ಸರ್ಕಾರದ ಹಲವು ಯೋಜನೆಗಳಡಿ ಮಾಸಿಕ ‘ಪಿಂಚಣಿ’ ಪಡೆಯುತ್ತಿರುವ ಫಲಾನುಭವಿಗಳು ಪಿಂಚಣಿ ಜಮಾ ಆಗುವ ತಮ್ಮ ಬ್ಯಾಂಕ್ ಅಥವಾ ಅಂಚೆ ಕಚೇರಿ ಖಾತೆಗೆ ಆಧಾರ್ ಜೋಡಣೆ(ಲಿಂಕ್) ಮಾಡಿಕೊಳ್ಳಬೇಕೆಂದು ಸರ್ಕಾರ ಹೇಳಿದೆ
ಸರ್ಕಾರದ ಯೋಜನೆಗಳಾಗಿರುವ ವೃದ್ಧಾಪ್ಯ, ಸಂಧ್ಯಾ ಸುರಕ್ಷಾ, ವಿಧವಾ, ಅಂಗವಿಕಲ, ಮೈತ್ರಿ, ಮನಸ್ವಿನಿ ಸೇರಿದಂತೆ ಇತರೆ ಮಾಸಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನ್ಯಾಷನಲ್ ಪೇಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಮೂಲಕ ಆಧಾರ್ ಆಧರಿತ ಪಿಂಚಣಿ ಪಾವತಿ ಮಾಡಲು ತೀರ್ಮಾನಿಸಲಾಗಿದೆ.
ಈ ಸುದ್ದಿ ಓದಿದ್ದೀರಾ? ಯಾದಗಿರಿ | ಬೌದ್ಧ ಅಭಿವೃದ್ಧಿ ನಿಗಮ ಸ್ಥಾಪನೆಗೆ ಬಜೆಟ್‌ನಲ್ಲಿ ಅನುದಾನ ಘೋಷಿಸಿ: ದೇವಿಂದ್ರ ಹೆಗಡೆ
ಆಧಾರ್ ಆಧರಿತ ಪಿಂಚಣಿ ಹಿನ್ನಲೆಯಲ್ಲಿ ಫಲಾನುಭವಿಗಳು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಯ ಖಾತೆಗೆ ಕಡ್ಡಾಯವಾಗಿ ಜುಲೈ 3ರ ಒಳಗೆ ಲಿಂಕ್ ಮಾಡಿಸಿಕೊಳ್ಳಲು ಕೋರಲಾಗಿದೆ. ತಪ್ಪಿದಲ್ಲಿ ಸರ್ಕಾರದಿಂದ ಬರುವ ಪಿಂಚಣಿ ಸ್ಥಗಿತಗೊಳ್ಳುವ ಸಾಧ್ಯತೆ ಇದೆ ಎನ್ನಲಾಗಿದೆ.