ಬೀದರ್‌ | ʼಬರ್ತಡೇʼ ದಿನವೇ ಅಪಘಾತ : ಇಬ್ಬರು ಯುವಕರ ದಾರುಣ ಸಾವು

Date:

Advertisements

ಔರಾದ್‌ ತಾಲೂಕಿನ ಸೋರಳ್ಳಿ ಗ್ರಾಮದ ಸಮೀಪ ಭೀಕರ ಅಪಘಾತವೊಂದು ಸಂಭವಿಸಿದ್ದು, ಅದರಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರಲ್ಲಿ ಓರ್ವ ತನ್ನ ಬರ್ತ್‌ಡೇ ಆಚರಿಸಿಕೊಂಡು ಮರಳುತ್ತಿದ್ದ ಎಂದು ತಿಳಿದು ಬಂದಿದೆ.

ಔರಾದ್‌ ತಾಲೂಕಿ ಬೇಲೂರ್‌ (ಎನ್)‌ ಗ್ರಾಮದ ಹಣಮಂತ ಚನ್ನಪ್ಪ (20), ಗಣೇಶ ಧನರಾಜ್ (19) ಮೃತರು.

ಹಣಮಂತ ಎಂಬ ಯುವಕನ ಹುಟ್ಟು ಹಬ್ಬದ ಹಿನ್ನೆಲೆಯಲ್ಲಿ ಜಂಬಗಿ ಗ್ರಾಮದಲ್ಲಿ ಬರ್ತಡೇ ಪಾರ್ಟಿ ಮುಗಿಸಿ ಇಬ್ಬರೂ ಬೈಕ್‌ನಲ್ಲಿ ವಾಪಸ್ಸಾಗುತ್ತಿದ್ದರು. ಈ ಸಂದರ್ಭದಲ್ಲಿ ಅತಿ ವೇಗದಲ್ಲಿದ್ದ ಬೈಕ್‌ ನಿಯಂತ್ರಣ ತಪ್ಪಿ ಗಿಡಕ್ಕೆ ಢಿಕ್ಕಿ ಹೊಡೆದಿದ್ದರಿಂದ ಇಬ್ಬರೂ ಹಾರಿ ರಸ್ತೆ ಪಕ್ಕದ ಕಂದಕದಲ್ಲಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.

Advertisements

ಇಬ್ಬರು ಯುವಕರು ಬೀದರ್‌ನಲ್ಲಿ ವ್ಯಾಸಂಗ ಮಾಡುತ್ತಿದ್ದರು. ಸ್ನೇಹಿತರು ಸೇರಿ ಆಯೋಜಿಸಿದ್ದ ಬರ್ತಡೇ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ವಾಪಸ್ಸು ಬರುವ ವೇಳೆ ದುರ್ಘಟನೆ ಸಂಭವಿಸಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಬಸ್-ಆಟೋ ಮಧ್ಯೆ ಭೀಕರ ಅಪಘಾತ; ತಾಯಿ, ಇಬ್ಬರು ಮಕ್ಕಳ ಸಾವು

ಈ ಸಂಬಂಧ ಸಂತಪೂರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಮಾಲೂರು | ‘ಕೆಲಸ ನೀಡದಿದ್ದರೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಳ್ಳುತ್ತೇವೆ’!

ಮಾಲೂರಿನ ವರ್ಗಾ ಕಂಪನಿ ಮುಚ್ಚುವುದನ್ನು ವಿರೋಧಿಸಿ ಇಂದು ಮಾಲೂರಿನಲ್ಲಿ ಕಾರ್ಮಿಕರು ಬೃಹತ್...

ಗಣೇಶ ಚತುರ್ಥಿಗೆ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು

ಗಣೇಶ ಚತುರ್ಥಿ ಹಬ್ಬದ ಹಿನ್ನೆಲೆ ಪ್ರಯಾಣಿಕರ ಅನುಕೂಲಕ್ಕಾಗಿ ರೈಲ್ವೆ ಇಲಾಖೆಯು ಬೆಂಗಳೂರು-ಮಂಗಳೂರು...

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

Download Eedina App Android / iOS

X