545 ಪಿಎಸ್ಐ ಹುದ್ದೆಗಳಿಗೆ ನಡೆಸಲಾಗಿದ್ದ ಮರುಪರೀಕ್ಷೆಯ ತಾತ್ಕಾಲಿಕ ಫಲಿತಾಂಶ ಮಾರ್ಚ್ 1 ರಂದು ಪ್ರಕಟವಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ತಾತ್ಕಾಲಿಕ ಫಲಿತಾಂಶ ಪ್ರಕಟಿಸಿದ್ದು, ಆಕ್ಷೇಪಣೆ ಇದ್ದರೇ, ಮಾರ್ಚ್ 5ರೊಳಗೆ ಕೆಇಎಗೆ Keauthority-ka@nic.in ಇ–ಮೇಲ್ ಮೂಲಕ ಸಲ್ಲಿಸಲು ತಿಳಿಸಲಾಗಿದೆ. ಆಕ್ಷೇಪಣೆ ಬಳಿಕ ಆಯ್ಕೆಯಾದವರ ಅಂತಿಮ ಪಟ್ಟಿ ಪ್ರಕಟ ಮಾಡಲಾಗುತ್ತದೆ ಎಂದು ಕೆಇಎ ತಿಳಿಸಿದೆ.
ಅಭ್ಯರ್ಥಿಗಳು ಈ ತಾತ್ಕಾಲಿಕ ಫಲಿತಾಂಶದ ಬಗ್ಗೆ ಏನಾದರೂ ಆಕ್ಷೇಪಣೆ ಇದ್ದರೇ ಮಾತ್ರ ಸಲ್ಲಿಸಲು ಸೂಚಿಸಲಾಗಿದೆ. ಇದರ ಹೊರತಾಗಿ ಬೇರೆ ಯಾವುದೇ ರೀತಿಯ ಸಲ್ಲಿಸುವ ಆಕ್ಷೇಪಣೆಗಳನ್ನು ಸ್ವೀಕರಿಸುವುದಿಲ್ಲ ಎಂದು ಹೇಳಿದೆ.
ಈ ಸುದ್ದಿ ಓದಿದ್ದೀರಾ? ರಾಮೇಶ್ವರಂ ಕೆಫೆ | ಎನ್‌ಐಎ, ಐಬಿಗೆ ಸ್ಪೋಟದ ಬಗ್ಗೆ ಮಾಹಿತಿ: ಅಲೋಕ್ ಮೋಹನ್
“ಕೀ ಉತ್ತರಗಳನ್ನು ಅಂತಿಮಗೊಳಿಸಲಾಗಿದ್ದು, ಇದಕ್ಕೆ ಯಾವುದೇ ಆಕ್ಷೇಪಣೆ ಸ್ವೀಕರಿಸುವುದಾಗಿಲ್ಲ” ಎಂದು ಕೆಇಎ ಸ್ಪಷ್ಟಪಡಿಸಿದೆ.
ಜನವರಿ 23ರಂದು ಬೆಂಗಳೂರಿನ 117 ಪರೀಕ್ಷಾ ಕೇಂದ್ರಗಳಲ್ಲಿ ಪಿಎಸ್ಐ ಮರುಪರೀಕ್ಷೆ ನಡೆಸಲಾಗಿತ್ತು. ಒಟ್ಟು 35,823 ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. 33 ಅಭ್ಯರ್ಥಿಗಳ ಒಎಂಆರ್ ಪ್ರತಿಗಳು ನಾನಾ ಕಾರಣಗಳಿಂದಾಗಿ ತಿರಸ್ಕೃತಗೊಂಡಿದ್ದವು.