ಬೆಂಗಳೂರು | ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ ; ಹಾಸ್ಟೆಲ್​​ನಲ್ಲಿ ಕನಿಷ್ಠ ಸ್ವಚ್ಛತೆಯ ಕೊರತೆ ಆರೋಪ

Date:

Advertisements

ಬೆಂಗಳೂರು ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಏಕಾಏಕಿ ವಾಂತಿ – ಭೇದಿಯಿಂದ ತೀವ್ರ ಅಸ್ವಸ್ಥಗೊಂಡಿದ್ದು, ಕೂಡಲೇ ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಬಿಎಂಸಿ ಹಾಸ್ಟೆಲ್​​ನಲ್ಲಿದ್ದ ಬೆಂಗಳೂರಿನ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ಹಾಸ್ಟೆಲ್‌ನಲ್ಲಿ ಸ್ವಚ್ಛತೆಯ ಕೊರತೆ ಇದೆ. ಕುಡಿಯಲು ಕೂಡ ಯೋಗ್ಯವಾದ ನೀರನ್ನು ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಹೀಗಾಗಿ, ವಿದ್ಯಾರ್ಥಿನಿಯರು ಬಾಟೆಲ್ ನೀರು ಖರೀದಿ ಮಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಅಸ್ವಸ್ಥಗೊಂಡ 47 ವಿದ್ಯಾರ್ಥಿನಿಯರ ಪೈಕಿ 28 ವಿದ್ಯಾರ್ಥಿನಿಯರಿಗೆ ಟ್ರಾಮಾ ಕೇರ್ ಸೆಂಟರ್​ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದರೆ, ಐವರಿಗೆ ಹೆಚ್​​ ಬ್ಲಾಕ್ ಹಾಗೂ ನಾಲ್ವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.

Advertisements

“ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಸದ್ಯ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಉತ್ತಮವಾಗಿದೆ. ವಿದ್ಯಾರ್ಥಿನಿಯರು ಅಸ್ವಸ್ಥಗೊಳ್ಳಲು ಕಾರಣವೇನು ಎಂಬುದರ ಬಗ್ಗೆ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ” ಎಂದು ಬಿಎಂಸಿಆರ್‌ಐ ಮುಖ್ಯಸ್ಥ ಮತ್ತು ನಿರ್ದೇಶಕ ಡಾ.ರಮೇಶ್‌ ಕೃಷ್ಣ ತಿಳಿಸಿದ್ದಾರೆ.

ವಿಕ್ಟೋರಿಯಾ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕರು ಮಾತನಾಡಿ, “ಕಾಲರಾ ಇರುವ ಬಗ್ಗೆ ಇನ್ನೂ ದೃಢಪಟ್ಟಿಲ್ಲ. ವಾಂತಿ, ಭೇದಿ ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿರುವವರಲ್ಲಿ ಐಸಿಯುನಲ್ಲಿ 4 ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ಕೊಡಿಸಲಾಗಿದೆ. ಇನ್ನುಳಿದವರಿಗೆ ವೈದ್ಯರು ಎಚ್‌ ಬ್ಲಾಕ್‌ನಲ್ಲಿ ದಾಖಲು ಮಾಡಿ ಚಿಕಿತ್ಸೆ ಕೊಡಿಸಿದ್ದಾರೆ. ವಿದ್ಯಾರ್ಥಿಗಳು ತೀವ್ರತರವಾದ ಹೊಟ್ಟೆ ನೋವಿನಿಂದ (ಅಕ್ಯೂಟ್ ಗಾಸ್ಟ್ರೋ ಎಂಟರ್ಐಟಿಸ್) ಬಳಲುತ್ತಿರುವುದು ಪ್ರಾಥಮಿಕ ಮಾಹಿತಿಯಿಂದ ದೃಢಪಟ್ಟಿದೆ” ಎಂಬ ಮಾಹಿತಿ ಲಭ್ಯವಾಗಿದೆ.

ಒಂದೇ ಹಾಸ್ಟೆಲ್​​ನ 47 ವಿದ್ಯಾರ್ಥಿನಿಯರು ಅಸ್ವಸ್ಥ ಪ್ರಕರಣ ಬೆನ್ನಲ್ಲೇ ಕಾಲರಾದ ಶಂಕೆ ಹಿನ್ನೆಲೆ ವಿದ್ಯಾರ್ಥಿಗಳ ಮಾದರಿಯನ್ನ ವೈದ್ಯರು ಪರೀಕ್ಷೆಗೆ ಕಳುಹಿಸಿದ್ದಾರೆ. ಏ.7ರಂದು ವಿದ್ಯಾರ್ಥಿನಿಯರ ಪರೀಕ್ಷೆ ವರದಿ ಸಿಗುವ ನಿರೀಕ್ಷೆ ಇದೆ. ಸದ್ಯ ಎಲ್ಲ ವಿದ್ಯಾರ್ಥಿನಿಯರ ಆರೋಗ್ಯ ಸ್ಟೇಬಲ್ ಆಗಿದ್ದು, ಏ.6ರಂದು ಐಸಿಯು ವಿದ್ಯಾರ್ಥಿನಿಯರನ್ನು ಬಿಟ್ಟು ಉಳಿದವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಸುದ್ದಿ ಓದಿದ್ದೀರಾ? ರಾಜ್ಯದ ಜಲಾಶಯಗಳಲ್ಲಿ ನೀರಿನ ಮಟ್ಟ ಕುಸಿತ: ವಿವರ ಇಲ್ಲಿದೆ

ಬೆಂಗಳೂರಿನಲ್ಲಿ ತಾಪಮಾನ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಒಂದೆಡೆ ಕುಡಿಯುವ ನೀರಿನ ಸಮಸ್ಯೆ, ಇನ್ನೊಂದೆಡೆ ಬಿಸಿಲ ಝಳದಿಂದಾಗಿ ನಗರದಲ್ಲಿ ಹಲವರು ನಾನಾ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿನಿಯರು ಇದ್ದಕ್ಕಿದ್ದಂತೆ ವಾಂತಿ-ಬೇಧಿಯಿಂದ ಬಳಲುತ್ತಿರುವುದು ಕಾಲರಾ ಶಂಕೆ ಕೂಡ ವ್ಯಕ್ತವಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X