ಎಚ್‌ಡಿಕೆ ವಿರುದ್ಧ ನಟ ದರ್ಶನ್ ಮಹಿಳಾ ಅಭಿಮಾನಿ ನಿಂದನೆ; ದೂರು ದಾಖಲು

Date:

ಕೊಲೆ ಆರೋಪದಲ್ಲಿ ನಟ ದರ್ಶನ್ ಪೊಲೀಸ್‌ ಕಸ್ಟಡಿಯಲ್ಲಿದ್ದಾರೆ. ಅವರ ಮಹಿಳಾ ಅಭಿಮಾನಿಯೊಬ್ಬರು ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಅವಮಾನಿಸಿದ್ದು, ಆಕೆಯ ವಿರುದ್ಧ ದೂರು ದಾಖಲಾಗಿದೆ. ಮಂಡ್ಯ ಜಿಲ್ಲೆಯ ಕೆ.ಆರ್‌ ಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಜೆಡಿಎಸ್‌ ಮುಖಂಡರು ದೂರು ದಾಖಲಿಸಿದ್ದಾರೆ.

- Advertisement -

ಕೊಲೆ ಆರೋಪಿ ನಟ ದರ್ಶನ್ ಅವರ ಅಭಿಮಾನಿ ಮಂಗಳಾ ಎಂಬುವವರ ವಿರುದ್ಧ ದೂರು ದಾಖಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಒತ್ತಾಯಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮಂಗಳಾ ಅವರು ಸಾಮಾಜಿಕ ಜಾಲತಾಣದಲ್ಲಿ ಎಚ್‌.ಡಿ ಕುಮಾರಸ್ವಾಮಿ ವಿರುದ್ದ ಏಕವಚನದಲ್ಲಿ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ್ದಾರೆ ಎಂದು ಕೆ.ಆರ್‌ ಪೇಟೆಯ ಜೆಡಿಎಸ್‌ ಮುಖಂಡ ಜಾನಿಕೀರಾಮ್ ದೂರು ದಾಖಲಿಸಿದ್ದಾರೆ.

“ದರ್ಶನ್ ವಿರುದ್ಧ ಕೊಲೆ ಅಪರಾಧ ಬರುವಂತೆ ಕುಮಾರಸ್ವಾಮಿ ಮಾಡಿದ್ದಾನೆ. ದುಡ್ಡು ಕೊಟ್ಟು ದರ್ಶನ್ ವಿರುದ್ಧ ಧಿಕ್ಕಾರ ಕೂಗಿಸಿದ್ದಾನೆ” ಎಂದು ಆರೋಪಿಸಿ ಮಂಗಾಳ ತಮ್ಮ ಸೋಶಿಯಲ್ ಮೀಡಿಯಾ ಖಾತೆಯಲ್ಲಿ ವಿಡಿಯೋವನ್ನು ಹಂಚಿಕೊಂಡಿದ್ದರು.

“ಮಂಡ್ಯದಲ್ಲಿ ಸ್ಪರ್ಧಿಸೋಕೆ ಸುಮಲತಾ ನಿನಗೆ ಚಾನ್ಸ್ ಕೊಟ್ಟಿರೋದು. ನೀನು ಡಿ ಬಾಸ್ ವಿರುದ್ದ ಸ್ಕೆಚ್ ಆಕ್ತಿಯಾ, ಸುಮಲತಾ‌ರಿಂದ ಭಿಕ್ಷೆ ಹಾಕಿಸಿಕೊಂಡ ಮಗ ನೀನು” ಎಂದು ಏಕವಚನದಲ್ಲಿ ಮಂಗಳಾ ನಿಂದಿಸಿದ್ದಾರೆ.

ಮಂಗಳ ವಿರುದ್ಧ ಮಂಡ್ಯ ನಗರದಲ್ಲಿಯೂ ದೂರು ದಾಖಲಾಗಿದೆ. ಮಂಡ್ಯ ನಗರದ ಸೈಬರ್ ಪೊಲೀಸ್ ಠಾಣೆಯಲ್ಲಿ ಪಕ್ಷದ ಜಿಲ್ಲಾ ವಕ್ತಾರ ರಘುನಂದನ್ ಎಂ.ಎಸ್ ದೂರು ದಾಖಲಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ದರ್ಶನ್ ಪ್ರಕರಣ | ಮೊಬೈಲ್‌ಗಾಗಿ ಪೌರಕಾರ್ಮಿಕರನ್ನು ರಾಜಕಾಲುವೆಗೆ ಇಳಿಸಿದ ಪೊಲೀಸರು; ದಸಂಸ ಖಂಡನೆ

ಈ ಪ್ರಕರಣಕ್ಕೂ ಕುಮಾರಸ್ವಾಮಿ ಅವರಿಗೂ ಯಾವುದೇ ಸಂಬಂಧವಿಲ್ಲ. ಆದರೂ ಅನಾವಶ್ಯಕವಾಗಿ ಈ ಪ್ರಕರಣದಲ್ಲಿ ಕುಮಾರಸ್ವಾಮಿ ಹೆಸರನ್ನು ಎಳೆದು ತಂದು ಸಾಮಾಜಿಕ ಜಾಲತಾಣಗಳಲ್ಲಿ ಬಾಯಿಗೆ ಬಂದಂತೆ ಬೈದು ಅವಮಾನ ಮಾಡಿದ್ದಾರೆ. ಇದರಿಂದ ಜೆಡಿಎಸ್ ಕಾರ್ಯಕರ್ತರು, ಮುಖಂಡರಿಗೆ ನೋವಾಗಿದೆ. ಹಾಗಾಗಿ, ವಿಡಿಯೋ ವೈರಲ್ ಆಗಿರುವುದರಿಂದ ಮಂಗಳ ಮತ್ತು ಅವರಿಗೆ ಸಂಬಂಧಿಸಿದ ಸಾಮಾಜಿಕ ಜಾಲತಾಣದ ಖಾತೆಗಳ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಜೆಡಿಎಸ್ ಕಾರ್ಯಕರ್ತರು ದೂರಿನಲ್ಲಿ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...