ಬಿಜೆಪಿ ಸರ್ವಾಧಿಕಾರಿ ಧೋರಣೆ ಖಂಡಿಸಿ ಏ.7ರಂದು ಎಎಪಿ ಉಪವಾಸ ಸತ್ಯಾಗ್ರಹ

Date:

Advertisements

ಕೇಂದ್ರ ಸರ್ಕಾರದ ಸರ್ವಾಧಿಕಾರಿ ಧೋರಣೆ ಖಂಡಿಸಿ ಏಪ್ರಿಲ್ 7ರಂದು ದೇಶಾದ್ಯಂತ ಆಮ್ ಆದ್ಮಿ ಪಾರ್ಟಿಯಿಂದ ಉಪವಾಸ ಸತ್ಯಾಗ್ರಹ ಮಾಡಲಾಗುತ್ತಿದೆ. ನಗರದ ಫ್ರೀಡಂ ಪಾರ್ಕ್‌ನಲ್ಲಿ ಎಎಪಿ ನಾಯಕರು, ಕಾರ್ಯಕರ್ತರು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ರವರೆಗೆ ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ ಎಂದು ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್ ವಿ ಸದಂ ತಿಳಿಸಿದರು.

ನಗರದಲ್ಲಿ ನಡೆದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, “ಎಲ್ಲ ಜಿಲ್ಲಾ, ತಾಲ್ಲೂಕು ಕೇಂದ್ರಗಳಲ್ಲಿ ಕೂಡ ಆಮ್ ಆದ್ಮಿ ಪಾರ್ಟಿಯ ನಾಯಕರು, ಕಾರ್ಯಕರ್ತರು ಸತ್ಯಾಗ್ರಹದಲ್ಲಿ ಭಾಗವಹಿಸುತ್ತಿದ್ದಾರೆ. ನರೇಂದ್ರ ಮೋದಿ ಸರ್ಕಾರವನ್ನು ನಮ್ಮ ರಾಷ್ಟ್ರದಿಂದ ತೊಲಗಿಸುವ ಸಲುವಾಗಿ ಎಲ್ಲ ಭಾರತೀಯರು ಒಂದಾಗುತ್ತಿದ್ದಾರೆ” ಎಂದರು.

“ತೆರಿಗೆದಾರರ ಹಣವನ್ನು ಖರ್ಚು ಮಾಡುವ ವಿಚಾರದಲ್ಲಿ ಎಎಪಿ ಸರ್ಕಾರ ದೇಶಕ್ಕೆ ಮಾದರಿಯಾಗಿದೆ. ಉಚಿತ ನೀರು, ವಿದ್ಯುತ್, ಶಿಕ್ಷಣ, ಆರೋಗ್ಯ ಸೇವೆ ನೀಡುವ ಮೂಲಕ ದೆಹಲಿ ಮತ್ತು ಪಂಜಾಬ್‌ನಲ್ಲಿ ಕ್ರಾಂತಿ ಮಾಡಲಾಗುತ್ತಿದೆ. ಇದನ್ನು ಸಹಿಸದ ಬಿಜೆಪಿ ಸರ್ಕಾರ ಆಮ್ ಆದ್ಮಿ ಪಾರ್ಟಿ ನಾಯಕರನ್ನು ಬಂಧಿಸುವ ಮೂಲಕ ಪ್ರಜಾಪ್ರಭುತ್ವವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ” ಎಂದು ಜಗದೀಶಿ ಸದಂ ಕಿಡಿಕಾರಿದರು.

