ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವಸ್ತ್ರಸಂಹಿತೆಗೆ ಎಎಪಿ ವಿರೋಧ

Date:

Advertisements

ಅಕ್ಟೋಬರ್ 28 ಮತ್ತು 29ರಂದು ಸಿ ಗ್ರೂಪಿನ ಹುದ್ದೆ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪರೀಕ್ಷೆ ನಡೆಸುತ್ತಿದ್ದು, ಈ ಪರೀಕ್ಷೆಗೆ ಹಾಜರಾಗಲು ಪರೀಕ್ಷಾರ್ಥಿಗಳಿಗೆ ವಸ್ತ್ರ ಸಂಹಿತೆ ವಿಧಿಸಲಾಗಿದೆ. ಇದು ಕಾನೂನು ಬಾಹಿರ. ಅಕ್ಟೋಬರ್ 28 ಮತ್ತು 29ರ ಪರೀಕ್ಷೆಗೆ ಸೂಚಿಸಿರುವ ವಸ್ತ್ರ ಸಂಹಿತೆಯನ್ನು ಹಿಂಪಡೆಯಬೇಕು ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಮೋಹನ್ ದಾಸರಿ ಆಗ್ರಹಿಸಿದರು.

ನಗರದ ಪಕ್ಷದ ಕಚೇರಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, “ನ.5 ರಂದು ಒಂದೇ ದಿನ ಮೂರು ಪರೀಕ್ಷೆ ನಡೆಸುತ್ತಿರುವುದರಿಂದ ಅಭ್ಯರ್ಥಿಗಳಿಗೆ ಅನ್ಯಾಯ ಆಗುತ್ತದೆ. ಅಧಿಕಾರಿಗಳ ಬೇಜವಾಬ್ದಾರಿತನ ಎದ್ದು ಕಾಣುತ್ತಿದೆ. ಇವರೆಲ್ಲ ಪರೀಕ್ಷೆ ಬರೆಯದೆ ದುಡ್ಡು ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ ಎನಿಸುತ್ತದೆ. ತಕ್ಷಣವೇ ರಾಜ್ಯ ಸರ್ಕಾರ ಪರೀಕ್ಷೆಯನ್ನು ಮುಂದೂಡಬೇಕು. ಬುರ್ಖಾ ಹಾಕಿ ಬರುವ ಮುಸ್ಲಿಂ ಹೆಣ್ಣು ಮಕ್ಕಳಿಗೆ ಒಂದೂವರೆ ಗಂಟೆ ಮುಂಚೆ ಬರುವಂತೆ ಹೇಳಿದ್ದಾರೆ. ದೂರದ ಊರಿನಿಂದ ಬರುವವರು ತಡವಾಗಿ ಬಂದರೆ ಅವರ ಕತೆ ಏನು? ಈ ನಿಯಮಗಳನ್ನು ಬದಲಾಯಿಸಬೇಕು” ಎಂದು ಒತ್ತಾಯಿಸಿದರು.

“ಹುಲಿ ಉಗುರು ವಿವಾದದ ಬಗ್ಗೆ ಮಾತನಾಡಿದ ಅವರು, ಕಾನೂನು ಬಾಹಿರವಾಗಿ ಹುಲಿ ಉಗುರು ಇಟ್ಟುಕೊಂಡಿರುವವರನ್ನೆಲ್ಲಾ ಬಂಧಿಸಬೇಕು. ನಟ ದರ್ಶನ್, ಜಗ್ಗೇಶ್, ನಿಖಿಲ್ ಅವರನ್ನು ಬಂಧಿಸಿ, ಎಲ್ಲರಿಗೂ ಒಂದೇ ಕಾನೂನು ಇರಬೇಕು” ಎಂದರು.

Advertisements

“ರಾಮನಗರವನ್ನು ಬೆಂಗಳೂರಿಗೆ ಸೇರಿಸಲು ವಿರೋಧ ವ್ಯಕ್ತಪಡಿಸಿದ ಅವರು, ಕುಮಾರಸ್ವಾಮಿಯವರು 110 ಹಳ್ಳಿಗಳನ್ನು ಬಿಬಿಎಂಪಿ ವಲಯಕ್ಕೆ ಸೇರಿಸಿದರು. ಹೆಚ್‌.ಡಿ.ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್ ಅವರಿಗೆ ರಿಯಲ್ ಸ್ಟೇಟ್ ಮಾತ್ರ ಗೊತ್ತು, ಅಭಿವೃದ್ಧಿ ಗೊತ್ತಿಲ್ಲ. ಅಂದು ಬಿಬಿಎಂಪಿ ವಲಯಕ್ಕೆ ಸೇರಿದ 110 ಹಳ್ಳಿಗಳಿಗೆ ಇಂದಿಗೂ ಸರಿಯಾದ ನೀರಿನ ವ್ಯವಸ್ಥೆ ಮಾಡಿಲ್ಲ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕೇಂದ್ರ ಸರ್ಕಾರದ ಕೈಗೊಂಬೆಯಾಗಿದೆ ಎನ್‌ಸಿಇಆರ್‌ಟಿ: ಶಿಕ್ಷಣತಜ್ಞ ನಿರಂಜನಾರಾಧ್ಯ ಆರೋಪ

