ಮಳೆ ನೀರು ಒಳಚರಂಡಿಗೆ ಹರಿಬಿಡುತ್ತಿರುವ ಜನರ ವಿರುದ್ಧ ಕ್ರಮ; ಜಲಮಂಡಳಿ ಅಧ್ಯಕ್ಷ

Date:

ಮಳೆ ನೀರು ಕೋಯ್ಲು ಪದ್ದತಿಯ ಅಳವಡಿಕೆಯ ಮೂಲಕ ಆ ನೀರಿನ ಸದ್ಬಳಕೆ ಮಾಡುವುದು ಕಡ್ಡಾಯವಾಗಿದೆ. ಆದರೆ, ಹಲವಾರು ಕಡೆಗಳಲ್ಲಿ ಈ ನೀರನ್ನು ನೇರವಾಗಿ ಒಳಚರಂಡಿಗೆ ಸೇರ್ಪಡೆ ಮಾಡುವ ಮೂಲಕ ಒಳಚರಂಡಿ ಮೇಲೆ ಒತ್ತಡ ಹೆಚ್ಚಾಗುವಂತೆ ಮಾಡಲಾಗುತ್ತಿದೆ. ಮಳೆ ನೀರು ಇಂಗಿಸುವುದನ್ನ ಪ್ರೋತ್ಸಾಹಿಸುವ ಉದ್ದೇಶದಿಂದ ಮಳೆ ನೀರನ್ನು ನೇರವಾಗಿ ಒಳಚರಂಡಿಗೆ ಹರಿಯಬಿಡುತ್ತಿರುವ ಜನರ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷರಾದ ಡಾ ವಿ ರಾಮ್‌ ಪ್ರಸಾತ್‌ ಮನೋಹರ್‌ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮೇ 27ರಂದು ಜಲಮಂಡಳಿಯ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಚನೆ ನೀಡಿದ ಜಲಮಂಡಳಿ ಅಧ್ಯಕ್ಷ ಡಾ. ವಿ ರಾಮ್‌ ಪ್ರಸಾತ್‌ ಮನೋಹರ್‌, “ಬೆಂಗಳೂರಿನಲ್ಲಿ ಬೀಳುವ ಮಳೆಯನ್ನ ಸಮರ್ಪಕವಾಗಿ ಬಳಕೆ ಮಾಡುವುದರಿಂದ ನಗರದ ಅಂತರ್ಜಲ ಮಟ್ಟವನ್ನು ಗಣನೀಯವಾಗಿ ಹೆಚ್ಚಿಸಬಹುದಾಗಿದೆ. ಕೆಲವಡೆ ಮಳೆ ನೀರು ಕೊಯ್ಲು ಪದ್ದತಿಯ ಮೂಲಕ ಸಂಗ್ರಹಿಸಲಾದ ನೀರನ್ನು ಒಳಚರಂಡಿಗೆ ನೇರವಾಗಿ ಹರಿಯಬಿಡಲಾಗುತ್ತಿದೆ” ಎಂದರು.

“ಇದರಿಂದ ಮಳೆ ನೀರು ಒಳಚರಂಡಿಗೆ ಸೇರ್ಪಡೆಗೊಂಡು ಪೋಲಾಗುವುದಲ್ಲದೇ, ಒಳಚರಂಡಿ ವ್ಯವಸ್ಥೆಯ ಮೇಲೆ ಒತ್ತಡವನ್ನು ಹೆಚ್ಚಿಸುತ್ತಿದೆ. ಇದನ್ನ ತಡೆಗಟ್ಟುವುದು ಹಾಗೂ ಜನರು ಮಳೆ ನೀರನ್ನು ಸಮರ್ಪಕವಾಗಿ ಹಿಡಿದು ಅದನ್ನು ಸದ್ಬಳಕೆ ಮಾಡುವ ನಿಟ್ಟಿನಲ್ಲಿ ಜಾಗೃತಿ ಮೂಡಿಸುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ದೇಶಿಸಿದ್ದರು. ಈ ಹಿನ್ನಲೆಯಲ್ಲಿ ಈ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಸೇವಾ ಕೇಂದ್ರಗಳ ವ್ಯಾಪ್ತಿಯಲ್ಲಿ ನೇರವಾಗಿ ಒಳಚರಂಡಿಗೆ ಮಳೆ ನೀರನ್ನು ಹರಿಸುತ್ತಿರುವ ಬಗ್ಗೆ ಸರ್ವೆ ಮಾಡಬೇಕು. ನೇರವಾಗಿ ಒಳಚರಂಡಿಗೆ ಸೇರುತ್ತಿರುವ ನೀರನ್ನ ತಡೆಗಟ್ಟಬೇಕು ಹಾಗೂ ಹೀಗೆ ಮಾಡುತ್ತಿರುವವರ ವಿರುದ್ದ ಕ್ರಮ ಕೈಗೊಳ್ಳಬೇಕು” ಎಂದು ಸೂಚನೆ ನೀಡಿದರು.

