47 ಮೆಡಿಕಲ್ ವಿದ್ಯಾರ್ಥಿನಿಯರು ಅಸ್ವಸ್ಥ | ಇಬ್ಬರಲ್ಲಿ ಕಾಲರಾ ಪತ್ತೆ; ಸುಮೋಟೋ ಕೇಸ್ ದಾಖಲು

Date:

ವಾಂತಿ ಬೇಧಿ ಸಮಸ್ಯೆಯಿಂದ ತೀವ್ರ ಅಸ್ವಸ್ಥಗೊಂಡಿದ್ದ ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ 47 ವಿದ್ಯಾರ್ಥಿನಿಯರ ಪೈಕಿ ಇಬ್ಬರಲ್ಲಿ ಕಾಲರಾ ರೋಗ ಪತ್ತೆಯಾಗಿದೆ. ಈ ಬಗ್ಗೆ ಸುಮೋಟೋ ಪ್ರಕರಣ ದಾಖಲಾಗಿದೆ.

- Advertisement -

ಬಿಎಂಸಿ ಹಾಸ್ಟೆಲ್​​ನಲ್ಲಿದ್ದ ಬೆಂಗಳೂರಿನ ಮೆಡಿಕಲ್ ಕಾಲೇಜು 47 ವಿದ್ಯಾರ್ಥಿನಿಯರು ದಿಢೀರ್ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಈ ಹಾಸ್ಟೆಲ್‌ನಲ್ಲಿ ಸ್ವಚ್ಛತೆಯ ಕೊರತೆ ಇದೆ. ಕುಡಿಯಲು ಕೂಡ ಯೋಗ್ಯವಾದ ನೀರನ್ನು ನೀಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದರು. ಹೀಗಾಗಿ, ವಿದ್ಯಾರ್ಥಿನಿಯರು ಬಾಟೆಲ್ ನೀರು ಖರೀದಿ ಮಾಡುತ್ತಿದ್ದಾರೆ. ಅಸ್ವಸ್ಥಗೊಂಡಿದ್ದ 49 ವಿದ್ಯಾರ್ಥಿನಿಯರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ವೇಳೆ ಇಬ್ಬರಲ್ಲಿ ಕಾಲರಾ ಅಂಶ ಪತ್ತೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಆಸ್ಪತ್ರೆಗೆ ಭೇಟಿ ನೀಡಿದ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿಯರ ಆರೋಗ್ಯ ವಿಚಾರಿಸಿ, ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಸುಮೋಟೋ ಪ್ರಕರಣ ದಾಖಲಾಗಿದೆ.

“ಐಸಿಯು ಮತ್ತು ಜನರಲ್‌ ವಾರ್ಡ್‌ನಲ್ಲಿರುವ ವಿದ್ಯಾರ್ಥಿಗಳನ್ನು ಭೇಟಿಯಾದೆ, ವಿದ್ಯಾರ್ಥಿಗಳು ನೆಲೆಸಿರುವ ವಸತಿ ನಿಲಯದಲ್ಲಿ ವಾಟರ್ ಟ್ಯಾಂಕ್ ರಿಪೇರಿ ನಡೆಯುತ್ತಿದೆ. ಅದರಲ್ಲಿಯ ನೀರನ್ನೇ ವಿದ್ಯಾರ್ಥಿನಿಯರಿಗೆ ನೀಡಲಾಗುತ್ತಿದೆ. ಹಾಗೇ ಬೆಡ್‌ಗಳಲ್ಲಿ ತಿಗಣೆಗಳಿವೆ. ಕೋಣೆಗಳು ಚಿಕ್ಕದಾಗಿವೆ. ಸರಿಯಾದ ವ್ಯವಸ್ಥೆ ಇಲ್ಲ ಸೇರಿದಂತೆ ಇನ್ನಿತರ ಸಮಸ್ಯೆಗಳನ್ನ ವಿದ್ಯಾರ್ಥಿನಿಯರು ಹೇಳಿದ್ದಾರೆ” ಎಂದರು.

“ಸದ್ಯ ಹಾಸ್ಟೆಲ್‌ನ ಮೆಸ್‌ ಬಂದ್ ಮಾಡಿಸಲಾಗಿದೆ. ಈ ಬಗ್ಗೆ ಒಂದು ವಾರದಲ್ಲಿ ಮಾಹಿತಿ ನೀಡಬೇಕು ಎಂದು ಕೇಳಿದ್ದೇನೆ. ಹಾಗೇ ಒಂದು ವಾರದಲ್ಲಿ ಎಲ್ಲ ಸಮಸ್ಯೆ ಬಗೆಹರಿಸಬೇಕೆಂದು ಸೂಚನೆ ನೀಡಿದ್ದೇನೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೆಡಿಕಲ್‌ ಕಾಲೇಜಿನ 47 ವಿದ್ಯಾರ್ಥಿನಿಯರು ಅಸ್ವಸ್ಥ ; ಹಾಸ್ಟೆಲ್​​ನಲ್ಲಿ ಕನಿಷ್ಠ ಸ್ವಚ್ಛತೆಯ ಕೊರತೆ ಆರೋಪ

“ವಸತಿ ಗೃಹದಲ್ಲಿ ಸೂಕ್ತ ವ್ಯವಸ್ಥೆಗಳಿಲ್ಲ ಕೋಣೆಗಳು ಚಿಕ್ಕದಾಗಿವೆ. ವಿಕ್ಟೋರಿಯಾ ಆಸ್ಪತ್ರೆಯಿಂದ ಊಟ ನೀಡಲಾಗುತ್ತಿದೆ ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವರ ಗಮನಕ್ಕೆ ತರುತ್ತೇನೆ” ಎಂದು ಹೇಳಿದರು.

“ಪ್ರತಿಯೊಂದು ಆಸ್ಪತ್ರೆ ಹಾಗೂ ವಸತಿ ನಿಲಯಕ್ಕೆ ಭೇಟಿ ನೀಡುತ್ತೇನೆ. ಅಲ್ಲಿನ ಸಮಸ್ಯೆ ಬಗ್ಗೆ ತಿಳಿಯುತ್ತೇನೆ. ಈಗ ಸುಮೋಟೋ ಪ್ರಕರಣ ದಾಖಲಾಗಿದೆ” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...

ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ 10ನೇ ವರ್ಷದ ಸ್ವಚ್ಛತಾ ಆಂದೋಲನ

ಗಾಂಧಿ ಜಯಂತಿ ಅಂಗವಾಗಿ ಕೆಮ್ಮಣ್ಣು ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಹಳೆ...

ಧಾರವಾಡ | ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಗಾಂಧಿ‌ ಜಯಂತಿ‌ ಆಚರಣೆ

ಧಾರವಾಡ ಪಟ್ಟಣದ ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ರಾಷ್ಟ್ರಪತಿ ಮಹಾತ್ಮಾ ಗಾಂಧೀಜಿ ಹಾಗೂ ...

ಧಾರವಾಡ | ಎನ್‌.ಎಸ್‌.ಎಸ್‌ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನದ ದಾರಿ: ನಾಲತವಾಡ

ವಿದ್ಯಾರ್ಥಿಗಳಲ್ಲಿ ಕೇವಲ ಶೈಕ್ಷಣಿಕ ಜ್ಞಾನವಷ್ಟೇ ಅಲ್ಲದೆ, ಸಾಮಾಜಿಕ ಜವಾಬ್ದಾರಿ, ನಾಯಕತ್ವ ಗುಣ...