ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ಧಗೆಗೆ ಜನರು ಹೈರಾಣಾಗಿದ್ದಾರೆ. ಇದೀಗ, ಬಿಸಿಲಿಗೆ ಕಾದ ಇಳೆಗೆ ಮಳೆರಾಯ ತಂಪೆರೆದಿದ್ದು, ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರ್ಷದ ಮೊದಲ ಮಳೆಯಾಗಿದ್ದು, ಶುಕ್ರವಾರ ಬೆಳ್ಳಂಬೆಳಗ್ಗೆ ಮಳೆಯ ಸಿಂಚನವಾಗಿದೆ.
ಕಾಸರಗೋಡು ಜಿಲ್ಲೆಯ ಹಲವು ಪ್ರದೇಶಗಳಲ್ಲಿ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಜಿಲ್ಲೆಯ ಹಲವೆಡೆ ಮಳೆ ಸುರಿದಿದೆ. ಮಂಗಳೂರು ನಗರದ ಕೆಲವೆಡೆ ಗುಡುಗು ಸಿಡಿಲಿನ ಜತೆಗೆ ಸಾಧಾರಣ ಮಳೆಯಾಗಿದೆ. ಕಾಸರಗೋಡು, ಜಿಲ್ಲೆಯ ಮಧೂರು, ಕುಂಬ್ಳೆ ಸೇರಿ ಹಲವೆಡೆ ಮಳೆಯಾಗಿದ್ದು, ಜನರು ಖುಷಿಯಾಗಿದ್ದಾರೆ.
ಮಂಗಳೂರು ನಗರವೂ ಈ ಬಾರಿ ನೀರಿನ ಸಮಸ್ಯೆ ಎದುರಿಸುತ್ತಿದೆ. ಮಂಗಳೂರಿಗೆ ನೀರು ಪೂರೈಕೆ ಮಾಡುವ ಪ್ರಮುಖ ಮೂಲವಾಗಿರುವ ನೇತ್ರಾವತಿ ನದಿಯಲ್ಲಿ ಬೇಸಿಗೆಗೂ ಮುನ್ನವೇ ನೀರು ಕಡಿಮೆಯಾಗಿದೆ.
ಕರ್ನಾಟಕದ ಕೆಲವೆಡೆ ಮಳೆಯ ಸಿಂಚನ
ಕರ್ನಾಟಕದ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಮೈಸೂರು ಸೇರಿದಂತೆ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಲಿದೆ. ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಕೆಲವೆಡೆ ಮಳೆಯ ಸಿಂಚನವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್ಎಎಲ್ನಲ್ಲಿ 33.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಈ ಸುದ್ದಿ ಓದಿದ್ದೀರಾ? ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಾಹೀರಾತು ಬಿತ್ತರಿಸಿ: ರಾಜಕೀಯ ಪಕ್ಷಗಳಿಗೆ ಸೂಚನೆ
ಬೀದರ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ವಿಜಯಪುರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಕೊಪ್ಪಳದಲ್ಲಿ 38.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್ನಲ್ಲಿ 19.4 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಚಿಕ್ಕಮಗಳೂರಿನಲ್ಲಿ 29.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 36.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 36.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.