“ಮಳೆ ನೀರು ಕೋಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳಲು ಸಾಧ್ಯವಿರುವ ಆದರೆ ಇದುವರೆಗೂ ಅಳವಡಿಸಿಕೊಳ್ಳದೇ ಇರುವಂತಹ ಕಟ್ಟಡಗಳ ಜಲಮಂಡಳಿಯ ವತಿಯಿಂದ ಬಗ್ಗೆ ಸಮೀಕ್ಷೆಯನ್ನು ನಡೆಸಲಾಗುವುದು. ಈ ಮೂಲಕ ಮಳೆ ನೀರು ಕೊಯ್ಲು ಪದ್ದತಿಯನ್ನು ಅಳವಡಿಸಿಕೊಳ್ಳದೇ ಇರುವ ಹಾಗೂ ಅಳವಡಿಸಿಕೊಳ್ಳುವ ಮೂಲಕ ಆಗುತ್ತಿರುವ ಅನುಕೂಲತೆಗಳ ಬಗ್ಗೆ ಮಾಹಿತಿಯನ್ನು ಕ್ರೋಡೀಕರಿಸಲಾಗುವುದು” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಾಲ್, ಮನರಂಜನಾ ಕೇಂದ್ರಗಳ ಸುರಕ್ಷತಾ ಕ್ರಮಗಳ ಪರಿಶೀಲನೆಗೆ ಸೂಚನೆ ನೀಡಿದ ಡಿಸಿಎಂ

“ನಗರದಲ್ಲಿ ಬೀಳುತ್ತಿರುವ ಮಳೆಯನ್ನು ಸಮರ್ಪಕವಾಗಿ ಸದ್ಬಳಕೆ ಮಾಡುವ ಮೂಲಕ ನಗರದ ನೀರಿನ ಅಭಾವವನ್ನು ನಿರ್ವಹಿಸಲು ಸಾಧ್ಯವಿದೆ. ಈ ಬಗ್ಗೆ ಉಪಮುಖ್ಯಮಂತ್ರಿಗಳು ನೀಡಿರುವ ನಿರ್ದೇಶನದಂತೆ ಮುಂಜಾಗ್ರತಾ ಕ್ರಮಗಳಾಗಿ ಅಳವಡಿಸಿಕೊಳ್ಳಲಾಗುತ್ತಿದೆ. ನೀರಿನ ಕೊರತೆಯನ್ನು ನಿರ್ವಹಿಸಿದ ರೀತಿಯಲ್ಲಿಯೇ ಮಳೆಗಾಲವನ್ನು ನಿರ್ವಹಿಸಲು ಇದು ಬಹಳ ಮುಖ್ಯ ಕ್ರಮವಾಗಿದೆ” ಎಂದು ಜಲಮಂಡಳಿ ಅಧ್ಯಕ್ಷ ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚುನಾವಣಾ ಫಲಿತಾಂಶಕ್ಕೂ ಪೆಟ್ರೋಲ್, ಡೀಸೆಲ್ ದರ ಏರಿಕೆಗೂ ಸಂಬಂಧವಿಲ್ಲ: ಸಿಎಂ ಸಿದ್ದರಾಮಯ್ಯ

“ಪ್ರಜಾಪ್ರಭುತ್ವದಲ್ಲಿ ಸೋಲು ಗೆಲುವು ಇದ್ದದ್ದೇ, ಪೆಟ್ರೋಲ್ ಬೆಲೆ ಏರಿಕೆಗೂ ಚುನಾವಣಾ ಫಲಿತಾಂಶಕ್ಕೂ...

ರಾಯಚೂರು | ಉತ್ತರ ಕರ್ನಾಟಕದ ಭಾಗದಲ್ಲಿ ಗಮಕ ಕಾವ್ಯವನ್ನು ಉಳಿಸಿ ಬೆಳೆಸುವ ಕಾರ್ಯವಾಗಬೇಕು: ಡಾ ಎ ವಿ ಪ್ರಸನ್ನ

ಉತ್ತರ ಕರ್ನಾಟಕದ ಭಾಗದಲ್ಲಿ ಹುಟ್ಟಿಕೊಂಡಿದ್ದ ಗಮಕ ಕಾವ್ಯ ಇಂದು ದಕ್ಷಿಣ ಕರ್ನಾಟಕದಲ್ಲಿ ಬೆಳೆಯುತ್ತಿದೆ....

ಬೆಂಗಳೂರು | ಸಮಸ್ಯೆಗಳ ಬಗ್ಗೆ ಮನಮುಟ್ಟುವಂತೆ ಬರೆದು ಜನರಿಗೆ ತಲುಪಿಸುವುದು ಅತ್ಯವಶ್ಯಕ; ಕೆ ಸೋಮಶೇಖರ್

"ಜನರ ಸಮಸ್ಯೆಗಳಿಗೆ ಧ್ವನಿಯಾಗುವ ಸತ್ವಯುತ ಲೇಖನಗಳು, ಬರಹಗಳು ಸಮಾಜದ ಬದಲಾವಣೆಯಲ್ಲಿ ಅತ್ಯಂತ...