ಕರಗ ಮಹೋತ್ಸವ: ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆ; ಓರ್ವ ಸಾವು

Date:

ಕಳೆದ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐತಿಹಾಸಿಕ ಕರಗ ಮಹೋತ್ಸವದ ಸಂಭ್ರಮ ಮನೆ ಮಾಡಿತ್ತು. ಕರಗ ಮಹೋತ್ಸವದ ಮೆರವಣಿಗೆ ವೇಳೆ ಯುವಕರ ನಡುವೆ ಗಲಾಟೆಎ ನಡೆದಿದ್ದು, ಕೊಲೆಯಲ್ಲಿ ಅಂತ್ಯವಾಗಿದೆ.

- Advertisement -

ಬೆಂಗಳೂರಿನ ಮೆಜೆಸ್ಟಿಕ್ ಬಳಿಯ ಅಣ್ಣಮ್ಮ ದೇಗುಲದ ಬಳಿ ಏಪ್ರಿಲ್ 24ರ ಮುಂಜಾನೆ 3.30ರ ಸುಮಾರಿಗೆ ಘಟನೆ ನಡೆದಿದೆ. ಸಾರಧಿ ಮೃತಪಟ್ಟ ಯುವಕ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಮೃತ ಯುವಕ ನಗರದ ಶೇಷಾದ್ರಿಪುರಂನ ವಿವಿ ಗಿರಿ ಕಾಲೋನಿಯ ನಿವಾಸಿ. ಬೆಂಗಳೂರಿನ ಅಣ್ಣಮ್ಮ ದೇಗುಲದ ಮುಂದೆ ಸಾರಧಿ ಡ್ಯಾನ್ಸ್‌ ಮಾಡುತ್ತಿದ್ದರು. ಈ ವೇಳೆ, ಸ್ನೇಹಿತರನ್ನ ಸ್ಪರ್ಶಿಸಿದ್ದಾರೆ. ಈ ವಿಚಾರವಾಗಿ ಅಲ್ಲಿ ಇದ್ದಿದ್ದ ಗುಂಪುಗಳ ಮಧ್ಯೆ ಜಗಳವಾಗಿದೆ. ಅಲ್ಲದೇ, ಸಾರಧಿ ಮೇಲೆ ಮಾರಕಾಸ್ತ್ರದಿಂದ ಹಲ್ಲೆ ನಡೆಸಿ ಆರೋಪಿಗಳು ಪರಾರಿಯಾಗಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 23 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ತಕ್ಷಣವೇ ಸಾರಧಿಯನ್ನು ಸ್ಥಳೀಯರು ಮಲ್ಲೇಶ್ವರಂ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಿಸಿದ್ದರು. ನಂತರ ಚಿಕಿತ್ಸೆ ಫಲಿಸದೆ ಹೆಚ್ಚಿನ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸಾರಧಿ ಮೃತಪಟ್ಟಿದ್ದಾನೆ.

ಉಪ್ಪಾರಪೇಟೆ ಪೊಲೀಸ್​​​ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ. ನಾಲ್ವರು ಆರೋಪಿಗಳು ಅಪ್ರಾಪ್ತರು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...