Advertisements

“ಭ್ರಷ್ಟಾಚಾರದ ವಿರುದ್ಧ ಹೋರಾಡಿದ್ದ, ದೇಶಾದ್ಯಂತ ಲೋಕಪಾಲ ಬಿಲ್ ಜಾರಿಗೆ ತರಲು ಹೋರಾಡುತ್ತಿರುವ ಅರವಿಂದ್ ಕೇಜ್ರಿವಾಲ್ ಅವರನ್ನೇ ಭ್ರಷ್ಟಾಚಾರಿ ಎಂದು ಬಿಂಬಿಸಲು ಬಿಜೆಪಿ ಪ್ರಯತ್ನ ಮಾಡುತ್ತಿದೆ. ಅವರ ಪತ್ನಿ ಸುನೀತಾ ಅವರು ಕೂಡ ಆದಾಯ ತೆರಿಗೆ ಇಲಾಖೆಯಲ್ಲಿ ಜಂಟಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಅವರನ್ನು ಭ್ರಷ್ಟಾಚಾರಿ ಎಂದು ಬಿಂಬಿಸಲು ಹೊರಟ ಬಿಜೆಪಿಗೆ ಜನತಾ ನ್ಯಾಯಾಲಯದಲ್ಲಿ ಪಾಠ ಕಲಿಸಬೇಕಿದೆ. ಅರವಿಂದ ಕೇಜ್ರಿವಾಲ್ ವಿರುದ್ಧ ಸುಳ್ಳು ಪ್ರಕರಣವನ್ನು ದಾಖಲಿಸಿ ಬಂಧಿಸಲಾಗಿದೆ. ಅರಬಿಂದೋ ಫಾರ್ಮಾ ಸಂಸ್ಥೆಯ ಮಾಲಿಕ ಶರತ್‌ ಚಂದ್ರ ತಾವೇ ₹56 ಕೋಟಿಗಳನ್ನು ಚುನಾವಣಾ ಬಾಂಡ್ ಮೂಲಕ ಬಿಜೆಪಿ ಪಕ್ಷಕ್ಕೆ ನೀಡಿರುವುದು ಜಗಜ್ಜಾಹೀರಾಗಿದೆ. ಬಿಜೆಪಿ ವಸೂಲಿ ಪಕ್ಷ ಎಂದು ಇದರಿಂದಲೇ ಗೊತ್ತಾಗುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬಿಸಿಲಿನ ಮಧ್ಯೆ ಸಂಚಾರ ಪೊಲೀಸರಿಗೆ ನಿತ್ಯ ನೀರು ಕೊಡುವ ನೀರ್‌ಸಾಬ್

ಯುವ ಘಟಕದ ರಾಜ್ಯಾಧ್ಯಕ್ಷ ಲೋಹಿತ್ ಹನುಮಾಪುರ ಮಾತನಾಡಿ, “ಸಂಜಯ್ ಸಿಂಗ್ ಬಿಡುಗಡೆಯಾಗಿರುವುದು ಸತ್ಯಕ್ಕೆ ಬೆಲೆ ಇದೆ ಎನ್ನುವ ಸಂದೇಶವನ್ನು ನೀಡಿದೆ. ಭಾನುವಾರ ದೇಶಾದ್ಯಂತ ಬೃಹತ್ ಪ್ರತಿಭಟನೆಯಾದ ಬಳಿಕ ಸಂಜಯ್ ಸಿಂಗ್ ಬಿಡುಗಡೆಯಾಗಿದ್ದಾರೆ. ಬಿಜೆಪಿಯನ್ನು ಅಧಿಕಾರದಿಂದ ತೊಲಗಿಸುವವರೆಗೆ ನಮ್ಮ ಹೋರಾಟ ಮುಂದುವರೆಯಲಿದೆ” ಎಂದರು.

ಮಾಧ್ಯಮ ಗೋಷ್ಠಿಯಲ್ಲಿ ಎಎಪಿ ರಾಜ್ಯ ಉಪಾಧ್ಯಕ್ಷ ರುದ್ರಯ್ಯ ನವಲಿ ಹಿರೇಮಠ, ಬೆಂಗಳೂರು ನಗರಾಧ್ಯಕ್ಷ ಡಾ. ಸತೀಶ್ ಕುಮಾರ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X