‘ದೇವಾಲಯದ ತೀರ್ಥ ಪ್ರಸಾದ ಬೇಡ, ಉನ್ನತ ಶಿಕ್ಷಣಕ್ಕಾಗಿ ಬಸ್‌ ಬೇಕು’; ಸಿಎಂಗೆ ಪತ್ರ ಬರೆದ ವಿದ್ಯಾರ್ಥಿನಿ

Date:

“ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ. ಉನ್ನತ ಶಿಕ್ಷಣಕ್ಕಾಗಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (ಬಿಎಂಟಿಸಿ) ಬಸ್‌ಗಳು ಬೇಕು” ಎಂದು ಎಂಟನೇ ತರಗತಿಯ ವಿದ್ಯಾರ್ಥಿಯೊಬ್ಬಳು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

- Advertisement -

ಬೆಂಗಳೂರು ಗ್ರಾಮಾಂತರದ ತಾವರಕೆರೆ ವ್ಯಾಪ್ತಿಯ ಸೀಗೆಹಳ್ಳಿಯಲ್ಲಿ ವಾಸವಿರುವ 8ನೇ ತರಗತಿ ವಿದ್ಯಾರ್ಥಿನಿ ವಿ.ವೈ ಹರ್ಷಿಣಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. “ಈ ದೇಶದ ರಾಷ್ಟ್ರಪತಿ ಮಹಿಳೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷತೆ ಸಿಗುವಂತೆ ಮಾಡಿರುವುದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶೀರ್ವಾದ. ಹಾಗಾಗಿ, ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರತಿ ಜಿಲ್ಲೆ ಮತ್ತು ತಾಲೂಕು ಹಳ್ಳಿಯ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಬಸ್​ ಆರಂಭಿಸಬೇಕು” ಎಂದು ಮನವಿ ಮಾಡಿದ್ದಾಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ವಿದ್ಯಾರ್ಥಿನಿ ಬರೆದ ಪತ್ರದಲ್ಲೇನಿದೆ?

ಸ್ವಾಮಿ, ನಾನು ಕುಮಾರಿ ವಿ.ವೈ.ಹರ್ಷಿನಿ, 8ನೇ ತರಗತಿ ವಿದ್ಯಾರ್ಥಿನಿ. ನಾನು ಮತ್ತು ನನ್ನ ತಾಯಿ ಹಲವು ಬಾರಿ ತಮ್ಮ ಸಂಸ್ಥೆಯ ಅಧಿಕಾರಿಗಳಿಗೆ ತಾವರೆಕೆರೆಯಿಂದ ಮಾಗಡಿ ರಸ್ತೆಯ ಮುಖಾಂತರ ಶ್ರೀನಗರ ಬಸ್ ನಿಲ್ದಾಣಕ್ಕೆ ಸಾರಿಗೆ ಸಂಸ್ಥೆಯ ಬಸ್ ಬಿಡಬೇಕೆಂದು ಮನವಿ ಮಾಡಿಕೊಂಡಿದ್ದೇವೆ. ಈ ಪತ್ರಕ್ಕೆ ಸಂಸ್ಥೆಯ ಅಧಿಕಾರಿಗಳು ಯಾವುದೇ ಉತ್ತರವನ್ನು ನೀಡಿರುವುದಿಲ್ಲ. ಆದರೆ, ಪ್ರತಿ ಗುರುವಾರ ಹಾಗೂ ಭಾನುವಾರ ಸುಮ್ಮನಹಳ್ಳಿಯಿಂದ ಕಡಬಗೆರೆ ಮಾರ್ಗವಾಗಿ ರಾಯರ ಕಾಮದೇನು ದೇವಾಲಯಕ್ಕೆ ಪ್ರತಿ ಗಂಟೆಗೆ ಬಸ್ ಬಿಡಲಾಗುತ್ತಿದೆ.

ಸಿಎಂ 20

ನಮಗೆ ದೇವಾಲಯದ ತೀರ್ಥಪ್ರಸಾದ ಬೇಡ, ನಮಗೆ ಉನ್ನತ ಶಿಕ್ಷಣಕ್ಕಾಗಿ ಸಂಸ್ಥೆಯ ಸಾರಿಗೆ ವಾಹನಗಳು ಬೇಕಾಗಿದೆ. ಈ ದೇಶದ ರಾಷ್ಟ್ರಪತಿ ಮಹಿಳೆ. ಇಂದಿನ ದಿನಗಳಲ್ಲಿ ಹೆಣ್ಣು ಮಕ್ಕಳಿಗೆ ಉನ್ನತ ಶಿಕ್ಷಣ ಮತ್ತು ಸುರಕ್ಷಿತ ಸಿಗುವಂತೆ ಮಾಡಿರುವುದು ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಆಶೀರ್ವಾದ.

ಬಾಬಾಸಾಹೇಬ್ ಅಂಬೇಡ್ಕರ್ ಅವರ ಹೆಸರಿನಲ್ಲಿ ಶಾಲಾ ಮಕ್ಕಳಿಗೆ ಪ್ರತಿ ಜಿಲ್ಲೆ ಮತ್ತು ತಾಲೂಕು ಹಳ್ಳಿಯ ಶಾಲಾ ಮಕ್ಕಳಿಗೆ ವಿಶೇಷ ಸಾರಿಗೆ ಬಸ್​ಗಳನ್ನು ಆರಂಭಿಸಬೇಕು ಎಂದು ಮನವಿ ಮಾಡಿ ಪತ್ರ ಬರೆದಿದ್ದಾಳೆ.

ಈ ಪತ್ರವನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಮಾತ್ರವಲ್ಲದೆ, ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಹಾಗೂ ಬಿಎಂಟಿಸಿ ಎಂಡಿ ರಾಮಚಂದ್ರನ್ ಆರ್ ಅವರಿಗೆ ಕಳುಹಿಸಿದ್ದಾಳೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...

ಯಾದಗಿರಿ | ಮಾಜಿ ತಾ.ಪಂ ಸದಸ್ಯನ ಮೇಲೆ ಹಲ್ಲೆ ಆರೋಪ; ಆರು ಮಂದಿ ವಿರುದ್ಧ ಪ್ರಕರಣ ದಾಖಲು

ಸಾಲದ ಬಡ್ಡಿ ಪಾವತಿ ವಿಚಾರಕ್ಕೆ ಸಂಬಂಧಿಸಿದಂತೆ ಶಹಾಪುರ ತಾಲ್ಲೂಕು ಪಂಚಾಯಿತಿ ಮಾಜಿ...