ಬೆಂಗಳೂರು | ಕಾರುಗಳ ನಡುವೆ ಢಿಕ್ಕಿ ಯುವತಿ ಸಜೀವ ದಹನ; ಗಾಯಗೊಂಡಿದ್ದ ಮೂವರು ಸಾವು

Date:

ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿ 16 ವರ್ಷದ ಯುವತಿ ಸಜೀವ ದಹನವಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಏ.28ರಂದು ಸಾವನ್ನಪ್ಪಿದ್ದಾರೆ.

- Advertisement -

ಸುನೀತ್ (42), ನಮನ್ (20) ಹಾಗೂ ಮಯಾಂಕ್ (19) ಮೃತಪಟ್ಟವರು. ಅಪಘಾತದಲ್ಲಿ ಚಿಕಿತ್ಸೆ ಫಲಕಾರಿಯಾದೆ ಒಂದೇ ಕುಟುಂಬದ ಮೂವರು ಏ.28ರಂದು ಮೃತಪಟ್ಟಿದ್ದಾರೆ. ಈ ಮೂಲಕ ರಸ್ತೆ ಅಪಘಾತ ಪ್ರಕರಣದಲ್ಲಿ ಮೃತಪಟ್ಟವರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಏ.22 ರಂದು ಬೆಂಗಳೂರು ಉತ್ತರ ತಾಲೂಕಿನ ಮಾದವಾರ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಎರಡು ಕಾರುಗಳ ನಡುವೆ ಡಿಕ್ಕಿಯಾಗಿ 16 ವರ್ಷದ ಯುವತಿ ದಿವ್ಯಾ ಎಂಬುವವರು ಸಜೀವ ದಹನವಾಗಿದ್ದರು.

ಅಪಘಾತದಲ್ಲಿ ಗಾಯಗೊಂಡಿದ್ದ ಉಳಿದವರು ವಿಕ್ಟೋರಿಯಾ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಘಟನೆ ನಡೆದ ಆರು ದಿನಗಳ ಬಳಿಕ ಚಿಕಿತ್ಸೆ ಫಲಿಸದೇ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

ಮತ್ತೊಂದು ಕಾರಿನಲ್ಲಿದ್ದ ಚಾಲಕ ರಕ್ಷಿತ್, ಚೇತನ್, ಮುಬಾರಕ್, ಸಲ್ಮಾ ಸೇರಿದಂತೆ ನಾಲ್ವರಿಗೂ ಗಂಭೀರ ಗಾಯಗಳಾಗಿದ್ದು, ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಾಯಿಯ ಫೋಟೋ ವೈರಲ್ ಮಾಡುವುದಾಗಿ ಬೆದರಿಸಿ ಮಗಳ ನಗ್ನ ಫೋಟೋ ಪಡೆದ ಕಾಮುಕ

ಇನ್ನು ಈ ಅಪಘಾತಕ್ಕೆ ಕಾರಣವಾದ ಬಲೇನೋ ಕಾರು ಚಾಲಕ ಇನ್ಶೂರೆನ್ಸ್‌ ಹಣ ಕಟ್ಟದೆಯೇ, ಫೇಕ್ ನಂಬರ್ ಹಾಕಿದ್ದನು ಎನ್ನಲಾಗಿದೆ. ಈ ಅಸಲಿ ಕಾರು ನಂಬರ್‌ ಬೆಳಗಾವಿಯ ಪಲ್ಲವಿ ಎಂಬುವವರಿಗೆ ಸೇರಿದೆ. ಹೀಗಾಗಿ, ಡಿವೈಎಸ್ಪಿ ನೇತೃತ್ವದಲ್ಲಿ ತನಿಖೆ ಚುರುಕುಗೊಂಡಿದೆ.

ಈ ಕುರಿತು ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...

ಗದಗ | ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿ: ಶಿಸ್ತುಬದ್ಧ, ಅಚ್ಚುಕಟ್ಟಾದ ವ್ಯವಸ್ಥೆಗೆ ಜಿಲ್ಲಾಧಿಕಾರಿ ಸಿ. ಎನ್. ಶ್ರೀಧರ ಸೂಚನೆ

ಜಿಲ್ಲೆಯಲ್ಲಿ ಆಯೋಜಿಸಲಾಗಿರುವ ರಾಜ್ಯ ಮಟ್ಟದ ಕುಸ್ತಿ ಪಂದ್ಯಾವಳಿಯನ್ನು ಅತ್ಯಂತ ಯಶಸ್ವಿಯಾಗಿ ಹಾಗೂ...