮ್ಮ ಸಮೀಕ್ಷೆಯ ಉದ್ದೇಶವಾಗಿದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಟ್ಯಾನರಿ ರಸ್ತೆಯಲ್ಲಿ ಹೊಸ ಕೆಳಸೇತುವೆ ನಿರ್ಮಾಣ: ಟ್ರಾಫಿಕ್ ಸಮಸ್ಯೆಗೆ ಕಡಿವಾಣ

ಇಂತಹ ಅಕ್ರಮ ಸಂಪರ್ಕಗಳನ್ನು ಗುರುತಿಸಲು ಸಮೀಕ್ಷೆ ನಡೆಸುವಂತೆ ಈ ತಿಂಗಳ ಆರಂಭದಲ್ಲಿ ಮಂಡಳಿ ಅಧ್ಯಕ್ಷರು ತಮ್ಮ ಅಧಿಕಾರಿಗಳಿಗೆ ಸೂಚಿಸಿದ್ದರು. ಈಗ, ಪ್ರಕ್ರಿಯೆಯನ್ನು ವೇಗಗೊಳಿಸಲು ಮತ್ತು ಸಾಧ್ಯವಾದಷ್ಟು ಸಂಪರ್ಕಗಳನ್ನು ಕ್ರಮಬದ್ಧಗೊಳಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಬಿಡಬ್ಲೂಎಸ್‌ಎಸ್‌ಬಿ ಗ್ರಾಹಕರು ತಮ್ಮ ಅಕ್ರಮ ಒಳಚರಂಡಿ ಸಂಪರ್ಕಗಳನ್ನು ಸಕ್ರಮಗೊಳಿಸಲು ಮೇ 7 ರವರೆಗೆ ಕಾಲಾವಕಾಶವನ್ನು ನೀಡಿದೆ. ಇದರ ನಂತರ, ಬಿಡಬ್ಲೂಎಸ್‌ಎಸ್‌ಬಿ ನೋಟಿಸ್‌ಗಳನ್ನು ನೀಡುತ್ತದೆ. ಈ ಕ್ರಮವನ್ನು ಅನುಸರಿಸಲು ವಿಫಲವಾದ ಗ್ರಾಹಕರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುತ್ತದೆ ಎಂದು ಮಂಡಳಿ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X