ರಾಜಧಾನಿ ಬೆಂಗಳೂರಿನಲ್ಲಿ 97 ಲಕ್ಷ ಮತದಾರರು; ಮತದಾರರ ಕರಡು ಪಟ್ಟಿ ಪ್ರಕಟ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಬರುವ ಎಲ್ಲ 28 ವಿಧಾನಸಭಾ ಕ್ಷೇತ್ರಗಳಲ್ಲಿ ಪುರುಷ ಮತದಾರರು 50,61,883 ಇದ್ದರೆ, ಮಹಿಳಾ ಮತದಾರರು 47,26,856 ಇದ್ದಾರೆ. ಇತರೆ ಮತದಾರರು 1,760 ಇದ್ದು, ಒಟ್ಟಾರೆಯಾಗಿ 97,90,499 ಮತದಾರರಿದ್ದಾರೆ ಎಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತ ಆರ್.ರಾಮಚಂದ್ರನ್ ಹೇಳಿದ್ದಾರೆ.

ಭಾರತ ಚುನಾವಣಾ ಆಯೋಗದ ಸೂಚನೆ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವಿಶೇಷ ಆಯುಕ್ತ ಆರ್.ರಾಮಚಂದ್ರನ್ ಅವರು ಶುಕ್ರವಾರ ಬೆಂಗಳೂರಿನ ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಬಿಡುಗಡೆ ಮಾಡಿದರು.

ಈ ವೇಳೆ, ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, “ಬೆಂಗಳೂರು ವ್ಯಾಪ್ತಿಯ ಎಲ್ಲ 28 ವಿಧಾನಸಭಾ ಕ್ಷೇತ್ರಗಳ ಮತದಾರರ ಪಟ್ಟಿಯನ್ನು ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿ ಹಾಗೂ ವಾರ್ಡ್ ಕಚೇರಿಗಳಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರಿಗೆ ಮತದಾರರ ಪಟ್ಟಿಯನ್ನು ಪರಿಶೀಲಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ” ಎಂದರು.

