ನಟ ದರ್ಶನ್ ಬಂಧನ | ವಿಚಾರಣೆ ಬಳಿಕ ಮುಂದಿನ ಕ್ರಮ; ಪೊಲೀಸ್ ಆಯುಕ್ತ ಬಿ. ದಯಾನಂದ್

Date:

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾತನಾಡಿದ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್, “ಸದ್ಯ ದರ್ಶನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ನಂತರ ಕ್ರಮ ಕೈಗೊಳ್ಳಲಾಗುವುದು” ಎಂದು ಹೇಳಿದ್ದಾರೆ.

- Advertisement -

ಮಂಗಳವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, “ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಸೇರಿ ಹತ್ತಕ್ಕೂ ಹೆಚ್ಚು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಜೂನ್ 9 ರಂದು (ಭಾನುವಾರ) ಕಾಮಾಕ್ಷಿಪಾಳ್ಯದಲ್ಲಿ ಅಪರಿಚಿತ ಶವವೊಂದು ಸಿಕ್ಕಿತ್ತು. ಮೃತದೇಹದ ಮೇಲೆ ಗಾಯಗಳು ಇದ್ದವು. ಇದನ್ನು ಗಮನಿಸಿ ಕಾಮಾಕ್ಷಿಪಾಳ್ಯದ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ಸಿಸಿಟಿವಿ ಇತರ ತಾಂತ್ರಿಕ ಆಧಾರದ ಮೇಲೆ ಕೆಲವರನ್ನು ಬಂಧಿಸಲಾಯಿತು. ನಂತರ ಅವರ ವಿಚಾರಣೆ ಬಳಿಕ ಇದು ಚಿತ್ರದುರ್ಗದ ರೇಣುಕಾಸ್ವಾಮಿ ಎಂದು ತಿಳಿದು ಬಂದಿದೆ. ಇದರ ಹಿಂದೆ ಚಿತ್ರ ನಟ ದರ್ಶನ್ ಇರುವುದು ತಿಳಿದು ಬಂದಿದೆ. ಈ ಹಿನ್ನೆಲೆ, ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ” ಎಂದು ಹೇಳಿದ್ದಾರೆ.

“ಜೂನ್ 9ರಂದು ಕೊಲೆಯಾಗಿದೆ. ರೇಣುಕಾ ಸ್ವಾಮಿ ದರ್ಶನ್ ಅವರ ಪತ್ನಿಗೆ ಅವಾಚ್ಯ ಸಂದೇಶಗಳನ್ನು ಕಳಿಸಿದ್ದಾನೆ ಎಂಬ ಕಾರಣಕ್ಕೆ ಆತನ ಕೊಲೆ ಮಾಡಲಾಗಿದೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ. ಸದ್ಯ ಬಂಧಿತ ಆರೋಪಿಗಳಿಂದ ವಿಚಾರಣೆ ನಡೆಸಲಾಗುತ್ತಿದೆ. ನಂತರ ಕ್ರಮ ತೆಗೆದುಕೊಳ್ಳುತ್ತೇವೆ. ಮೃತ ರೇಣುಕಾಸ್ವಾಮಿಗೆ 33 ವರ್ಷ. ಹೆಚ್ಚಿನ ತನಿಖೆ ನಡೆದ ಬಳಿಕವಷ್ಟೇ ನಾವು ಹೆಚ್ಚಿನ ಮಾಹಿತಿ ನೀಡಲು ಸಾಧ್ಯ” ಎಂದು ಹೇಳಿದ್ದಾರೆ.

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಇಂದು ಬೆಳಗ್ಗೆ 8.30ಕ್ಕೆ ಬೆಂಗಳೂರು ವಿಜಯನಗರ ಎಸಿಪಿ ಚಂದನ್ ನೇತೃತ್ವದಲ್ಲಿ ನಟ ದರ್ಶನ್ ಅವರನ್ನು ಮೈಸೂರಿನ ರ್ಯಾಡಿಸನ್ ಹೋಟೆಲ್​ನಲ್ಲಿ ಬಂಧಿಸಲಾಗಿದೆ. ದರ್ಶನ್ ಬಂಧನದ ಬೆನ್ನಲ್ಲೇ ಆರ್.ಆರ್‌.ನಗರದಲ್ಲಿ ದರ್ಶನ್ ಆಪ್ತೆ ಪವಿತ್ರಾ ಗೌಡ ಅವರನ್ನು ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಕೊಲೆ ಪ್ರಕರಣ; ಚಾಲೆಂಜಿಂಗ್ ಸ್ಟಾರ್ ದರ್ಶನ್ ಬಂಧನ

ಮೃತ ವ್ಯಕ್ತಿ ರೇಣುಕಾಸ್ವಾಮಿ ಮೂಲತಃ ಚಿತ್ರದುರ್ಗದವನು. ಈತ ಬೆಸ್ಕಾಂ ನಿವೃತ್ತ ನೌಕರನ ಮಗ. ಅಪೋಲೋ ಮೆಡಿಕಲ್‌ನಲ್ಲಿ ಕೆಲಸ ಮಾಡುತ್ತಿದ್ದನು. ಈತ ಕೂಡ ನಟ ದರ್ಶನ್ ಅಭಿಮಾನಿ.

ಈತನ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ರಾಘವೇಂದ್ರ, ವಿನಯ್ ಎಂಬುವವರನ್ನು ಸಹ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಅಧಿಕಾರಿಗಳ ವಿರುದ್ಧ ದಾಖಲೆಗಳಿದ್ದರೆ ಕಾನೂನು ಹೋರಾಟ ನಡೆಸಲಿ ಮುಖಂಡರ ಅಗ್ರಹ

ಜಿಲ್ಲಾಧಿಕಾರಿ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಿರುದ್ಧ ಯಾವುದೇ...

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...