ಬಿಸಿಯಾಗಿದ್ದ ಇಳೆಗೆ ತಂಪೆರೆದ ಮಳೆ | ಮಂಗಳೂರು ಸೇರಿ ದಕ್ಷಿಣ ಕನ್ನಡದ ಹಲವೆಡೆ ವರ್ಷದ ಮೊದಲ ಮಳೆ

Date:

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಬಿಸಿಲಿನ ಧಗೆಗೆ ಜನರು ಹೈರಾಣಾಗಿದ್ದಾರೆ. ಇದೀಗ, ಬಿಸಿಲಿಗೆ ಕಾದ ಇಳೆಗೆ ಮಳೆರಾಯ ತಂಪೆರೆದಿದ್ದು, ಮಂಗಳೂರು ನಗರ ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ವರ್ಷದ ಮೊದಲ ಮಳೆಯಾಗಿದ್ದು, ಶುಕ್ರವಾರ ಬೆಳ್ಳಂಬೆಳಗ್ಗೆ ಮಳೆಯ ಸಿಂಚನವಾಗಿದೆ.

- Advertisement -

ಕಾಸರಗೋಡು ಜಿಲ್ಲೆಯ ಹಲವು ಪ್ರದೇಶಗಳಲ್ಲಿ, ಪುತ್ತೂರು, ಬೆಳ್ತಂಗಡಿ, ಬಂಟ್ವಾಳ ಸೇರಿ ಜಿಲ್ಲೆಯ ಹಲವೆಡೆ ಮಳೆ ಸುರಿದಿದೆ. ಮಂಗಳೂರು ನಗರದ ಕೆಲವೆಡೆ ಗುಡುಗು ಸಿಡಿಲಿನ ಜತೆಗೆ ಸಾಧಾರಣ ಮಳೆಯಾಗಿದೆ. ಕಾಸರಗೋಡು, ಜಿಲ್ಲೆಯ ಮಧೂರು, ಕುಂಬ್ಳೆ ಸೇರಿ ಹಲವೆಡೆ ಮಳೆಯಾಗಿದ್ದು, ಜನರು ಖುಷಿಯಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಮಂಗಳೂರು ನಗರವೂ ಈ ಬಾರಿ ನೀರಿನ ಸಮಸ್ಯೆ ಎದುರಿಸುತ್ತಿದೆ. ಮಂಗಳೂರಿಗೆ ನೀರು ಪೂರೈಕೆ ಮಾಡುವ ಪ್ರಮುಖ ಮೂಲವಾಗಿರುವ ನೇತ್ರಾವತಿ ನದಿಯಲ್ಲಿ ಬೇಸಿಗೆಗೂ ಮುನ್ನವೇ ನೀರು ಕಡಿಮೆಯಾಗಿದೆ.

ಕರ್ನಾಟಕದ ಕೆಲವೆಡೆ ಮಳೆಯ ಸಿಂಚನ

ಕರ್ನಾಟಕದ ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಮೈಸೂರು ಸೇರಿದಂತೆ ಕರ್ನಾಟಕದ 15ಕ್ಕೂ ಅಧಿಕ ಜಿಲ್ಲೆಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಲಿದೆ. ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದೆ. ಕೆಲವೆಡೆ ಮಳೆಯ ಸಿಂಚನವಾಗಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಬಹುತೇಕ ಕಡೆ ಮೋಡಕವಿದ ವಾತಾವರಣ ನಿರ್ಮಾಣವಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ.

ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದೆ. ಎಚ್​ಎಎಲ್​ನಲ್ಲಿ 33.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 34.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 35.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಜಿಕೆವಿಕೆಯಲ್ಲಿ 35.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಜಾಹೀರಾತು ಬಿತ್ತರಿಸಿ: ರಾಜಕೀಯ ಪಕ್ಷಗಳಿಗೆ ಸೂಚನೆ

ಬೀದರ್​ನಲ್ಲಿ 32.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ , ವಿಜಯಪುರದಲ್ಲಿ 36.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಧಾರವಾಡದಲ್ಲಿ 35.8 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಲಬುರಗಿಯಲ್ಲಿ 36.9 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 24.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕೊಪ್ಪಳದಲ್ಲಿ 38.6 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ, ಬೀದರ್​ನಲ್ಲಿ 19.4 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಹೊನ್ನಾವರದಲ್ಲಿ 33.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.7 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಶಿರಾಲಿಯಲ್ಲಿ 33.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಚಿಕ್ಕಮಗಳೂರಿನಲ್ಲಿ 29.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 14.4 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಚಿತ್ರದುರ್ಗದಲ್ಲಿ 36.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 22.8 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಮಂಡ್ಯದಲ್ಲಿ 36.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 21.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಏಷ್ಯನ್ ಗೇಮ್ಸ್: ಕಂಚಿನ ಪದಕ ಗೆದ್ದ ಸ್ನೇಹ ಎಸ್. ಎಸ್ ಗೆ ಟಿ.ಡಿ ರಾಜೇಗೌಡ ಅಭಿನಂದಿಸಿದ್ದಾರೆ 

ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ ಪ್ರತಿಷ್ಠಿತ 2026ರ ಏಷ್ಯನ್ ಗೇಮ್ಸ್‌ನ ಮಿಶ್ರ 4x100...

ಬಾಗಲಕೋಟೆ | ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಯಲ್ಲಿ ಶೇ.2 ಮೀಸಲಾತಿ ಸ್ವಾಗತಾರ್ಹ: ಮುತ್ತಣ್ಣ ಮೇತ್ರಿ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಕ್ರೀಡಾಪಟುಗಳಿಗೆ ಸರ್ಕಾರಿ ನೌಕರಿಗಳ ನೇಮಕಾತಿಯಲ್ಲಿ ಶೇ.2ರಷ್ಟು...

ವಿಜಯಪುರ | ಉದ್ಯೋಗ ಖಾತ್ರಿ ಪೂರ್ಣ ಕೂಲಿ ಪಾವತಿಗೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿ

ಉದ್ಯೋಗ ಖಾತ್ರಿ ಯೋಜನೆಯಡಿ ಕೆಲಸ ಮಾಡಿರುವ ಕೂಲಿಕಾರರಿಗೆ ಅವರ ಶ್ರಮಕ್ಕೆ ತಕ್ಕಂತೆ...