Advertisements
  • ಕರಡು ಮತದಾರರ ಪಟ್ಟಿಯನ್ನು CEO Karnataka website www.ceokarnataka.kar.nic.in website ಮತ್ತು ಬಿಬಿಎಂಪಿ www.bbmp.gov.inwebsite ನಲ್ಲಿ ಪರಿಶೀಲಿಸಲು ಅವಕಾಶವಿದೆ.
  • ಈ ಹಿಂದೆ ಬೆಂಗಳೂರು ವ್ಯಾಪ್ತಿಯ 28 ವಿಧಾನಸಭಾ ಕ್ಷೇತ್ರಗಳಲ್ಲಿ 8,615 ಮತಗಟ್ಟೆಗಳಿದ್ದು, ಪ್ರಸ್ತುತ 8,982 ಮತಗಟ್ಟೆಗಳಿಗೆ ಹೆಚ್ಚಾಗಿದೆ.
  • ಯುವ (18-19) ಅರ್ಹ ಮತದಾರರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಲು ನಾಲ್ಕು ಅರ್ಹತಾ ದಿನಾಂಕಗಳನ್ನು (1ನೇ ಜನವರಿ, 1ನೇ ಏಪ್ರಿಲ್, 1ನೇ ಜುಲೈ ಮತ್ತು 1ನೇ ಅಕ್ಟೋಬರ್) ನಿಗದಿಪಡಿಸಲಾಗಿದೆ. 17 ವರ್ಷ ತುಂಬಿದವರು ಮತದಾರರ ಪಟ್ಟಿಯಲ್ಲಿ ಸೇರ್ಪಡೆಗೊಳ್ಳಲು ಮುಂಚಿತವಾಗಿ ಅರ್ಜಿ ಸಲ್ಲಿಸಬಹುದು.
  • ಅ.27 ರಂದು ಮತದಾರರ ಪಟ್ಟಿಯ ಕರಡು ಪ್ರತಿಯನ್ನು ಪ್ರಕಟಿಸಲಾಗಿದ್ದು, ಕರಡು ಮತದಾರರ ಪಟ್ಟಿಯಲ್ಲಿ ಮತದಾರರ ಹೆಸರು ಬಿಟ್ಟುಹೋಗಿದ್ದಲ್ಲಿ, ತಪ್ಪಾಗಿದ್ದಲ್ಲಿ, ತಪ್ಪಾಗಿ ಸೇರ್ಪಡೆಗೊಂಡಿದ್ದಲ್ಲಿ ಹಾಗೂ ಒಂದು ಭಾಗ ಸಂಖ್ಯೆಯಿಂದ ಮತ್ತೊಂದು ಭಾಗದ ಸಂಖ್ಯೆಗೆ ವರ್ಗಾವಣೆಯಾಗಬೇಕಿದ್ದಲ್ಲಿ ಹಾಗೂ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕಲು ಮತದಾರಿಗೆ ಅ.27 ರಿಂದ ಡಿ.9 ರವರೆಗೆ ಅವಕಾಶ ಕಲ್ಪಿಸಲಾಗಿದೆ.
  • ಮತದಾರರ ನೋಂದಣಾಧಿಕಾರಿಗಳ ಕಚೇರಿ, ಸಹಾಯಕ ನೋಂದಣಾಧಿಕಾರಿಗಳ ಕಚೇರಿ, ವಾರ್ಡ್ ಕಚೇರಿ ಹಾಗೂ ಬಿ.ಎಲ್.ಓ ರವರುಗಳಿಗೆ ನಮೂನೆ-6, 7 ಮತ್ತು 8 ರಲ್ಲಿ ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಡಿ.9 ರವರೆಗೆ ಸಲ್ಲಿಸಬಹುದು.
  • ಭಾರತ ಚುನಾವಣಾ ಆಯೋಗದ ವೇಳಾಪಟ್ಟಿಯಂತೆ 2024ರ ಜನವರಿ 5 ರಂದು ‘ಅಂತಿಮ ಮತದಾರರ ಪಟ್ಟಿ’ ಪ್ರಕಟಿಸಲಾಗುತ್ತದೆ ಎಂದು ಹೇಳಿದೆ.
  • ಬಿಬಿಎಂಪಿ ಬಿಡುಗಡೆ ಮಾಡಿರುವ ಅಂಕಿ ಅಂಶಗಳ ಪ್ರಕಾರ, ಬೆಂಗಳೂರು ನಗರ ಅತಿ ಹೆಚ್ಚು ಅಂದರೆ 37,19,723 ಮತದಾರರನ್ನು ಹೊಂದಿದ್ದರೆ, ಬಿಬಿಎಂಪಿ ಉತ್ತರದಲ್ಲಿ 22,09,318, ಬಿಬಿಎಂಪಿ ದಕ್ಷಿಣದಲ್ಲಿ 20,56,109 ಮತ್ತು ಬಿಬಿಎಂಪಿ ಸೆಂಟ್ರಲ್ 18,05,349 ಮತದಾರರನ್ನು ಹೊಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ₹5.50 ಕೋಟಿ ಮೌಲ್ಯದ ಡ್ರಗ್ಸ್‌ ಜಪ್ತಿ ಮಾಡಿದ ಸಿಸಿಬಿ ಪೊಲೀಸರು; 10 ಡ್ರಗ್ ಪೆಡ್ಲರ್​ಗಳ ಬಂಧನ

  • 2,182 ಮತದಾರರು ಮೃತಪಟ್ಟಿದ್ದು ಅವರನ್ನು ಪಟ್ಟಿಯಿಂದ ತೆರವುಗೊಳಿಸಲಾಗಿದೆ. ಇನ್ನು 82,452 ಜನರು ತಮ್ಮ ಪ್ರಸ್ತುತ ವಿಳಾಸದಿಂದ ಬೇರೆ ಸ್ಥಳಗಳಿಗೆ ಸ್ಥಳಾಂತರಗೊಂಡಿದ್ದು, ಹೀಗಾಗಿ ಮತದಾರರ ಪಟ್ಟಿಯಿಂದ ಒಟ್ಟು 86,062 ಹೆಸರುಗಳನ್ನು ಅಳಿಸಲಾಗಿದೆ.

ಈ ವೇಳೆ ಅಪರ ಜಿಲ್ಲಾ ಚುನಾವಣಾಧಿಕಾರಿಗಳಾದ ಡಾ. ಹರೀಶ್ ಕುಮಾರ್, ಡಾ. ದಾಕ್ಷಾಯಿಣಿ, ಡಾ. ಕೆ. ಜಗದೀಶ್ ನಾಯ್ಕ್, ಚುನವಾವಣಾ ವಿಭಾಗದ ವಿಶೇಷ ಆಯುಕ್ತರಾದ ಅಜಯ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ರಾಜ್ಯದಲ್ಲಿ ಚುನಾವಣಾ ಆಯೋಗ ಬಿಡುಗಡೆ ಮಾಡಿರುವ ಕರಡು ಮತದಾರರ ಪಟ್ಟಿಯಲ್ಲಿ 5,33,77,162 ಮಂದಿ ಇದ್ದಾರೆ. ಇವರಲ್ಲಿ 2,68,02,838 ಪುರುಷರು ಮತ್ತು 2,65,69,428 ಮಹಿಳೆಯರು ಮತ್ತು 4,896 ಇತರರಾಗಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X