ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ 16 ವರ್ಷದ ಯುವತಿ ಸಜೀವ ದಹನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಏ.28ರಂದು ಸಾವನ್ನಪ್ಪಿದ್ದಾರೆ.
ಸುನೀತ್ (42), ನಮನ್ (20) ಹಾಗೂ ಮಯಾಂಕ್ (19) ಮೃತಪಟ್ಟವರು. ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾದೆ ಒಂದೇ ಕುಟುಂಬದ ಮೂವರು ಏ.28ರಂದು ಮೃತಪಟ್ಟಿದ್ದಾರೆ. ಈ ಮೂಲಕ ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.
ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು.
ಅಪಘಾತದಲ್ಲಿ ಗಾಯಗೊಂಡಿದ್ದ ಉಳಿದವರು ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆ ನಡೆದ ಆರು ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.
ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿದಂತೆ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ
ಇನ್ನು ಈ ಅಪಘಾತಕ್ಕೆ ಕಾರಣವಾದ ಬಲೇನೋ ಕಾರು ಚಾಲಕ ಇನ್ಶೂರೆನ್ಸ್ ಹಣ ಕಟ್ಟದೆಯೇ, ಫೇಕ್ ನಂಬರ್ ಹಾಕಿದ್ದನು ಎನ್ನಲಾಗಿದೆ. ಈ ಅಸಲಿ ಕಾರು ನಂಬರ್ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದೆ. ಹೀಗಾಗಿ, ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ.
ಈ ಕುರಿತು ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.