ವಿಚಿತ್ರ ನಿಯಮಗಳನ್ನು ಹಿಂಪಡೆಯಿರಿ

“700 ಹುದ್ದೆಗಳ ನೇಮಕಾತಿಗೆ ಪರೀಕ್ಷೆ ನಡೆಸಲಾಗುತ್ತಿದ್ದು, ಸುಮಾರು 2.5 ಲಕ್ಷ ಅರ್ಜಿಗಳು ಸಲ್ಲಿಕೆಯಾಗಿವೆ. ಪರೀಕ್ಷಾರ್ಥಿಗಳಿಗೆ ವಿಚಿತ್ರ ನಿಯಮಗಳನ್ನು ಮಾಡಲಾಗಿದೆ. ಅದರಲ್ಲೂ, ಮಹಿಳೆಯರಿಗೆ ತಾಳಿ ಸೇರಿ ಎಲ್ಲ ಆಭರಣಗಳನ್ನು ಬಿಚ್ಚಿಟ್ಟು ಬರುವಂತೆ ಸೂಚಿಸಿದೆ. ಪೂರ್ತಿ ತೋಳಿನ ಬಟ್ಟೆ ಧರಿಸಬಾರದು, ಜೀನ್ಸ್ ಧರಿಸಬಾರದು ಎಂದಿದ್ದು, ಅರ್ಧ ತೋಳಿನ ಬಟ್ಟೆ ಧರಿಸಲು ಸೂಚಿಸಿದ್ದಾರೆ. ಇದು ನಿಯಮ ಬಾಹಿರ” ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಯುವ ಘಟಕದ ಅಧ್ಯಕ್ಷ ಲೋಹಿತ್ ಹನುಮಾಪುರ ಹೇಳಿದರು.

“ಈ ನಿಯಮಗಳು ನಮ್ಮ ಸಂವಿಧಾನ ಮತ್ತು ಧರ್ಮಕ್ಕೆ ವಿರುದ್ಧವಾಗಿದೆ. ಆ ಅಧಿಕಾರಿಗಳಿಗೆ ಈ ಬಗ್ಗೆ ಜ್ಞಾನ ಇಲ್ಲ ಎನಿಸುತ್ತದೆ. ದೂರದ ಊರಿನಿಂದ ಬಂದ ಪರೀಕ್ಷಾರ್ಥಿಗಳು ಚಿನ್ನದ ಆಭರಣಗಳನ್ನು ಎಲ್ಲಿಟ್ಟು ಹೋಗಬೇಕು. ನವೆಂಬರ್ 5 ರಂದು ಕಲ್ಯಾಣ ಕರ್ನಾಟಕ ಭಾಗದಲ್ಲಿ ಪೊಲೀಸ್ ಪೇದೆ ಹುದ್ದೆ ನೇಮಕಾತಿಗೆ ಪರೀಕ್ಷೆ ನಡೆಸುತ್ತಿದ್ದು, ಅದೇ ದಿನ ಕೇಂದ್ರ ಸರ್ಕಾರ ಬ್ಯಾಂಕಿಂಗ್ ಪರೀಕ್ಷೆ ಕೂಡ ನಡೆಸುತ್ತಿದೆ. ಇದರ ಜೊತೆ ಮತ್ತೊಂದು ಪರೀಕ್ಷೆ ಕೂಡ ಅಂದೇ ನಡೆಯಲಿದ್ದು, ಇದರಿಂದ ಎರಡು ಮೂರು ಪರೀಕ್ಷೆ ಬರೆಯುವವರಿಗೆ ತೊಂದರೆಯಾಗುತ್ತದೆ, ಇದು ಕೇಂದ್ರ ಮತ್ತು ರಾಜ್ಯದ ನಡುವೆ ಹೊಂದಾಣಿಕೆ ಇಲ್ಲ ಎನ್ನುವುದನ್ನು ಸೂಚಿಸುತ್ತದೆ” ಎಂದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

Download Eedina App Android / iOS

X