ತಲೆ ಮೇಲೆ ಶಾಲಾ ವಾಹನ ಹರಿದು ಮೂರು ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಿವಪುರ ಗ್ರಾಮದಲ್ಲಿ ನಡೆದಿದೆ.
ರಾಜಶೇಖರ್ ಎಂಬುವರ ಪುತ್ರಿ ಖುಷಿ ಬನ್ನಟ್ಟಿ (3) ಮೃತ ಬಾಲಕಿ. ಶಾಲಾ ವಾಹನದಲ್ಲಿ ಅಣ್ಣ ಬಂದಿದ್ದ ವೇಳೆ ಆತನನ್ನು ಕರೆಯಲು ತಂದೆಯ ಹಿಂದೆ ಖುಷಿ ಹೋಗಿದ್ದಳು. ಆದರೆ, ತಂದೆ ಈಕೆ ಬಂದಿರುವುದನ್ನು ಗಮನಿಸಿರಲಿಲ್ಲ. ಅಣ್ಣ ಬಸ್‌ನಿಂದ ಇಳಿದ ಬಳಿಕ ಶಾಲಾ ವಾಹನದ ಚಾಲಕ ಬಸ್ ಹಿಂದೆ ತಿರುಗಿಸಿದ್ದಾನೆ. ಈ ವೇಳೆ ಚಾಲಕ ವಾಹನ ಹಿಂದಕ್ಕೆ ತಿರುಗಿಸಿಕೊಳ್ಳುವಾಗ ಹಿಂಬದಿಯಿದ್ದ ಬಾಲಕಿ ಮೇಲೆ ಹರಿಸಿದ್ದಾನೆ. ಬಾಲಕಿ ಹಿಂದಿನ ಚಕ್ರದಡಿ ಸಿಲುಕಿ ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾಳೆʼ ಎಂದು ಎನ್ನಲಾಗಿದೆ.
ಇತ್ತೀಚೆಗಷ್ಟೇ ರಾಯಚೂರು ಜಿಲ್ಲೆಯಲ್ಲಿ ನಡೆದ ಶಾಲಾ ವಾಹನದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟಿದ್ದರು. ನಾಲ್ವರ ವಿದ್ಯಾರ್ಥಿಗಳಿಗೆ ಕಾಲು ತುಂಡಾಗಿತ್ತು. ಹಲವಾರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದರು. ರಾಯಚೂರು ಘಟನೆ ಮಾಸುವ ಮುನ್ನವೇ ಕಲಬುರಗಿಯಲ್ಲಿ ಮತ್ತೊಂದು ದುರಂತ ನಡೆದು ಹೋಗಿದೆ.
ಈ ಸುದ್ದಿ ಓದಿದ್ದೀರಾ? ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ | ಗೌಪ್ಯ ವಿಚಾರಣೆ ನಡೆಸುವುದಿಲ್ಲ: ಹೈಕೋರ್ಟ್
ಈ ದುರ್ಘಟನೆಗೆ ಚಾಲಕನ ನಿರ್ಲಕ್ಷ್ಯವೇ ಕಾರಣ ಎಂದು ಮೃತ ಬಾಲಕಿ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಅಫಜಲಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.